Homeಮುಖಪುಟಕೋಟಾ| ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಜನವರಿ ಬಳಿಕ ಒಂಬತ್ತನೇ ಪ್ರಕರಣ

ಕೋಟಾ| ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಜನವರಿ ಬಳಿಕ ಒಂಬತ್ತನೇ ಪ್ರಕರಣ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಮಂಗಳವಾರ ನಗರದ ಜವಾಹರ್ ನಗರ ಪ್ರದೇಶದ ತನ್ನ ಹಾಸ್ಟೆಲ್ ಕೋಣೆಯಲ್ಲಿ 17 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ಕಬ್ಬಿಣದ ರಾಡ್‌ಗೆ ನೇಣು ಬಿಗಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರ ಪ್ರಕಾರ, ಜನವರಿ 2025 ರಿಂದ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿಗಳ ಆತ್ಮಹತ್ಯೆ ಮಾಡಿಕೊಂಡಿರುವ ಒಂಬತ್ತನೇ ಪ್ರಕರಣ ಇದಾಗಿದೆ. ಮೃತನನ್ನು ಹರ್ಷರಾಜ್ ಶಂಕರ್ ಎಂದು ಗುರುತಿಸಲಾಗಿದೆ. ಇವರು ಬಿಹಾರದ ನಳಂದ ಜಿಲ್ಲೆಯವರು. ಕಳೆದ ವರ್ಷ ಏಪ್ರಿಲ್‌ನಿಂದ ಇಲ್ಲಿನ ಕೋಚಿಂಗ್ ಸಂಸ್ಥೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಅವರು ತಯಾರಿ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಬಾಲಕ ಒಳಗಿನಿಂದ ಬಾಗಿಲು ಹಾಕಿದ್ದಾನೆ; ಪ್ರತಿಕ್ರಿಯಿಸುತ್ತಿಲ್ಲ ಎಂದು ಹಾಸ್ಟೆಲ್ ಕೇರ್‌ಟೇಕರ್‌ಗೆ ಸಹಪಾಠಿಗಳು ತಿಳಿಸಿದ್ದರು. ನಂತರ, ಪೊಲೀಸ್ ತಂಡ ಸ್ಥಳಕ್ಕೆ ತಲುಪಿತು. ಜವಾಹರ್ ನಗರ ಎಸ್‌ಎಚ್‌ಒ ರಾಮ್ಲಕ್ಷ್ಮಣ್ ತಂಡವು ಕೋಣೆಯ ಬಾಗಿಲು ಒಡೆದಾಗ ಬಾಲಕ ಕಬ್ಬಿಣದ ರಾಡ್‌ಗೆ ನೇತಾಡುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.

ಹಾಸ್ಟೆಲ್ ಕೊಠಡಿಯಲ್ಲಿರುವ ಸೀಲಿಂಗ್ ಫ್ಯಾನ್‌ನಲ್ಲಿ ‘ಆತ್ಮಹತ್ಯೆ ವಿರೋಧಿ ಸಾಧನ’ ಅಳವಡಿಸಲಾಗಿತ್ತು. ಆದ್ದರಿಂದ, ನೀಟ್ ಆಕಾಂಕ್ಷಿ ನೇಣು ಬಿಗಿದುಕೊಳ್ಳಲು ಕಬ್ಬಿಣದ ರಾಡ್ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಿಂದ ಯಾವುದೇ ಆತ್ಮಹತ್ಯಾ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಶವವನ್ನು ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಅವರ ಪೋಷಕರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಅವರು ಹೇಳಿದರು.

ವರ್ಷದಲ್ಲಿ 9ನೇ ಆತ್ಮಹತ್ಯೆ ಪ್ರಕರಣ

ಕೋಚಿಂಗ್ ಹಬ್ ಎಂದು ಪ್ರಸಿದ್ಧವಾಗಿರುವ ನಗರದಲ್ಲಿ ಈ ವರ್ಷ ನಡೆದ ಒಂಬತ್ತನೇ ವಿದ್ಯಾರ್ಥಿ ಆತ್ಮಹತ್ಯೆ ಇದಾಗಿದೆ ಎಂಬುದನ್ನು ಇಲ್ಲಿ ಗಮನಿಸಬೇಕು. ಆರು ಜನ ಕೋಚಿಂಗ್ ವಿದ್ಯಾರ್ಥಿಗಳು, ಐದು ಜನ ಜೆಇಇ, ಒಬ್ಬ ನೀಟ್ ವಿದ್ಯಾರ್ಥಿ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡರು. 2024 ರಲ್ಲಿ ಕೋಟಾದ ತರಬೇತಿ ಪಡೆಯುತ್ತಿದ್ದ  17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು.

ವೈದ್ಯಕೀಯ, ಎಂಜಿನಿಯರಿಂಗ್ ಆಕಾಂಕ್ಷಿಗಳ ಕೇಂದ್ರ

ಜಿಲ್ಲಾಡಳಿತ ಅಧಿಕಾರಿಗಳ ಪ್ರಕಾರ, ವಾರ್ಷಿಕವಾಗಿ ಅಂದಾಜು 10,000 ಕೋಟಿ ರೂ. ಮೌಲ್ಯದ ಪರೀಕ್ಷಾ-ಪೂರ್ವಸಿದ್ಧತಾ ಉದ್ಯಮದ ಕೇಂದ್ರಬಿಂದುವಾಗಿ ಕೋಟಾ ತನ್ನನ್ನು ತಾನು ದೃಢವಾಗಿ ಸ್ಥಾಪಿಸಿಕೊಂಡಿದೆ. ಪ್ರತಿ ವರ್ಷ, ದೇಶಾದ್ಯಂತ ಸಾವಿರಾರು ವಿದ್ಯಾರ್ಥಿಗಳು ಹತ್ತನೇ ತರಗತಿ ಮುಗಿಸಿದ ನಂತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಈ ಕೋಚಿಂಗ್ ಹಬ್‌ಗೆ ಸೇರುತ್ತಾರೆ. ಅವರು ನಗರದ ಪ್ರಾಬಲ್ಯ ಹೊಂದಿರುವ ವಸತಿ ತರಬೇತಿ ಸಂಸ್ಥೆಗಳಲ್ಲಿ ದಾಖಲಾಗುತ್ತಾರೆ. ಕಠಿಣ ತಯಾರಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.

 

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಹನಿಟ್ರ್ಯಾಪ್ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಪಿಐಎಲ್‌ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...