Homeಮುಖಪುಟ'ಒಂದು ರಾಷ್ಟ್ರ, ಒಂದು ಚುನಾವಣೆ’: ಸಮಿತಿ ರಚನೆ ಕಣ್ಣೊರೆಸುವ ತಂತ್ರ; ಅಧೀರ್ ರಂಜನ್ ಚೌಧರಿ

‘ಒಂದು ರಾಷ್ಟ್ರ, ಒಂದು ಚುನಾವಣೆ’: ಸಮಿತಿ ರಚನೆ ಕಣ್ಣೊರೆಸುವ ತಂತ್ರ; ಅಧೀರ್ ರಂಜನ್ ಚೌಧರಿ

- Advertisement -
- Advertisement -

‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆ ಕುರಿತ ಅಧ್ಯಯನಕ್ಕೆ ರಚಿಸಿದ ಸಮಿತಿ ಬಗ್ಗೆ ಕಣ್ಣೊರೆಸುವ ತಂತ್ರ  ಎಂದು ಕರೆದಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸಮಿತಿಯು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರ ಒಲವು ಹೊಂದಿರುವವರಿಂದ ತುಂಬಿಕೊಂಡಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ‘ಒಂದು ದೇಶ, ಒಂದು ಚುನಾವಣೆ’ ಕಲ್ಪನೆ ಕುರಿತು ಅಧ್ಯಯನ ನಡೆಸಲು ರಚಿಸಿದ 8 ಸದಸ್ಯರ ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ.

ಈ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಚೌಧರಿ, ಸಮಿತಿಯಿಂದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಿಡಲಾಗಿದೆ. ಬದಲಿಗೆ ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಸೇರಿಸಲಾಗಿದೆ. ಇದರಿಂದ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಎಂಟು ಸದಸ್ಯರ ಸಮಿತಿಯಲ್ಲಿ 7 ಮಂದಿ ಸದಸ್ಯರ ಜೊತೆ ಮೊದಲು ಸಮಾಲೋಚಿಸಿರಬಹುದು ಅಥವಾ ಇಲ್ಲದಿರಬಹುದು. ಆದರೆ ಅವರಲ್ಲಿ ಹೆಚ್ಚಿನವರು ಈ ಹಿಂದೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರವಾಗಿ ಮಾತನಾಡಿದ್ದಾರೆ. ಕೆಲವರು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸದಸ್ಯರಾಗಿದ್ದಾರೆ ಮತ್ತು ಕೆಲವರು ಪಕ್ಷದ ನಿರ್ದೇಶನವನ್ನು ಅನುಸರಿಸುವವರಾಗಿದ್ದಾರೆ. ಆದ್ದರಿಂದ ಅವರ ಅಭಿಪ್ರಾಯ ಯೋಜಿತವಾಗಿದೆ ಎಂದು ಚೌದರಿ ಹೇಳಿದ್ದಾರೆ.

ಸಮಿತಿಯ ಹಿರಿಯ ಸದಸ್ಯ ಸುಭಾಷ್ ಸಿ ಕಶ್ಯಪ್ ಅವರಿಗೆ 94 ವರ್ಷ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಸುಭಾಷ್ ಸಿ.ಕಶ್ಯಪ್ ಅವರು ಈ ಹಿಂದೆ ಒಂದು ದೇಶ-ಒಂದು ಚುನಾವಣೆಯ ಪರವಾಗಿ ಮಾತನಾಡಿರುವ ದಾಖಲೆ ಇದೆ.

ರಾಮ್ ನಾಥ್ ಕೋವಿಂದ್ ಅವರು ಭಾರತದ ರಾಷ್ಟ್ರಪತಿಯಾಗಿದ್ದಾಗ ಅವರ ಕಾರ್ಯದರ್ಶಿಯಾಗಿ ಸಂಜಯ್ ಕೊಠಾರಿ ಕೆಲಸ ಮಾಡಿದ್ದರು. ಈಗ ಅವರು ಸಮಿತಿಯಲ್ಲಿದ್ದಾರೆ. ಇನ್ನೋರ್ವ ಸದಸ್ಯ ಲಂಡನ್ ಮೂಲದ ಎನ್‌ಆರ್‌ಐ ವಕೀಲ ಹರೀಶ್ ಸಾಳ್ವೆ ಬಿಜೆಪಿಗೆ ಆಪ್ತರು. ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್ 2014 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಕಳೆದ ವರ್ಷ ಕಾಂಗ್ರೆಸ್ ತೊರೆದು ಸ್ವಂತ ಪಕ್ಷ ಸ್ಥಾಪಿಸಿದ್ದ ಮಾಜಿ ಸಂಸದ ಗುಲಾಂ ನಬಿ ಆಜಾದ್ ಕೂಡ ಬಿಜೆಪಿಯ ಜೊತೆ ನಿಕಟ ಬಾಂದವ್ಯ ಹೊಂದಿದ್ದಾರೆ ಎಂದು ಚೌದರಿ ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಕೂಡ ಸಮಿತಿಯ ಸದಸ್ಯರಾಗಿದ್ದಾರೆ. ಎಂಟು ಸದಸ್ಯರಲ್ಲಿ ಸಮಿತಿಯ ಅಧ್ಯಕ್ಷರಾದ ಮಾಜಿ ರಾಷ್ಟ್ರಪತಿ ಕೋವಿಂದ್ ಸೇರಿ 7 ಮಂದಿ ಬಿಜೆಪಿಗೆ ಆಪ್ತರಾಗಿದ್ದಾರೆ. ಎಂಟನೇ ಸದಸ್ಯ ಚೌಧರಿ ಸಮಿತಿಯ ಭಾಗವಾಗಲು  ನಿರಾಕರಿಸಿದ್ದು, ಅವರ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಸಮಿತಿಯಲ್ಲಿ ಮುಖ್ಯಮಂತ್ರಿಗಳಾಗಲಿ, ವಿಶೇಷವಾಗಿ ಪ್ರತಿಪಕ್ಷಗಳ ನಾಯಕರಾಗಲಿ ಮಾಜಿ ಕಾನೂನು ಮಂತ್ರಿಗಳಾಗಲಿ ಯಾರೂ ಇಲ್ಲ ಎಂಬುದು ಗಮನಾರ್ಹವಾಗಿದೆ.

ಇದನ್ನು ಓದಿ: ಮರಾಠ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ: ಸಿಎಂ ಏಕನಾಥ್ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...