Homeಚಳವಳಿರೈತರ ಗುಣ ಅವಳಡಿಸಿಕೊಳ್ಳೋಣ: ತೇಜಸ್ವಿ ಓದು ಅಭಿಯಾನದಲ್ಲಿ ಡಾ. ನರೇಂದ್ರ ರೈ ದೇರ್ಲ ಕರೆ

ರೈತರ ಗುಣ ಅವಳಡಿಸಿಕೊಳ್ಳೋಣ: ತೇಜಸ್ವಿ ಓದು ಅಭಿಯಾನದಲ್ಲಿ ಡಾ. ನರೇಂದ್ರ ರೈ ದೇರ್ಲ ಕರೆ

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ರೈತರ ಹೋರಾಟವು ಕೇವಲ ರೈತರ ಅಸ್ತಿತ್ವದ ಪ್ರಶ್ನೆಯಲ್ಲ ಇದು ಭೂಮಿಯ ಅಸ್ತಿತ್ವದ ಪ್ರಶ್ನೆ ಎಂದು ಪ್ರಾಧ್ಯಾಪಕ, ಲೇಖಕ ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟರು.

ಕೋಶ ಓದು ದೇಶ ನೋಡು ಬಳಗ, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ (ರಿ), ಸಹಮತ, ಸಹಯಾನದ ಸಹಭಾಗಿತ್ವದಲ್ಲಿ ಕೊಟ್ಟಿಗೆಹಾರದ ತೇಜಸ್ವಿ ಪ್ರತಿಷ್ಠಾನದಲ್ಲಿ ನಡೆದ ‘ತೇಜಸ್ವಿ ಓದು’ ಅಭಿಯಾನದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ರೈತ ಗುಣವಿರುವ ಕೊನೆಯ ತಲೆಮಾರು ಇದೆ ಎಂಬುದು ನನ್ನ ಭಾವನೆ. ನಾವು ರೈತರ ಗುಣ ಅವಳಡಿಸಿಕೊಳ್ಳಬೇಕಾದರೆ ನೇಗಿಲು ಹಿಡಿದು, ಹೊಲ ಹೊತ್ತು ಜೀವನ ನಡೆಸಬೇಕಾಗಿಲ್ಲ. ರೈತರ ದಾರಿಯ ಅನ್ವೇಷಣೆಯೇ ರೈತ ಗುಣ ಎಂದರು.

ಮುಖದ ಎದುರು ಮುಖ ಕೊಟ್ಟು ಮಾತನಾಡಲಾಗದ, ಸತ್ಯವನ್ನು ಸುಳ್ಳಾಗಿಸುವ, ಸುಳ್ಳನ್ನು ಸತ್ಯವಾಗಿಸುವ ಈ ಕಾಲದಲ್ಲಿ ಓದುವವರು ಇದ್ದಾರೆ, ಅದರಲ್ಲೂ ತೇಜಸ್ವಿಯವರನ್ನು ಓದುವ ಯುವಪೀಳಿಗೆಯಿದೆ ಎಂಬುದು ಸಂತಸದ ವಿಚಾರ ಎಂದು ಹರ್ಷ ವ್ಯಕ್ತಪಡಿಸಿದರು.

ತೇಜಸ್ವಿಯವರು ಇಲ್ಲದ ಲೋಕದಲ್ಲಿ ನಾನು ಇರಲಾರೆ ಎಂಬ ಅನಂತಮೂರ್ತಿಯವರ ಮಾತನ್ನು ನೆನಪಿಸಿಕೊಂಡ ಅವರು, ಪ್ರಸ್ತುತ ಅನಂತಮೂರ್ತಿ, ಲಂಕೇಶ್, ಸುಬ್ಬಣ್ಣ, ರಾಮ್‍ದಾಸ್, ತೇಜಸ್ವಿಯವರಂತಹ ಯುವ ಪೀಳಿಗೆಯನ್ನು ತಿದ್ದುವ, ರಿಪೇರಿ ಮಾಡುವ ಸಂಸ್ಕೃತಿ ಇಲ್ಲದೆ ನಮ್ಮ ಪ್ರಶ್ನೆ, ತಕರಾರು ಇಂಗಿ ಹೋಗುತ್ತಿದೆ ಎಂದರು.

ನಾವೀಗ ನಮ್ಮ ದೇಶದಲ್ಲಿ ಎಷ್ಟು ಅಣು ಬಾಂಬ್‍ಗಳಿವೆ, ಎಷ್ಟು ಯುದ್ಧ ವಿಮಾನಗಳಿವೆ. ಬೇರೆ ದೇಶದಲ್ಲಿ ಎಷ್ಟಿವೆ ಎಂಬುದನ್ನು ಲೆಕ್ಕ ಹಾಕಿಕೊಂಡು ಖುಷಿ ಪಡುತ್ತೇವೆ. ಆದರೆ, ನಾವು ನಮ್ಮ ಭೂಮಿಗೆ ಬೇಕಾದಷ್ಟು ನೀರು, ಆಮ್ಲಜನಕ, ಗಾಳಿ ಇದೆಯೇ ಎಂಬುದರ ಚಿಂತನೆ ನಡೆಸಬೇಕಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕೋಶ ಓದು ದೇಶ ನೋಡು ಬಳಗದ ಮುನೀರ್ ಕಾಟಿಪಳ್ಳ, “ಯುವ ತಲೆಮಾರು ಓದಿನಿಂದ ವಿಮುಖ ಹೊಂದಿ ಸಾಮಾಜಿಕ ಜಾಲತಾಣದ ವಿಚಾರವನ್ನೇ ತಲೆಗೆ ತುಂಬಿಕೊಳ್ಳುತ್ತಿದ್ದಾರೆ. ನಾವು ಅದೇ ಸಾಮಾಜಿಕ ಜಾಲತಾಣವನ್ನು ಬಳಸಿ ಓದು ಅಭಿಯಾನ ಆರಂಭಿಸಿದ್ದು ಯುವ ಜನರಲ್ಲಿ ಓದಿನ ಹವ್ಯಾಸ ಮೂಡಿಸುವ ಬೆಳೆಸುವ ಪ್ರಯತ್ನ ನಡೆಸುತ್ತಿದ್ದೇವೆ. ಈಗಾಗಲೇ ಈ ಓದು ಅಭಿಯಾನ ಹಲವಾರು ಜನರನ್ನು ಸೆಳೆದಿದ್ದು, ಚರ್ಚೆಗಳು ನಡೆದಿದೆ” ಎಂದರು.

ತೇಜಸ್ವಿಯವರು ಪ್ರಸ್ತುತ ನಡೆಯುತ್ತಿರುವ ಕೋಮುಸಂಘರ್ಷ ಮೊದಲಾದವುಗಳನ್ನು ತಮ್ಮ ಕೃತಿಯ ಮೂಲಕ ಈ ಹಿಂದೆಯೇ ತಿಳಿಸಿದ್ದಾರೆ. ಓದಿನಿಂದ ನಾವು ಸೈದ್ಧಾಂತಿಕ ಸ್ಪಷ್ಟತೆ ಪಡೆದು ದೇಶದ ಪ್ರಸ್ತುತ ಚಳುವಳಿಯಲ್ಲಿ ಕೈ ಜೋಡಿಸೋಣ ಎಂದರು.

ಕಾರ್ಯಕ್ರಮದಲ್ಲಿ ತೇಜಸ್ವಿಯವರ ಪತ್ನಿ ರಾಜೇಶ್ವರಿ ತೇಜಸ್ವಿ, ಲೇಖಕ ಕೆ.ಪಿ. ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಡಾ. ರಮೇಶ್, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾದ ಆರ್. ರಾಘವೇಂದ್ರ ಉಪಸ್ಥಿತರಿದ್ದರು.


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...