Homeಮುಖಪುಟ‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್‌ ಸಮಿತಿ

‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್‌ ಸಮಿತಿ

- Advertisement -
- Advertisement -

ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ನೇತೃತ್ವದ ‘ಒಂದು ರಾಷ್ಟ್ರ ಒಂದು ಚುನಾವಣೆ‘ ಸಮಿತಿಯು ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದ್ದು, ಜ.15ರೊಳಗೆ ಕಳುಹಿಸುವ ಸಲಹೆಗಳನ್ನು ಸ್ವೀಕರಿಸಲಾಗುವುದು ಎಂದು ಹೇಳಿದೆ.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಸಮಿತಿಯು ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಲು ಅಸ್ತಿತ್ವದಲ್ಲಿರುವ ಕಾನೂನು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡುವ ಕುರಿತು ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದೆ.

ಸಾರ್ವಜನಿಕ ಪ್ರಕಟಣೆಯಲ್ಲಿ ಸಮಿತಿಯು, ಜನವರಿ 15ರೊಳಗೆ ಸ್ವೀಕರಿಸಿದ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಸಲಹೆಗಳನ್ನು ಸಮಿತಿಯ ವೆಬ್‌ಸೈಟ್ onoe.gov.in ನಲ್ಲಿ ಪೋಸ್ಟ್ ಮಾಡಬಹುದು ಅಥವಾ ಇ-ಮೇಲ್ ಮೂಲಕ [email protected] ಗೆ ಕಳುಹಿಸಬಹುದು ಎಂದು ತಿಳಿಸಿದೆ.

ಸಮಿತಿ ರಚನೆ ಬಳಿಕ ಈವರೆಗೆ ಸಮಿತಿಯು ಎರಡು ಸಭೆಗಳನ್ನು ನಡೆಸಿದೆ. ಇದು ಇತ್ತೀಚೆಗೆ ರಾಜಕೀಯ ಪಕ್ಷಗಳಿಗೆ ಪತ್ರ ಬರೆದು ಅವರ ಅಭಿಪ್ರಾಯಗಳನ್ನು ಮತ್ತು ‘ಒಂದು ದೇಶ ಒಂದು ಚುನಾವಣೆ’ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳಲು ಎಲ್ಲರಿಗೂ ಒಮ್ಮತದ ಒಂದು ದಿನಾಂಕವನ್ನು ಸೂಚಿಸಬೇಕು ಎಂದು ರಾಜಕೀಯ ಪಕ್ಷಗಳಿಗೆ ಕೋರಿತ್ತು.

6 ರಾಷ್ಟ್ರೀಯ ಪಕ್ಷಗಳು, 33 ಪ್ರಾದೇಶಿಕ ಪಕ್ಷಗಳಿಗೆ ಪತ್ರಗಳನ್ನು ಕಳುಹಿಸಲಾಗಿತ್ತು. ಸಮಿತಿಯು ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಕಾನೂನು ಆಯೋಗದ ಅಭಿಪ್ರಾಯವನ್ನೂ ಕೇಳಿದೆ. ಈ ವಿಚಾರದಲ್ಲಿ ಮತ್ತೊಮ್ಮೆ ಕಾನೂನು ಸಮಿತಿ ಸಭೆಯು ನಡೆಯುವ ಸಾಧ್ಯತೆ ಇದೆ.

ಸಮಿತಿಯು, ಸಂವಿಧಾನದ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಕುರಿತು ಪರಿಶೀಲಿಸಿ ಶಿಫಾರಸುಗಳನ್ನು ಮಾಡಬೇಕಿದೆ. ಸಂವಿಧಾನ, ಜನಪ್ರತಿನಿಧಿ ಕಾಯಿದೆ-1950 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು ಮತ್ತು ಇತರ ಕಾನೂನುಗಳಿಗೆ ನಿರ್ದಿಷ್ಟ ತಿದ್ದುಪಡಿಗಳನ್ನು ಪರಿಶೀಲಿಸಲು ಮತ್ತು ತಿದ್ದುಪಡಿ ಕುರಿತ ಶಿಫಾರಸ್ಸಿಗೆ ಸಮಿತಿ ರಚಿಸಲಾಗಿದೆ.

ಸೆ.1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು  ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ಜೊತೆ ನಡೆಸಿದ ಸಭೆಯ ಬಳಿಕ ಏಕಕಾಲದಲ್ಲಿ ಸಂಸತ್ತಿಗೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸುವ ಬಗ್ಗೆ ಪರಿಶೀಲಿಸಲು ಕೋವಿಂದ್ ಅವರ ನೇತೃತ್ವದ ಸಮಿತಿ ರಚಿಸಿದ್ದರು.

ಸರ್ಕಾರದ ಸೆ.1ರ ಅಧಿಸೂಚನೆಯಲ್ಲಿ ಕೋವಿಂದ್ ಅವರನ್ನು ಹೊರತುಪಡಿಸಿ, ಸಮಿತಿಯಲ್ಲಿ ಅಮಿತ್‌ ಶಾ, ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ. ಸಿಂಗ್, ಹಿರಿಯ ವಕೀಲ ಹರೀಶ್ ಸಾಳ್ವೆ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇತರ ಸದಸ್ಯರಾಗಿದ್ದರು. ಅಧೀರ್ ರಂಜನ್ ಚೌದರಿ ಸಮಿತಿಯ ಭಾಗವಾಗಲು ನಿರಾಕರಿಸಿದ್ದರು.

ಇದನ್ನು ಓದಿ: ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ: ಬಿಜೆಪಿ ಶಾಸಕನಿಗೆ ಎರಡು ವರ್ಷ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...