Homeಕರ್ನಾಟಕಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

ಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

- Advertisement -
- Advertisement -

ಚಾಮರಾಜನಗರ ಆಕ್ಸಿಜನ್ ದುರಂತದ ಸಂತ್ರಸ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ವತಿಯಿಂದ ಪರಿಹಾರದ ಚೆಕ್ ವಿತರಿಸಿದ್ದಾರೆ. ರಾಜ್ಯ ಸರ್ಕಾರದ ದುರಾಡಳಿತ ಕಂಡು ಜನ ಆಕ್ರೋಶಗೊಂಡಿದ್ದಾರೆ. ಅವರ ಆಕ್ರೋಶಕ್ಕೆ ಹೆದರಿ ಬಿಜೆಪಿ ನಾಯಕರು ಜನರ ಬಳಿಗೆ ಹೋಗುತ್ತಿಲ್ಲ ಎಂದು ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

‘ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಕೇವಲ ಮೂರು ಜನ ಮೃತಪಟ್ಟರು ಎಂದು ಸರ್ಕಾರ ಆರಂಭದಲ್ಲಿ ಹೇಳಿತ್ತು. ಆದರೆ, ನಾವು ಇಲ್ಲಿಗೆ ಭೇಟಿ ನೀಡಿದಾಗ 28 ಮಂದಿ ಮೃತಪಟ್ಟಿದ್ದಾರೆ ಎಂಬುದು ಗೊತ್ತಾಯಿತು. ಇದನ್ನೆಲ್ಲ ಗಮನಿಸಿದ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ತಂಡ ಕಳುಹಿಸಿ ತನಿಖೆ ನಡೆಸಿದಾಗ ಒಟ್ಟು 36 ಮಂದಿ ಸತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ’ ಎಂದಿದ್ದಾರೆ.

’ಇಲ್ಲಿನ ಸಾವುಗಳು ಸರ್ಕಾರ ಮಾಡಿರುವ ಕೊಲೆ. ಈ ಕೊಲೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರ ವಿಪತ್ತು ನಿರ್ವಹಣಾ ನಿಧಿಯಿಂದ 4 ಲಕ್ಷ ಪರಿಹಾರ ಘೋಷಿಸಿ ನಂತರ ಹಿಂಪಡೆಯಿತು. ಆದರೆ ಸರ್ಕಾರದಿಂದ ಯಾರೂ ಇಲ್ಲಿಗೆ ಬಂದು ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಲಿಲ್ಲ. ಅವರ ಕಷ್ಟ ಕೇಳಲಿಲ್ಲ. ಈ ಕೊಲೆಗಳಿಗೆ ಸರ್ಕಾರ ಹಾಗೂ ಚುನಾವಣಾ ಆಯೋಗವೇ ಕಾರಣ ಎಂದು ವಿವಿಧ ನ್ಯಾಯಾಲಯಗಳು ಹೇಳಿವೆ. ಇಷ್ಟಾದರೂ ಸರ್ಕಾರ ಇದಕ್ಕೆ ಕಾರಣರಾದ ಅಧಿಕಾರಿ, ಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಲಿಲ್ಲ ಎಂದರೆ ಈ ಸರ್ಕಾರ ಬದುಕಿದೆಯಾ, ಸತ್ತಿದೆಯಾ ಎಂಬುದನ್ನು ಜನರೇ ತೀರ್ಮಾನಿಸಬೇಕು’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೇ ಅಲೆಗೆ 28 ವೈದ್ಯರು ಬಲಿ, ಇನ್ನು ಸಿಗದ ಪರಿಹಾರ

’ವಿರೋಧ ಪಕ್ಷದ ಜವಾಬ್ದಾರಿ ಅರಿತು ನಾವು ಈ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇವೆ. ಕೆಪಿಸಿಸಿ ಅಧ್ಯಕ್ಷನಾಗಿ ಎಲ್ಲ 36 ಸಂತ್ರಸ್ತರ ಕುಟುಂಬದವರನ್ನು ಭೇಟಿ ಮಾಡುತ್ತಿದ್ದೇನೆ. ಇವರನ್ನು ಸರ್ಕಾರ ಭೇಟಿ ಮಾಡುತ್ತದೆ ಎಂದು ಕಾದುನೋಡಿದೆ. ಆದರೆ ಅವರು ಭೇಟಿ ಮಾಡಲಿಲ್ಲ. ನಮ್ಮ ಮನಸ್ಸು ತಡೆಯಲಾಗದೆ ಇವರ ಕಷ್ಟ ಕೇಳಿ, ಪಕ್ಷದ ಪರವಾಗಿ 1 ಲಕ್ಷ ಪರಿಹಾರ ನೀಡಿ, ಅವರಿಗೆ ಧೈರ್ಯ ತುಂಬಲು ನಾವು ಇಲ್ಲಿಗೆ ಬಂದಿದ್ದೇವೆ’ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

’ಮುಖ್ಯಮಂತ್ರಿ ಯಡಿಯೂರಪ್ಪನವರು ಇಲ್ಲಿಗೆ ಬಂದು ಇವರನ್ನು ಭೇಟಿ ಮಾಡಲು ಆಗದಿದ್ದರೆ, ಮಿಕ್ಕ ಸಚಿವರುಗಳಿಗೆ ಏನಾಗಿತ್ತು? ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ಕೋವಿಡ್ ಉಸ್ತುವಾರಿ ಹೊತ್ತವರು ಯಾಕೆ ಬರಲಿಲ್ಲ? ಎಲ್ಲರೂ ಬೆಂಗಳೂರಿನಲ್ಲಿ ಪಾಲು ಬೇಕು ಅಂತಾರೆ. ಜನರ ದುಃಖ-ದುಮ್ಮಾನ ಅವರಿಗೆ ಬೇಕಿಲ್ಲ. ಕೋವಿಡ್ ನಿಂದ ಸತ್ತವರು 30 ಸಾವಿರ ಅಂತಾ ಸರ್ಕಾರ ಹೇಳುತ್ತಿದೆ. ಅದರೆ 3 ಲಕ್ಷ ಜನರ ಮರಣ ಪ್ರಮಾಣ ಪತ್ರ ಪಡೆಯಲಾಗಿದೆ. ಹೀಗಾಗಿ ಡೆತ್ ಆಡಿಟ್ ಆಗಬೇಕಿದೆ. ಈ ವಿಚಾರವಾಗಿ ಕಾಂಗ್ರೆಸ್ ವಿಧಾನಸೌಧದಲ್ಲಿ ಧ್ವನಿ ಎತ್ತಲಿದೆ’ ಎಂದಿದ್ದಾರೆ.

’ಕೊರೊನಾದಿಂದ ಮೃತಪಟ್ಟವರಿಗೆ, ಸಮಸ್ಯೆ ಎದುರಿಸಿದವರಿಗೆ ಧೈರ್ಯ ತುಂಬುವ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ರಾಜ್ಯದ ಉದ್ದಗಲಕ್ಕೂ ನಮ್ಮ ಕಾರ್ಯಕರ್ತರು ಮನೆ, ಮನೆಗೆ ಹೋಗಿ ಕೋವಿಡ್ ನಿಂದ ಮೃತಪಟ್ಟವರು, ಉದ್ಯೋಗ ಕಳೆದುಕೊಂಡವರು, ಸಂಕಷ್ಟಕ್ಕೆ ಸಿಲುಕಿದವರ ಮಾಹಿತಿ ಸಂಗ್ರಹಿಸಲಿದ್ದಾರೆ. ಅವರಿಗೆ ಪರಿಹಾರ ಕೊಡಿಸಲು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...