Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಜಾತಿ ಪ್ರಮಾಣ ಪತ್ರದ ಸುಪ್ರೀಂ ತೀರ್ಪಿನಿಂದ ಮತ್ತೆ ಅತಂತ್ರರಾದ ಕೊತ್ತೂರು ಮಂಜುನಾಥ್: ಚಿಕ್ಕಬಳ್ಳಾಪುರದತ್ತ ಚಿತ್ತ?

ಜಾತಿ ಪ್ರಮಾಣ ಪತ್ರದ ಸುಪ್ರೀಂ ತೀರ್ಪಿನಿಂದ ಮತ್ತೆ ಅತಂತ್ರರಾದ ಕೊತ್ತೂರು ಮಂಜುನಾಥ್: ಚಿಕ್ಕಬಳ್ಳಾಪುರದತ್ತ ಚಿತ್ತ?

- Advertisement -
- Advertisement -

ಅನರ್ಹಗೊಂಡ ಮುಳಬಾಗಿಲು ಶಾಸಕ ಕೊತ್ತೂರು ಮಂಜುನಾಥ್ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ‘ಬೈರಾಗಿ’ ಜಾತಿಗೆ ಸೇರಿದವರು ಎಂದಿದ್ದ ಜಾತಿ ಪರಿಶೀಲನಾ ಸಮಿತಿಯ ನಿರ್ಣಯದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ರವರ ಪರಿಶಿಷ್ಟ ಜಾತಿ ಪ್ರಮಾಣ ಪತ್ರವು ಅಸಿಂಧು ಎಂದಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಅವರ ಮನವಿಯನ್ನು ಆಲಿಸಿದ ನ್ಯಾಯಾಲಯವು ಈ ವಿಷಯದಲ್ಲಿ ಒಳಗೊಂಡಿರುವ ಸಮಸ್ಯೆಯನ್ನು “ಸಂಕೀರ್ಣ” ಎಂದು ಗಮನಿಸಿದೆ. “ಎರಡು ಜಾತಿಗಳ ವೃತ್ತಿ, ಪದ್ಧತಿ, ಆಚಾರ-ವಿಚಾರಗಳ ಸಂಗತಿಗಳಿಂದ ಸಂಕೀರ್ಣತೆ ಹುಟ್ಟುತ್ತದೆ. ಬುಡಗ ಜಂಗಮ ಜಾತಿಗೆ ಸೇರಿದ ವ್ಯಕ್ತಿಗಳು ರಾಜ್ಯದ ವಿವಿಧ ಭಾಗಗಳಲ್ಲಿ ‘ಮಲ ಸನ್ಯಾಸಿ’, ‘ಬೈರಾಗಿ’ ಇತ್ಯಾದಿ ಇಂತಹ ಹೆಸರುಗಳಿಂದ ಕರೆಯಲ್ಪಡುತ್ತಾರೆ ಎಂದು ಕೋಲಾರ ಗೆಜೆಟಿಯರ್ ಹೇಳಿರುವುದರಿಂದ ಈ ವಿಚಾರದಲ್ಲಿ ಸಂಕೀರ್ಣತೆ ಉಂಟಾಗುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ವಿಕ್ರಮ್ ನಾಥ್ ಅವರ ಪೀಠವು ಅರ್ಜಿದಾರರು ರಾಜ್ಯ ಹೈಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ವಿಕಾಸ್ ಸಿಂಗ್ ಮತ್ತು ಪ್ರತಿವಾದಿಗಳ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ವಕೀಲ ಸಂಜಯ್ ಎಂ ನುಲಿ ಪ್ರತಿನಿಧಿಸಿದ್ದರು.

ಕೊತ್ತೂರು ಮುಂಜುನಾಥ್ ಜಾತಿ ಪ್ರಮಾಣ ಪತ್ರ ವಿವಾದ

2013ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೊತ್ತೂರು ಮಂಜುನಾಥ್‌ರವರು ಜೆಡಿಎಸ್ ಪಕ್ಷದ ಮುನಿನಂಜಪ್ಪರನ್ನು 33,734 ಮತಗಳ ಭಾರೀ ಅಂತರದಿಂದ ಸೋಲಿಸಿ ಶಾಸಕರಾಗಿ ಆಯ್ಕೆಯಾದರು. 2018ರ ಚುನಾವಣೆ ವೇಳೆಗೆ ಅವರು ಕಾಂಗ್ರೆಸ್ ಪಕ್ಷ ಸೇರಿದ್ದರು. ಬಿ ಫಾರಂ ಪಡೆದು ನಾಮಪತ್ರ ಸಹ ಸಲ್ಲಿಸಿದ್ದರು. ಅಷ್ಟರಲ್ಲಿ ಬೈರಾಗಿ ಎಂಬ ಹಿಂದುಳಿದ ಜಾತಿಯ ಕೊತ್ತೂರು ಮಂಜುನಾಥ್‌ರವರು ಬುಡಗ ಜಂಗಮ ಜಾತಿ ಹೆಸರಿನಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪಡೆದಿದ್ದಾರೆ ಎಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಹೈಕೋರ್ಟ್ ಆ ದೂರನ್ನು ಪರಿಗಣಿಸಿ ಅವರ ಪ.ಜಾ ಪ್ರಮಾಣ ಪತ್ರವನ್ನು ಅಸಿಂಧು ಎಂದು ಘೋಷಿಸಿತು. ಹಾಗಾಗಿ ನಾಮಪತ್ರ ಪರಿಶೀಲನೆ ವೇಳೆ ಚುನಾವಣಾ ಅಧಿಕಾರಿಗಳು ಕೊತ್ತೂರು ಮಂಜುನಾಥ್‌ರವರ ನಾಮಪತ್ರವನ್ನು ತಿರಸ್ಕರಿಸಿದರು. ಇದರಿಂದ ಶಾಕ್‌ಗೆ ಒಳಗಾದ ಅವರು ಚುನಾವಣೆಯಿಂದ ಅನಿವಾರ್ಯವಾಗಿ ಹಿಂದೆ ಸರಿಯಬೇಕಾಗಿ ಬಂತು. ಕಣದಲ್ಲಿ ಇಲ್ಲದ ಕಾರಣ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಚ್.ನಾಗೇಶ್‌ರವರಿಗೆ ಬೆಂಬಲ ಘೋಷಿಸಿ ಗೆಲ್ಲಿಸಬೇಕಾಯಿತು.

ಆಕಸ್ಮಿಕವಾಗಿ ಶಾಸಕರಾದ ಎಚ್.ನಾಗೇಶ್ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಅಬಕಾರಿಯಂತಹ ಮಹತ್ವ ಖಾತೆ ಅವರಿಗೆ ಸಿಕ್ಕಿತ್ತು. ಆನಂತರ ಸಣ್ಣ ಕೈಗಾರಿಕೆ ಸಚಿವ ಸ್ಥಾನ ಸಿಕ್ಕಿತ್ತು. ಆದರೂ ಅತೃಪ್ತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ತೆರಳಿದ್ದರು. ಆನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿ ಮಂತ್ರಿಯಾದರು. ಬಿಜೆಪಿಯು ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಅದಕ್ಕೂ ರಾಜೀನಾಮೆ ನೀಡಿದ ಅವರು ಸದ್ಯ ಅಧಿಕೃತವಾಗಿ ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ನಡಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.

ಮತ್ತೆ ಅತಂತ್ರರಾದ ಕೊತ್ತೂರು ಮಂಜುನಾಥ್: ಚಿಕ್ಕಬಳ್ಳಾಪುರದತ್ತ ಚಿತ್ತ?

ಈಗ ಕೊತ್ತೂರು ಮಂಜುನಾಥ್‌ರವರ ಜಾತಿ ಪ್ರಮಾಣ ಪತ್ರದ ವಿವಾದ ಬಗೆಹರಿಯದ ಕಾರಣ ಅವರು ಪ.ಜಾ ಮೀಸಲು ಕ್ಷೇತ್ರವಾದ ಮುಳಬಾಗಿಲಿನಲ್ಲಿ ಸ್ಪರ್ಧಿಸುವಂತಿಲ್ಲ. ಸಾಮಾನ್ಯ ಕ್ಷೇತ್ರ ಕೋಲಾರಕ್ಕೆ ಸಿದ್ದರಾಮಯ್ಯನವರು ಬಂದಿರುವುದರಿಂದ ಅಲ್ಲಿಗೂ ಹೋಗಲಾಗದೆ ಅಂತಂತ್ರರಾಗಿದ್ದಾರೆ. ಹಾಗಾಗಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲು ಮನಸ್ಸು ಮಾಡಿದ್ದಾರೆ.

ಕೊತ್ತೂರು ಮಂಜುನಾಥ್ ಮತ್ತು ಚಿಂತಾಮಣಿಯ ಮಾಜಿ ಶಾಸಕ ಡಾ.ಸುಧಾಕರ್ ಜೊತೆಯಾಗಿ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು. ಅವರಿಬ್ಬರಿಗೂ ಚಿಕ್ಕಬಳ್ಳಾಪುರದ ಹಾಲಿ ಶಾಸಕ ಮತ್ತು ಸಚಿವ ಡಾ.ಕೆ ಸುಧಾಕರ್ ಸಮಾನ ಶತ್ರುವಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ರನ್ನು ಎದುರಿಸುವ ಪ್ರಬಲ ಕಾಂಗ್ರೆಸ್ ಅಭ್ಯರ್ಥಿ ಕಾಣುತ್ತಿಲ್ಲ. ಇತ್ತ ಮಂಜುನಾಥ್‌ರವರಿಗೂ ಕೋಲಾರ ಜಿಲ್ಲೆಯಲ್ಲಿ ಕ್ಷೇತ್ರವಿಲ್ಲದ ಕಾರಣ ಚುನಾವಣೆಯೊಳಗೆ ತಮ್ಮ ಜಾತಿ ಪ್ರಮಾಣ ಪತ್ರ ಬಗೆಹರಿಯದಿದ್ದರೆ ಅವರು ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಪೈಪೋಟಿ ಆರಂಭವಾಗಿದೆ. ಈಗಾಗಲೇ ಕೆಪಿಸಿಸಿ ಸದಸ್ಯರಾದ ವಿನಯ್ ಶ್ಯಾಮ್, ಯಲುವಹಳ್ಳಿ ಎನ್ ರಮೇಶ್, ಕೆ ಎನ್ ರಘು, ಮಾಜಿ ಜಿ.ಪಂ ಸದಸ್ಯ ಗಂಗರೇಕಾಲುವೆ ನಾರಾಯಣಸ್ವಾಮಿ ಮತ್ತು ಲಾಯರ್ ನಾರಾಯಣಸ್ವಾಮಿ ಟಿಕೆಟ್‌ಗಾಗಿ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಬಿಜೆಪಿಯ ಸಚಿವ ಸುಧಾಕರ್‌ರನ್ನು ಹಣಬಲ ಸೇರಿದಂತೆ ಎಲ್ಲಾ ರೀತಿಯಲ್ಲಿಯೂ ಎದುರಿಸಲು ಕೊತ್ತೂರು ಮಂಜುನಾಥ್‌ರವರೆ ಸೂಕ್ತ ಎಂದು ಭಾವಿಸಿರುವ ಹಲವು ಕಾಂಗ್ರೆಸ್ ಕಾರ್ಯಕರ್ತರು ಮಂಜುನಾಥ್ ಪರವಾಗಿ ಟಿಕೆಟ್‌ಗಾಗಿ ಈ ಹಿಂದೆಯೇ ಅರ್ಜಿ ಸಲ್ಲಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದ ಅಂದಾಜು ಜಾತಿವಾರು ಮತಗಳನ್ನು ನೋಡುವುದಾದರೆ ಸುಮಾರು 2.06 ಲಕ್ಷ ಮತಗಳಿರುವ ಇಲ್ಲಿ 45,000 ಒಕ್ಕಲಿಗ ಮತ್ತು ರೆಡ್ಡಿ ಸಮುದಾಯದ ಮತಗಳಿದ್ದರೆ 40,000ದಷ್ಟು ಪ.ಜಾ ಮತಗಳು ಇವೆ ಎನ್ನಲಾಗುತ್ತಿದೆ. ಬಲಿಜಿಗರು 30,000 ಮತಗಳಿದ್ದು ಮೂರನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಕುರುಬರು 20,000, ಮುಸ್ಲಿಮರು 16,000, ಪ.ಪಂ 15,000 ಮತ್ತು ಇತರ ಹಿಂದುಳಿದ ವರ್ಗದ 40,000 ಮತಗಳು ಇವೆ ಎನ್ನಲಾಗುತ್ತಿದೆ. ಸಚಿವ ಸುಧಾಕರ್ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾದರೆ ಕೊತ್ತೂರು ಮಂಜುನಾಥ್ ಇತರೆ ಹಿಂದುಳಿದ ವರ್ಗದಲ್ಲಿ ಬರುವ ಬೈರಾಗಿ ಜಾತಿಯವರಾಗುತ್ತಾರೆ. ಹಾಗೆ ನೋಡಿದರೆ ಅಹಿಂದ ಮತಗಳನ್ನು ಸೆಳೆಯಲು ಕಾಂಗ್ರೆಸ್ ಪಕ್ಷವು ಹಣಬಲ ಹೊಂದಿರುವ ಕೊತ್ತೂರು ಮಂಜುನಾಥ್‌ರನ್ನೇ ಕಣಕ್ಕಿಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಒಟ್ಟಿನಲ್ಲಿ ಚಿಕ್ಕಬಳ್ಳಾಪುರದಲ್ಲಿ ಸುಲಭವಾಗಿ ಗೆಲ್ಲುವ ನಿರೀಕ್ಷೆಯಲ್ಲಿದ್ದ ಸಚಿವ ಡಾ.ಕೆ ಸುಧಾಕರ್‌ ರವರಿಗೆ ಕೊತ್ತೂರು ಮಂಜುನಾಥ್‌ರವರ ಆಗಮನ ತಲೆ ಬಿಸಿ ಮಾಡಲಿದೆ. ಇನ್ನು ಮುಂದೆ ಚಿಕ್ಕಬಳ್ಳಾಪುರ ಕ್ಷೇತ್ರದ ರಾಜಕೀಯ ರಂಗೇರಲಿದ್ದು ಕಾಂಗ್ರೆಸ್- ಬಿಜೆಪಿ ನಡುವೆ ಸಮಾನ ಹೋರಾಟ ಕಂಡುಬರುವ ಸೂಚನೆ ನೀಡಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಚಿಕ್ಕಬಳ್ಳಾಪುರ: ಲಂಗು ಲಗಾಮಿಲ್ಲದ ಡಾ.ಕೆ ಸುಧಾಕರ್ ರಿಪಬ್ಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...