Homeಮುಖಪುಟಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕೊರೊನಾ ಪಾಸಿಟಿವ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕೊರೋನಾ ಸೋಂಕು ದೃಢವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಡಿ.ಕೆ.ಶಿವಕುಮಾರ್‌ ದಾಖಲಾಗಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕಳೆದ ನಾಲ್ಕು ದಿನಗಳಿಂದ ಬೆನ್ನು ನೋವು ಮತ್ತು ಜ್ವರದಿಂದ ಬಳಲುತ್ತಿದ್ದ ಶಿವಕುಮಾರ್ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಆದ ಕಾರಣ ಅಲ್ಲೇ ದಾಖಲಾಗಿದ್ದಾರೆಂದು ಡಿಕೆಶಿ ಆಪ್ತವಲಯ ತಿಳಿಸಿವೆ. ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದವರ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಅವರೆಲ್ಲರೂ ಕ್ವಾರಂಟೈನ್‌ಗೆ ಒಳಗಾಗಲು ತಿಳಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ’ಕೆಪಿಸಿಸಿ ಅಧ್ಯಕ್ಷರಾದ ಡಿ.ಎ.ಶಿವಕುಮಾರ್ ಅವರಿಗೆ ಕೋವಿಡ್ ಇರುವುದು ತಿಳಿಯಿತು. ಕೊರೊನಾ ವೈರಸ್ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.

ಕೊರೋನಾ ನಡುವೆಯೂ ರಾಜ್ಯದ ವಿವಿಧ ಭಾಗಗಳಿಗೆ ಇತ್ತಿಚೆಗೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು.

ಇತ್ತಿಚೆಗೆ ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.


ಇದನ್ನೂ ಓದಿ: ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಚೇತರಿಕೆಗೆ ಮೆಗಾ ಸ್ಟಾರ್‌ ಮಮ್ಮುಟ್ಟಿ ಹಾರೈಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...