Homeಮುಖಪುಟಸಂಸತ್ ಭವನದ ಶಂಕುಸ್ಥಾಪನೆಗೆ ‘ಅಸ್ಪೃಶ್ಯ’ ಎಂದು ಮಾಜಿ ರಾಷ್ಟ್ರಪತಿ ಕೋವಿಂದ್‌ಗೆ ಆಹ್ವಾನಿಸಿರಲಿಲ್ಲ: ಖರ್ಗೆ

ಸಂಸತ್ ಭವನದ ಶಂಕುಸ್ಥಾಪನೆಗೆ ‘ಅಸ್ಪೃಶ್ಯ’ ಎಂದು ಮಾಜಿ ರಾಷ್ಟ್ರಪತಿ ಕೋವಿಂದ್‌ಗೆ ಆಹ್ವಾನಿಸಿರಲಿಲ್ಲ: ಖರ್ಗೆ

- Advertisement -
- Advertisement -

ನೂತನ ಸಂಸತ್ ಭವನದ ಶಂಕುಸ್ಥಾಪನೆಗೆ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ‘ಅಸ್ಪೃಶ್ಯ’ ಎಂಬ ಕಾರಣಕ್ಕೆ ಆಹ್ವಾನಿಸಿರಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಜೈಪುರದಲ್ಲಿ ಕಾಂಗ್ರೆಸ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಹೊಸ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗಿಲ್ಲ. ಆದರೆ ನಟರು ಸೇರಿದಂತೆ ಅನೇಕರನ್ನು ಆಹ್ವಾನಿಸಲಾಗಿದೆ. ನೂತನ ಸಂಸತ್ ಭವನದ ಶಂಕುಸ್ಥಾಪನೆಗೆ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ‘ಅಸ್ಪೃಶ್ಯ’ ಎಂಬ ಕಾರಣಕ್ಕೆ ಆಹ್ವಾನಿಸಿರಲಿಲ್ಲ. ಸಂಸತ್‌ ಭವನಕ್ಕೆ ಅಸ್ಪೃಶ್ಯರು ಅಡಿಪಾಯ ಹಾಕಿದರೆ ಅದನ್ನು ಗಂಗಾಜಲದಿಂದ ತೊಳೆಯುತ್ತಾರೆ ಎಂದು ಖರ್ಗೆ ಹೇಳಿದ್ದಾರೆ.

ನೂತನ ಸಂಸತ್‌ ಭವನ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸದೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂದು ಈ ಮೊದಲು ಖರ್ಗೆ ಹೇಳಿದ್ದರು.

ಮೋದಿ ಸರ್ಕಾರ ದಲಿತ ಮತ್ತು ಬುಡಕಟ್ಟು ಸಮುದಾಯದವರನ್ನು ಕೇವಲ ಚುನಾವಣಾ ಕಾರಣಗಳಿಗಾಗಿ ಭಾರತದ ರಾಷ್ಟ್ರಪತಿಗಳನ್ನಾಗಿ ಆಯ್ಕೆ ಮಾಡಿದಂತಿದೆ. ನೂತನ ಸಂಸತ್ತಿನ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಅಂದಿನ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರನ್ನು ಆಹ್ವಾನಿಸಿರಲಿಲ್ಲ. ಈಗ ನೂತನ ಸಂಸತ್‌ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂದು ಟೀಕಿಸಿದ್ದಾರೆ.

ಭಾರತದ ಸಂಸತ್ತು ಗಣತಂತ್ರ ಭಾರತದ ಸರ್ವೋಚ್ಛ ಶಾಸಕಾಂಗ ಸಂಸ್ಥೆಯಾಗಿದ್ದು, ರಾಷ್ಟ್ರಪತಿಗಳು ಅದರ ಅತ್ಯುನ್ನತ ಶಾಸಕಾಂಗದ ಅಧಿಕಾರ ಹೊಂದಿದ್ದಾರೆ. ದ್ರೌಪದಿ ಮುರ್ಮು ಅವರು  ಸರ್ಕಾರ, ವಿಪಕ್ಷಗಳು ಮತ್ತು ಭಾರತದ ಪ್ರತಿ ನಾಗರೀಕರನ್ನು ಪ್ರತಿನಿಧಿಸುತ್ತಾರೆ. ಅವರು ಭಾರತದ ಪ್ರಥಮ ಪ್ರಜೆಯಾಗಿದ್ದಾರೆ. ಮೋದಿ ಸರ್ಕಾರ ಪದೇ ಪದೇ ರಾಷ್ಟ್ರಪತಿಗಳನ್ನು ಅಗೌರವಿಸಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೀಸಲಾತಿಗಾಗಿ ಮುಸ್ಲಿಮರು ಒಗ್ಗಟ್ಟಾಗಿ ಹೋರಾಡಬೇಕಿದೆ: ಮಾಜಿ ಸಂಸದ ಹುಸೇನ್ ದಳವಾಯಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read