Homeಕರ್ನಾಟಕಅಡಿಕೆ ಹಾಳೆ ರಫ್ತಿಗೆ ಅಮೆರಿಕದಿಂದ ಅಡ್ಡಿ; ನಿವಾರಿಸುವಂತೆ ಕೇಂದ್ರಕ್ಕೆ KPRS ಆಗ್ರಹ

ಅಡಿಕೆ ಹಾಳೆ ರಫ್ತಿಗೆ ಅಮೆರಿಕದಿಂದ ಅಡ್ಡಿ; ನಿವಾರಿಸುವಂತೆ ಕೇಂದ್ರಕ್ಕೆ KPRS ಆಗ್ರಹ

- Advertisement -
- Advertisement -

ಭಾರತದಿಂದ ರಫ್ತಾಗುವ ಅಡಿಕೆ ಹಾಳೆಯಿಂದ ತಯಾರಿಸಿದ ತಟ್ಟೆ, ಲೋಟ ಮತ್ತಿತರ ಊಟದ ಪರಿಕರಗಳು ಆರೋಗ್ಯಕ್ಕೆ ಹಾನಿಕರ ಹಾಗೂ ಕ್ಯಾನ್ಸರ್‌ಕಾರಕ ಎಂದು ಅಮೆರಿಕದ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ (FDA) ಮೇ 8 ,2025 ರಂದು ಹೊರಡಿಸಿರುವ ಆಮದು ನಿರ್ಬಂಧವನ್ನು ತೆರವುಗೊಳಿಸಲು ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ. ಅಡಿಕೆ ಹಾಳೆ ರಫ್ತಿಗೆ

ಅಮೆರಿಕದ ಈ ನಿರ್ಭಂದವು ಅಮೆರಿಕ ಮಾತ್ರವಲ್ಲದೆ ಇಡಿ ಜಗತ್ತಿನ ಅಡಿಕೆ ಹಾಳೆ ಮಾರುಕಟ್ಟೆ ಮೇಲೆ ಕರಾಳ ಪರಿಣಾಮ ಬೀರುತ್ತಿದೆ. ಅಡಿಕೆ ಹಾಳೆಗಳಿಂದ ತಯಾರಾಗುತ್ತಿದ್ದ ಊಟದ ಪರಿಕರಗಳು ಜಾಗತಿಕವಾಗಿ ಸುಮಾರು ಮೂರುವರೆ ಸಾವಿರ ಕೋಟಿ ವಹಿವಾಟು ಇದ್ದು ಇದರಲ್ಲಿ ಕರ್ನಾಟಕ ರಾಜ್ಯದ ಕೊಡುಗೆಯೇ ಸುಮಾರು ಎರಡೂವರೆ ಸಾವಿರ ಕೋಟಿ ರೂಪಾಯಿಗಳಷ್ಟಿದೆ ಎಂದು ರೈತ ಸಂಘಟನೆ ಹೇಳಿದೆ.

ದೇಶದಲ್ಲೇ ಅತಿ ದೊಡ್ಡ ಅಡಿಕೆ ಬೆಳೆ ಬೆಳೆಯುವ ರಾಜ್ಯ ಕರ್ನಾಟಕವಾಗಿದ್ದು, ಈ ನಿರ್ಭಂಧದಿಂದ ಅಡಿಕೆ ಬೆಳೆಗಾರರು ಸೇರಿದಂತೆ ಈ ಉದ್ಯಮದಲ್ಲಿ ತೊಡಗಿರುವ ಸಹಸ್ರಾರು ಜನರ ಉದ್ಯೋಗದ ಮೇಲೆ ದುಷ್ಪರಿಣಾಮಗಳು ಕಂಡು ಬರುತ್ತಿದೆ ಎಂದು ಅದು ತಿಳಿಸಿದೆ.

ದಕ್ಷಿಣ ಕನ್ನಡ ಮುಂತಾದ ಜಿಲ್ಲೆಗಳಿಂದ ನಡೆಯುತ್ತಿದ್ದ ರಪ್ತು ವಹಿವಾಟು ತೀವ್ರ ಪ್ರಮಾಣದಲ್ಲಿ ಕುಸಿದಿದೆ. ಎಲೆ ಚುಕ್ಕಿ ರೋಗ, ಕೊಳೆ ರೋಗ ಮುಂತಾದ ಸಮಸ್ಯೆಗಳು ಸೇರಿದಂತೆ ಹಲವಾರು ವರ್ಷಗಳ ಬೆಲೆ ಕುಸಿತದ ಸಮಸ್ಯೆ ಅನುಭವಿಸಿ ಸತತ ನಷ್ಟದ ನಂತರ ಈ ವರ್ಷ ಸ್ವಲ್ಪ ಉತ್ತಮ ಬೆಲೆ ಪಡೆಯುವ ನಿರೀಕ್ಷೆಯಲ್ಲಿ ಇರುವಾಗಲೇ ಇಂತಹ ನಿರ್ಬಂಧಗಳು ಅಡಿಕೆ ಬೆಳೆಗಾರರನ್ನು‌ ಮತ್ತಷ್ಟು ಕಷ್ಟಕ್ಕೆ ಸಿಲುಕಿಸುತ್ತದೆ ಎಂದು ಕೆಪಿಆರ್‌ಎಸ್ ಹೇಳಿದೆ.

ಅದ್ದರಿಂದ ಅಡಿಕೆ ಬೆಳೆ ಬೆಳೆಯುವ ಪ್ರದೇಶದ ಸಂಸತ್ ಸದಸ್ಯರು ಪ್ರಧಾನ ಮಂತ್ರಿಯ ಮೇಲೆ ಈ ತೊಡಕು ನಿವಾರಿಸುವಂತೆ ಒತ್ತಡ ತರಬೇಕು ಮತ್ತು ರಾಜ್ಯ ಸರ್ಕಾರ ಕೂಡ ತಕ್ಷಣ ಕೇಂದ್ರ ಸರ್ಕಾರವನ್ನು ಈ ಬಗ್ಗೆ ಒತ್ತಾಯಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.

ಒಂದು ಕಡೆ ತನ್ನ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಯಾವುದೆ ರೀತಿಯ ಸುಂಕ ವಿಧಿಸದಂತೆ ಅಮೆರಿಕ ಹಾಗೂ ಯೂರೋಪಿಯನ್ ದೇಶಗಳು ಭಾರತದ ಮೇಲೆ ಒತ್ತಡ ಹಾಗೂ ಬೆದರಿಕೆ ಹಾಕುತ್ತಿವೆ. ಅದೆ ಸಂದರ್ಭದಲ್ಲಿ ಭಾರತದ ಸರಕುಗಳು ತನ್ನ ದೇಶದೊಳಗೆ ಬರದಂತೆ ಸುಂಕ ಮತ್ತು ಸುಂಕಯೇತರ ಅಡ್ಡಿ ಸೃಷ್ಟಿಸುತ್ತಿದೆ ಎಂದು ಕೆಪಿಆರ್‌ಎಸ್‌ ಆತಂಕ ವ್ಯಕ್ತಪಡಿಸಿದೆ.

ಇತ್ತೀಚೆಗೆ ಮಾವು ಬೆಳೆಯನ್ನು ಇಂತಹದ್ದೆ ನೆಪ ಒಡ್ಡಿ ತಿರಸ್ಕರಿಸಿದ್ದರಿಂದ ಕೋಟ್ಯಾಂತರ ರೂ ಬೆಳೆ ನಾಶವಾಗಿದೆ ಎಂದು ಹೇಳಿರುವ ಸಂಘಟನೆಯು, ರಬ್ಬರ್ ಬೆಳೆಗೂ ಕೂಡ ಅರಣ್ಯ ನಾಶ ಮಾಡಿ ಬೆಳೆದಿಲ್ಲ ಎಂದು ಸರ್ಟಿಫಿಕೇಟ್ ಒದಗಿಸಲು ನಿರ್ಬಂಧ ಒಡ್ಡುತ್ತಿವೆ ಎಂದು ಹೇಳಿದೆ.

ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಳಪಡಿಸಲು ಇತ್ತೀಚಿನ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಸಂದರ್ಭವನ್ನು ಕೂಡ ದುರುಪಯೋಗ ಮಾಡಿಕೊಂಡಿದೆ. ಇಂತಹ ಕತ್ತು ಹಿಸುಕುವ ಅಮೆರಿಕ ಕ್ರಮಗಳನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಟುವಾಗಿ ಖಂಡಿಸುತ್ತಿಲ್ಲ ಎಂದು ಸಂಘಟನೆಯು ಆರೋಪಿಸಿದೆ.

ಚೀನಾ ಮತ್ತಿತರ ದೇಶಗಳ ರೀತಿ ತಿರುಗೇಟು ನೀಡಿ ನಮ್ಮ ದೇಶದ ಸ್ವಾವಲಂಬನೆ ಮತ್ತು ರೈತರ ಹಿತ ಕಾಪಾಡುವ ಕ್ರಮ ಕೈಗೊಳ್ಳದೇ ಟ್ರಂಪ್ ನ ಅಡಿಯಾಳಾಗಿ ಕೇಂದ್ರ ಸರ್ಕಾರ ವರ್ತಿಸುತ್ತಿದೆ ಎಂದು ಹೇಳಿರುವ ಸಂಘಟನೆಯು, ಕೇಂದ್ರ ಸರ್ಕಾರ ಮೇಲಿಂದ ಮೇಲೆ ಅಮೆರಿಕದ ಒತ್ತಡಗಳಿಗೆ ಮಣಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು ಯಾವುದೇ...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...