ನಟ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಗುರುವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಕಾರಣಾಂತರದಿಂದ ಚಿತ್ರ ಬಿಡುಗಡೆಯಾಗದಿರುವುದಕ್ಕೆ ಸುದೀಪ್ ಸಿನಿ ಪ್ರೇಕ್ಷಕರಲ್ಲಿ ಕ್ಷಮೆ ಕೇಳಿದ್ದಾರೆ.
ದುನಿಯಾ ವಿಜಯ್ ನಿರ್ದೇಶಿಸಿ, ನಟಿಸಿರುವ ಸಲಗ ಹಾಗೂ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-3 ಚಿತ್ರಗಳು ಒಂದೇ ದಿನ ಪರದೆಗೆ ಬರಲು ಸಿದ್ಧವಾಗಿದ್ದವು. ಎರಡು ವರ್ಷಗಳ ಬಳಿಕ ಪರದೆಯ ಮೇಲೆ ಸುದೀಪ್ ಅವರನ್ನು ಕಾಣಲು ಬಂದಿದ್ದ ಅಭಿಮಾನಿಗಳು ವಪಸ್ ತೆರಳಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಅಭಿಮಾನಿಗಳು ಚಿತ್ರಮಂದಿರಗಳ ಮುಂದೆ ಕಾದಿದ್ದು, ಭಾರಿ ನಿರಾಸೆ ಅನುಭವಿಸಿದ್ದರು.
ಇದಕ್ಕೆ ಟ್ವೀಟ್‌ನಲ್ಲಿ ಕ್ಷಮೆ ಕೇಳಿರುವ ನಟ ಸುದೀಪ್, “ಕೋಟಿಗೊಬ್ಬ 3 ವೀಕ್ಷಿಸಲು ಚಿತ್ರಮಂದಿರಗಳಿಗೆ ಬಂದಿರುವ, ಬರುತ್ತಿರುವವರಿಗೆ, ಚಿತ್ರದ ಪ್ರದರ್ಶನ ತಡವಾಗುತ್ತಿರುವ ಬಗ್ಗೆ ತಿಳಿಸಲು ವಿಶಾದಿಸುತ್ತೇನೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಚರಂಡಿ ಕ್ಲೀನ್ ಮಾಡುವವರ ಪಾತ್ರ ಮಾಡಬೇಕು, ಸಮಾಜದಲ್ಲಿ ಕ್ಲೀನ್ ಮಾಡುವುದು ಬಹಳಷ್ಟಿದೆ: ನಟ ಶಿವರಾಜ್ ಕುಮಾರ್
— Kichcha Sudeepa (@KicchaSudeep) October 14, 2021
“ಈ ಸಮಸ್ಯೆಗೆ ಕಾರಣಕರ್ತರಾದವರ ಪರವಾಗಿ ನಾನು ವೈಯಕ್ತಿಕವಾಗಿ ಕ್ಷಮೆ ಯಾಚಿಸುತ್ತೇನೆ. ಇದರಲ್ಲಿ ಚಿತ್ರಮಂದಿರಗಳಿಂದ ಯಾವುದೇ ರೀತಿಯ ತಪ್ಪು ನಡೆದಿಲ್ಲ” ಎಂದಿದ್ದಾರೆ.
“ನಾನೂ ಕೂಡ ನನ್ನ ಚಿತ್ರವೊಂದು ಎರಡು ವರ್ಷಗಳ ನಂತರ ಬಿಡುಗಡೆ ಆಗುತ್ತಿರುವ ಬಗ್ಗೆ, ನಿಮ್ಮಷ್ಟೇ ಉತ್ಸುಕನಾಗಿದ್ದೆ. ನಿಮ್ಮೆಲ್ಲರ ಪ್ರೀತಿ ಹಾಗೂ ತಾಳ್ಮೆಯೇ ನನ್ನ ಅತಿ ದೊಡ್ಡ ಶಕ್ತಿ. ಆದಷ್ಟು ಬೇಗ ಚಿತ್ರದ ಪ್ರದರ್ಶನದ ಬಗ್ಗೆ ಮಾಹಿತಿ ಕೊಡುತ್ತೇನೆ ಹಾಗೂ ಮುಂದಿನ ನನ್ನ ಚಿತ್ರಗಳಿಗೆ ಹೀಗಾಗದ ಹಾಗೆ ನೋಡಿಕೊಳ್ಳುತ್ತೇನೆ. ಅಲ್ಲಿಯವರೆಗು ಯಾವುದೇ ರೀತಿಯ ಹಾನಿಗೆ ಕಾರಣರಾಗದೆ, ಶಾಂತಿಯನ್ನು ಕಾಪಾಡಿಕೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇನೆ” ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
ನಾಳೆ ಬೆಳಗ್ಗೆ ‘ಕೋಟಿಗೊಬ್ಬ- 3’ ಚಿತ್ರ ರಿಲೀಸ್ ಆಗಲಿದೆ ಎಂದು ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ಮಾಹಿತಿ ನೀಡಿದ್ದಾರೆ.
“ಕೆಲವು ವಿತರಕರ ಷಡ್ಯಂತ್ರದಿಂದ ಇಂದು ಚಿತ್ರ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಾಳೆ ಮುಂಜಾನೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಶೋ ಆರಂಭವಾಗಲಿದೆ. ಈ ಹಿಂದೆಯೂ ಸಾಕಷ್ಟು ಷಡ್ಯಂತರ ಮಾಡಿದ್ದರು. ಈಗಲೂ ಹಾಗೇ ಆಗಿದೆ. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು ಎಂದು ಸಿನಿಮಾದ ನಿರ್ಮಾಪಕ ಸೂರಪ್ಪ ಬಾಬು ಮನವಿ ಮಾಡಿದ್ದಾರೆ.
Requesting all #Sudeepians to calm down and understand the situation…??#Kotigobba3 releasing even more grandly tomorrow.. ??
Fans shows starts from @ 6 AM… ✌️Enjoy the show.. ?@KicchaSudeep ❤️ @aanandaaudio@Sai_Eveready @kotigobba3movie
? #Kotigobba3FromTomorrow ? pic.twitter.com/YdlF8pNmHh— KICCHA SUDEEP FANS (A)® (@KSFA_Official) October 14, 2021
ಇದನ್ನೂ ಓದಿ: ಚಿತ್ರರಂಗದಲ್ಲಿ ಸ್ವಜನ ಪಕ್ಷಪಾತಕ್ಕಿಂತ ಜನಾಂಗೀಯತೆ ಹೆಚ್ಚಾಗಿದೆ: ನಟ ನವಾಜುದ್ದೀನ್ ಸಿದ್ದಿಕಿ