Homeಕರ್ನಾಟಕಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

ಕೋಟಿಗೊಬ್ಬ-3 ಚಿತ್ರ ಪ್ರದರ್ಶನ ವಿಳಂಬ: ಕ್ಷಮೆ ಕೇಳಿದ ನಟ ಸುದೀಪ್

- Advertisement -
- Advertisement -

ನಟ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಗುರುವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಕಾರಣಾಂತರದಿಂದ ಚಿತ್ರ ಬಿಡುಗಡೆಯಾಗದಿರುವುದಕ್ಕೆ ಸುದೀಪ್ ಸಿನಿ ಪ್ರೇಕ್ಷಕರಲ್ಲಿ ಕ್ಷಮೆ ಕೇಳಿದ್ದಾರೆ.

ದುನಿಯಾ ವಿಜಯ್‌ ನಿರ್ದೇಶಿಸಿ, ನಟಿಸಿರುವ ಸಲಗ ಹಾಗೂ ಕಿಚ್ಚ ಸುದೀಪ್‌ ನಟನೆಯ ಕೋಟಿಗೊಬ್ಬ-3 ಚಿತ್ರಗಳು ಒಂದೇ ದಿನ ಪರದೆಗೆ ಬರಲು ಸಿದ್ಧವಾಗಿದ್ದವು. ಎರಡು ವರ್ಷಗಳ ಬಳಿಕ ಪರದೆಯ ಮೇಲೆ ಸುದೀಪ್ ಅವರನ್ನು ಕಾಣಲು ಬಂದಿದ್ದ ಅಭಿಮಾನಿಗಳು ವಪಸ್ ತೆರಳಿದ್ದಾರೆ.  ಬೆಳಗ್ಗೆ 6 ಗಂಟೆಯಿಂದ ಅಭಿಮಾನಿಗಳು ಚಿತ್ರಮಂದಿರಗಳ ಮುಂದೆ ಕಾದಿದ್ದು, ಭಾರಿ ನಿರಾಸೆ ಅನುಭವಿಸಿದ್ದರು.

ಇದಕ್ಕೆ ಟ್ವೀಟ್‌ನಲ್ಲಿ ಕ್ಷಮೆ ಕೇಳಿರುವ ನಟ ಸುದೀಪ್, “ಕೋಟಿಗೊಬ್ಬ 3 ವೀಕ್ಷಿಸಲು ಚಿತ್ರಮಂದಿರಗಳಿಗೆ ಬಂದಿರುವ, ಬರುತ್ತಿರುವವರಿಗೆ, ಚಿತ್ರದ ಪ್ರದರ್ಶನ ತಡವಾಗುತ್ತಿರುವ ಬಗ್ಗೆ ತಿಳಿಸಲು ವಿಶಾದಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್‌

“ಈ ಸಮಸ್ಯೆಗೆ ಕಾರಣಕರ್ತರಾದವರ ಪರವಾಗಿ ನಾನು ವೈಯಕ್ತಿಕವಾಗಿ ಕ್ಷಮೆ ಯಾಚಿಸುತ್ತೇನೆ. ಇದರಲ್ಲಿ ಚಿತ್ರಮಂದಿರಗಳಿಂದ ಯಾವುದೇ ರೀತಿಯ ತಪ್ಪು ನಡೆದಿಲ್ಲ” ಎಂದಿದ್ದಾರೆ.

“ನಾನೂ ಕೂಡ ನನ್ನ ಚಿತ್ರವೊಂದು ಎರಡು ವರ್ಷಗಳ ನಂತರ ಬಿಡುಗಡೆ ಆಗುತ್ತಿರುವ ಬಗ್ಗೆ, ನಿಮ್ಮಷ್ಟೇ ಉತ್ಸುಕನಾಗಿದ್ದೆ. ನಿಮ್ಮೆಲ್ಲರ ಪ್ರೀತಿ ಹಾಗೂ ತಾಳ್ಮೆಯೇ ನನ್ನ ಅತಿ ದೊಡ್ಡ ಶಕ್ತಿ. ಆದಷ್ಟು ಬೇಗ ಚಿತ್ರದ ಪ್ರದರ್ಶನದ ಬಗ್ಗೆ ಮಾಹಿತಿ ಕೊಡುತ್ತೇನೆ ಹಾಗೂ ಮುಂದಿನ ನನ್ನ ಚಿತ್ರಗಳಿಗೆ ಹೀಗಾಗದ ಹಾಗೆ ನೋಡಿಕೊಳ್ಳುತ್ತೇನೆ. ಅಲ್ಲಿಯವರೆಗು ಯಾವುದೇ ರೀತಿಯ ಹಾನಿಗೆ ಕಾರಣರಾಗದೆ, ಶಾಂತಿಯನ್ನು ಕಾಪಾಡಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ” ಎಂದು ಸುದೀಪ್‌ ಟ್ವೀಟ್ ಮಾಡಿದ್ದಾರೆ.

ಕೋಟಿಗೊಬ್ಬ-3 ಚಿತ್ರದ ಮೂಲಕ ಮತ್ತೊಬ್ಬ ಹೊಸ ನಿರ್ದೇಶಕನಿಗೆ ಮಣೆ ಹಾಕಿದ ಕಿಚ್ಚ! – ಅರಳಿ ಕಟ್ಟೆ

ನಾಳೆ ಬೆಳಗ್ಗೆ ‘ಕೋಟಿಗೊಬ್ಬ- 3’ ಚಿತ್ರ ರಿಲೀಸ್ ಆಗಲಿದೆ ಎಂದು ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು  ಮಾಹಿತಿ ನೀಡಿದ್ದಾರೆ.

“ಕೆಲವು ವಿತರಕರ ಷಡ್ಯಂತ್ರದಿಂದ ಇಂದು ಚಿತ್ರ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು ಎಂದು ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಡಿಎ ಜೊತೆ ಯಾವುದೇ ಮೈತ್ರಿ ಇಲ್ಲ: ಓವೈಸಿ

ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಭಾರತದ ಅತ್ಯಂತ ಶ್ರೀಮಂತ ರಾಜ್ಯವಾದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ...

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ...

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...