HomeಅಂಕಣಗಳುKarnataka against SIRSIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

- Advertisement -
- Advertisement -

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ (CEO) ಪತ್ರ ಬರೆದಿರುವ ಅವರು, ಎಸ್‌ಐಆರ್ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಮೂಡಿರುವ ಅನುಮಾನಗಳಿಗೆ ಚುನಾವಣಾ ಆಯೋಗವು ತಕ್ಷಣವೇ ಲಿಖಿತವಾಗಿ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದಾರೆ.

“2025ರ ಅಂತಿಮ ಮತದಾರರ ಪಟ್ಟಿಯಲ್ಲಿ ರಾಜ್ಯದಲ್ಲಿ ಒಟ್ಟು 5,54,22,344 ಮತದಾರರಿದ್ದರು. ಆದರೆ 2026ರ ಜೂನ್ 30ರಿಂದ ಆರಂಭವಾದ ಎಸ್‌ಐಆರ್ ಪ್ರಕ್ರಿಯೆಯ ನಡುವೆ ಎಷ್ಟು ಹೊಸ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವಿಕೆ ನಡೆದಿದೆ ಎಂಬ ಸಂಪೂರ್ಣ ಲೆಕ್ಕವನ್ನು ಆಯೋಗ ಪ್ರಕಟಿಸಿಲ್ಲ. ಎರಡು ಅವಧಿಯ ಒಟ್ಟು ಸಂಖ್ಯೆಯಲ್ಲಿ ವ್ಯತ್ಯಾಸವಿಲ್ಲದಿರುವುದು ಗಂಭೀರ ಅನುಮಾನಗಳಿಗೆ ಕಾರಣವಾಗಿದೆ” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ASDDO ವರ್ಗೀಕರಣ ಮತ್ತು ಮತಗಟ್ಟೆ ಮ್ಯಾಪಿಂಗ್ ಗೊಂದಲ:

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಎಎಸ್‌ಡಿಡಿಒ (Absent, Shifted, Dead, Duplicate and Others) ಹೆಸರಿನಲ್ಲಿ ಮತದಾರರನ್ನು ವರ್ಗೀಕರಿಸಿರುವುದೇ ದೊಡ್ಡ ಸಮಸ್ಯೆಯಾಗಿದೆ. 2025ರ ಪಟ್ಟಿಯಿಂದ ತೆಗೆದುಹಾಕಲಾದ ಮತದಾರರ ಸಂಖ್ಯೆಗೂ, 2026ರ ಎಸ್‌ಐಆರ್‌ನಲ್ಲಿ ಎಎಸ್‌ಡಿಡಿಒ ಎಂದು ಗುರುತಿಸಲಾದ ಸಂಖ್ಯೆಗೂ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಭಾರಿ ವ್ಯತ್ಯಾಸವಿದೆ. ಕೇವಲ ‘ವಿವರಿಸಲಾಗದ ಮತದಾರರು’ ಎಂದು ಹೇಳಿ ಆಯೋಗ ನುಣುಚಿಕೊಳ್ಳಬಾರದು, ಪ್ರತಿಯೊಂದು ಕ್ಷೇತ್ರದ ಮಟ್ಟದಲ್ಲೂ ಅಂಕಿಅಂಶಗಳನ್ನು ಪರಸ್ಪರ ಹೊಂದಾಣಿಕೆ ಮಾಡಿ ಸ್ಪಷ್ಟತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೆ, ಯಾವುದೇ ಮುನ್ಸೂಚನೆ ಅಥವಾ ಸ್ಪಷ್ಟ ಕಾರಣ ನೀಡದೆ ಭಾರಿ ಸಂಖ್ಯೆಯ ಮತದಾರರನ್ನು ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ಸ್ಥಳಾಂತರಿಸಲಾಗಿದೆ. ಇದರಿಂದ ಹಳೆಯ ಮತ್ತು ಹೊಸ ಪಟ್ಟಿಗಳನ್ನು ‘Form-20’ ಆಧಾರದಲ್ಲಿ ಹೋಲಿಸಿ ವಿಶ್ಲೇಷಣೆ ಮಾಡುವುದು ಕಷ್ಟಕರವಾಗಿದೆ. ಇಂತಹ ಬೃಹತ್ ಮಟ್ಟದ ಮತಗಟ್ಟೆ ಬದಲಾವಣೆಯ ಅಗತ್ಯ ಏನಿತ್ತು ಎಂಬುದನ್ನು ವಿವರಿಸುವ ಜೊತೆಗೆ, ‘ಹಳೆಯ ಮತ್ತು ಹೊಸ ಮತಗಟ್ಟೆಗಳ ಸಂಪೂರ್ಣ ಮ್ಯಾಪಿಂಗ್’ ವರದಿಯನ್ನು ತಕ್ಷಣ ಪ್ರಕಟಿಸಬೇಕು ಎಂದು ಕೆಪಿಸಿಸಿ ನಾಯಕರು ಒತ್ತಾಯಿಸಿದ್ದಾರೆ.

ಮಹದೇವಪುರ ಅಕ್ರಮ ಮತ್ತು ಗಾಯಬ್ ಆದ PDFಗಳು:

ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ಎಸ್‌ಐಆರ್ ಕರಡು ಪಟ್ಟಿಯಲ್ಲಿ ನೂರಾರು ಮತದಾರರ ಮನೆ ಸಂಖ್ಯೆಯನ್ನು ‘0’ (Zero) ಎಂದು ತೋರಿಸಲಾಗಿದೆ. ಈ ಬಗ್ಗೆ ಈಗಾಗಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದರೂ ಲೋಪಗಳು ಮುಂದುವರಿದಿವೆ. ಇದರ ಜೊತೆಗೆ, ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಕೆಲ ಕ್ಷೇತ್ರಗಳ 2025ರ ಮತದಾರರ ಪಟ್ಟಿಯ ಪಿಡಿಎಫ್‌ಗಳೇ ಲಭ್ಯವಿಲ್ಲದಂತೆ ಮಾಡಲಾಗಿದೆ. ಇದು ಹಳೆಯ ಮತ್ತು ಹೊಸ ಪಟ್ಟಿಯ ಮುಕ್ತ ಹೋಲಿಕೆಗೆ ಅಡ್ಡಿಯುಂಟುಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

1.08 ಕೋಟಿ ಮತದಾರರು ಅತಂತ್ರ:

ಆಗಸ್ಟ್ 24ರಂದು ಪ್ರಕಟವಾದ ಅಧಿಕೃತ ಕರಡು ಮತಪಟ್ಟಿಯಲ್ಲಿ 4,46,80,151 ಮತದಾರರ ಹೆಸರು ದಾಖಲಾಗಿದ್ದರೆ, ಸುಮಾರು 1,07,96,415 (1.08 ಕೋಟಿ) ಜನರನ್ನು ಎಎಸ್‌ಡಿಡಿಒ ನೆಪದಲ್ಲಿ ಹೊರಹಾಕಲಾಗಿದೆ. ಇನ್ನು ಕರಡು ಪಟ್ಟಿಯಲ್ಲಿರುವ 43.8 ಲಕ್ಷಕ್ಕೂ ಹೆಚ್ಚು ಮತದಾರರಿಗೆ ‘No Mapping’ ಮತ್ತು ‘Logical Anomaly’ ಹೆಸರಿನಲ್ಲಿ ನೋಟಿಸ್ ನೀಡಿ ವಿಚಾರಣೆಗೆ ಕರೆಯಲಾಗುತ್ತಿದೆ.

“ಕೇವಲ ನಿಗದಿತ ಗಡುವಿನೊಳಗೆ ಪ್ರಕ್ರಿಯೆ ಮುಗಿಸುವ ಅವಸರದಲ್ಲಿ ಒಬ್ಬನೇ ಒಬ್ಬ ಅರ್ಹ ಪ್ರಜೆಯ ಮತದಾನದ ಹಕ್ಕನ್ನು ಕಸಿಯಬಾರದು. ಗುರುತಿಸಲಾದ ಪ್ರತಿಯೊಂದು ಲೋಪವನ್ನೂ ಮರುಪರಿಶೀಲಿಸಿ ಪರಿಹರಿಸಬೇಕು. ಪ್ರಜಾಸತ್ತಾತ್ಮಕ ಹಕ್ಕು ಕಳೆದುಕೊಳ್ಳುವ ಭೀತಿಯಲ್ಲಿರುವ ಅರ್ಹ ಮತದಾರರ ಪರವಾಗಿ ಕಾಂಗ್ರೆಸ್ ಪಕ್ಷ ಅಗತ್ಯಬಿದ್ದರೆ ಕಾನೂನು ಹೋರಾಟ ರೂಪಿಸಲಿದೆ” ಎಂದು ಬಿ.ಕೆ. ಹರಿಪ್ರಸಾದ್ ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...