Homeಕರ್ನಾಟಕಕೆಪಿಎಸ್‌ಸಿ ಲೋಪ | ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ; ಸಿಎಂ ಸಿದ್ದರಾಮಯ್ಯ

ಕೆಪಿಎಸ್‌ಸಿ ಲೋಪ | ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕೆಪಿಎಸ್‌ಸಿ ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ. ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ನಡೆಸುತ್ತೇವೆ. ಮರು ಪರೀಕ್ಷೆ ಬಗ್ಗೆ ಕೋರ್ಟ್ ಸೂಚನೆ ಬರದಿದ್ದರೆ ಸರ್ವ ಪಕ್ಷ ಸಭೆ ಕರೆದು ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ (ಮಾ.12) ಹೇಳಿದರು.

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ ಮೇಲೆ ಕೆಪಿಎಸ್‌ಸಿ ಕುರಿತ ಚರ್ಚೆಗೆ ಸಿಎಂ ಸದನದಲ್ಲಿ ಉತ್ತರ ನೀಡಿದರು.

ತಪ್ಪು ಭಾಷಾಂತರದಿಂದ ಅನ್ಯಾಯಕ್ಕೆ ಒಳಗಾದವರ ಪರವಾಗಿ ನಾವಿದ್ದೇವೆ. ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಪರೀಕ್ಷೆ , ನೇಮಕಾತಿ ನಡೆಸಲು ಕ್ರಮ ವಹಿಸುತ್ತೇವೆ ಎಂದರು.

ಕೆಪಿಎಸ್‌ಸಿ ಸರಿಯಾಗಬೇಕು ಎಂಬ ಈ ಸದನದ ಕಳಕಳಿ ಸರಿಯಾಗಿದೆ. ನಮ್ಮ ಸರ್ಕಾರದ ಕಳಕಳಿ ಕೂಡ ಅದೇ ಆಗಿದೆ. ಅಧಿಕಾರಿಗಳ ಆಯ್ಕೆ ಪ್ರಕ್ರಿಯೆಗಳು ಕಳಂಕರಹಿತವಾಗಿರಬೇಕು. ದಕ್ಷರೂ, ಪ್ರಾಮಾಣಿಕರೂ ಆದ ಅಧಿಕಾರಿಗಳು ರಾಜ್ಯದ ಆಡಳಿತ ಸೇವೆಗೆ ಬರಬೇಕು ಎಂಬ ಉದ್ದೇಶ, ಕಳಕಳಿ ನಮ್ಮದೂ ಆಗಿದೆ ಎಂದು ಸಿಎಂ ಹೇಳಿದರು.

ಮೈಸೂರು ಅರಸರ ಅವಧಿಯಲ್ಲಿ ‘ಮೈಸೂರು ಸಿವಿಲ್ ಸರ್ವಿಸ್’ ಎಂಬುದು ದೇಶದಲ್ಲಿಯೇ ಪ್ರತಿಷ್ಠಿತ ಸೇವೆಯಾಗಿತ್ತು. ನಾಲ್ವಡಿ ಕೃಷ್ಣರಾಜ ಒಡೆಯರ್ ಮುಂತಾದವರು ಈ ಕುರಿತು ಗಮನಾರ್ಹ ಕೆಲಸ ಮಾಡಿದ್ದಾರೆ. ಆಯೋಗವು ತನ್ನ ಹಿಂದಿನ ಮರ್ಯಾದೆ ಹಾಗೂ ವೈಭವವನ್ನು ಮರಳಿ ತರುವ ಕೆಲಸ ಮಾಡಬೇಕು. ದೊಡ್ಡ ಪರಂಪರೆಯುಳ್ಳ ಕರ್ನಾಟಕ ಆಡಳಿತ ಸೇವೆಗೆ ಸೇರಬಯಸುವ ಅಧಿಕಾರಿಗಳ ಆಯ್ಕೆ ಮಾಡಿಕೊಡುವುದರಲ್ಲಿ ಆಯೋಗವು ಮತ್ತೆ ಮತ್ತೆ ತಪ್ಪುಗಳನ್ನು ಮಾಡುತ್ತಿದೆ ಎಂದು ಎಂದರು.

ಕೆಪಿಎಸ್‌ಸಿಯನ್ನು ಸರಿಪಡಿಸಬೇಕು. ಆಯೋಗವು ಮುಕ್ತ ಮತ್ತು ನ್ಯಾಯಸಮ್ಮತವಾದ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಡಬೇಕು ಎಂಬ ಉದ್ದೇಶದಿಂದ 2013ರ ಜುಲೈನಲ್ಲಿ ನಮ್ಮ ಸರ್ಕಾರವೇ ಪಿ.ಸಿ ಹೋಟಾ ಅವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಸಮಿತಿಯಲ್ಲಿ ಹಿರಿಯ ಐಎಎಸ್ ಅಧಿಕಾರಿಗಳಾಗಿದ್ದ ಕೌಶಿಕ್ ಮುಖರ್ಜಿ ಮತ್ತು ಸಂಜೀವ್ ಕುಮಾರ್ ಅವರು ಸದಸ್ಯರಾಗಿದ್ದರು. ಈ ಸಮಿತಿಯು ನೀಡಿದ್ದ ಬಹುಪಾಲು ಶಿಫಾರಸ್ಸುಗಳನ್ನು ನಾವು ಅನುಷ್ಠಾನಕ್ಕೆ ತಂದಿದ್ದೆವು.

1997 ರಿಂದ 2011 ರವರೆಗಿನ ಹಲವು ಪರೀಕ್ಷೆಗಳಲ್ಲಿ ನಡೆದಿದ್ದ ಅವ್ಯವಸ್ಥೆಗಳ ಕಾರಣದಿಂದಲೇ ಈ ಸಮಿತಿಯನ್ನು ರಚಿಸಿದ್ದೆವು. ಹೋಟಾ ಸಮಿತಿಯ ಶಿಫಾರಸ್ಸುಗಳಲ್ಲಿ ಕಂಟ್ರೋಲರ್ ಆಫ್ ಎಕ್ಸಾಮಿನೇಶನ್ ಹೊರ ರಾಜ್ಯದವರಾಗಿರಬೇಕು ಎಂಬ ಅಂಶವೂ ಇತ್ತು. ಅದನ್ನೂ ಅನುಷ್ಠಾನ ಮಾಡಲಾಗಿದೆ. ಈ ಅಧಿಕಾರಿಗಳಿಗೆ ಕನ್ನಡದ ಜ್ಞಾನದ ಕೊರತೆಯೂ ಇರುತ್ತದೆ. ಜನರ ಸಂಪರ್ಕ ಹೆಚ್ಚು ಇರದ, ನೆಂಟರು, ಇಷ್ಟರು ಮುಂತಾದ ಬಾಧ್ಯತೆಗಳಿಲ್ಲದವರು ಈ ಕಂಟ್ರೋಲರ್ ಆಫ್ ಎಕ್ಸಾಮಿನೇಶನ್ ಆಗಬೇಕೆಂಬುದು ಪಿ.ಸಿಹೋಟಾ ಸಮಿತಿಯ ಶಿಫಾರಸ್ಸು. ಸದುದ್ದೇಶದ ಕಾರಣದಿಂದ ಇದನ್ನು ಮಾಡಲಾಗಿದೆ. ಹಾಗಿದ್ದರೆ ಸಮಸ್ಯೆಗಳೆಲ್ಲಿ ಆಗಿವೆ ಎಂದು ಅಧಿಕಾರಿಗಳಲ್ಲಿ ಕೇಳಿದೆ. ಪ್ರಶ್ನೆಗಳನ್ನು ತಯಾರಿಸುವ ಕರ್ನಾಟಕದ ಅಧ್ಯಾಪಕರುಗಳಿಗೆ ಕನ್ನಡ ಅನುವಾದ ಮಾಡಲಾಗದ ದುಸ್ಥಿತಿ ಇದೆ ಎಂದರು. ಇಂಗ್ಲೀಷಿನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ನಂತರ ಕನ್ನಡಕ್ಕೆ ಅನುವಾದ ಮಾಡಲಾಗುತ್ತಿದೆ ಎಂದು ಸಿಎಂ ವಿವರಿಸಿದರು.

ಇದನ್ನೆಲ್ಲ ಆಯೋಗವು ಸೂಕ್ಷ್ಮವಾಗಿ ನಿಭಾಯಿಸಬೇಕು. ಈ ಕಾರಣಕ್ಕೆ ಆಯೋಗವನ್ನು ನೇಮಿಸಲಾಗಿರುತ್ತದೆ. ಸಿದ್ಧಪಡಿಸುವ ಪ್ರಶ್ನೆಗಳು ಪರೀಕ್ಷೆಗೆ ಮೊದಲು ಯಾರಿಗೂ ಗೊತ್ತಾಗಬಾರದು ಜೊತೆಗೆ ಪ್ರಶ್ನೆ ಪತ್ರಿಕೆ ಗುಣ ಮಟ್ಟದ್ದಾಗಿರಬೇಕು. ಈ ಷರತ್ತಿನೊಡನೆ ಆಯೋಗವು ಪರೀಕ್ಷೆ ನಡೆಸಬೇಕು. ಆದರೆ, ಅದು ಪದೇ ಪದೇ ಎಡವುತ್ತಿದೆ ಎಂದರು.

ಲೋಕಸೇವಾ ಆಯೋಗಗಳ ಕುರಿತು ಸರ್ಕಾರಗಳು ನೇರವಾಗಿ ಯಾವುದೇ ಕ್ರಮಗಳನ್ನು ಕೈಗೊಳ್ಳುವಂತಿಲ್ಲ. ಇದು ಸಂವಿಧಾನಬದ್ಧವಾದ ಸಂಸ್ಥೆಯಾಗಿದೆ. ಲೋಕ ಸೇವಾ ಆಯೋಗಗಳು ಆರ್ಟಿಕಲ್ 315 ರಂತೆ ರಚನೆಯಾಗಿವೆ. ಲೋಕ ಸೇವಾ ಆಯೋಗಗಳ ಸದಸ್ಯರನ್ನು ತೆಗೆದು ಹಾಕಲು ಸುಪ್ರೀಂಕೋರ್ಟಿನ ಒಪ್ಪಿಗೆಯೊಂದಿಗೆ ರಾಷ್ಟ್ರಪತಿಗಳು ಆರ್ಟಿಕಲ್ 317ರಂತೆ ತೆಗೆದು ಹಾಕಬೇಕು. ಹಾಗೆಂದು ಹೇಳಿ ನಾವು ಕೈಕಟ್ಟಿ ಕೂತುಕೊಳ್ಳುವಂತೆ ಇಲ್ಲ. ಏನಾದರೂ ಮಾಡಲೇಬೇಕು. ಸದನದ ಸದಸ್ಯರು ಮಾತನಾಡಸುವಾಗ ಸಲಹೆಗಳನ್ನು ನೀಡಿದ್ದರೆ ಉತ್ತಮವಿತ್ತು. ಆದರೂ ಸಹ ನಮ್ಮ ಸರ್ಕಾರ ಲೋಕ ಸೇವಾ ಆಯೋಗವನ್ನು ಸರಿದಾರಿಗೆ ತರಲು ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿವೆ ಎಂದು ಸಿಎಂ ತಿಳಿಸಿದರು.

ಆರ್. ಅಶೋಕ್ ಅವರು ಉತ್ತರ ಪ್ರದೇಶದಲ್ಲಿ 25 ಕೋಟಿ ಜನಸಂಖ್ಯೆ ಇರಬಹುದು, ಅಲ್ಲಿ ಕೇವಲ 8 ಜನ ಸದಸ್ಯರಿದ್ದಾರೆ. ಆದರೆ, ರಾಜ್ಯದಲ್ಲಿ 6.5 ಕೋಟಿ ಜನಸಂಖ್ಯೆಗೆ 16 ಜನ ಸದಸ್ಯರಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಕೆಪಿಎಸ್‌ಸಿಯ ಸದಸ್ಯರ ಸಂಖ್ಯೆ ಅಧ್ಯಕ್ಷರೂ ಸೇರಿದಂತೆ 14 ರಿಂದ 16 ಕ್ಕೆ ಏರಿಸಿದ್ದು ಬೊಮ್ಮಾಯಿಯವರ ಸರ್ಕಾರ. ಇರಲಿ ಈ ಕುರಿತೂ ಕೂಡ ನಾವು ಏನಾದರೂ ಕ್ರಮಗಳನ್ನು ತೆಗೆದುಕೊಳ್ಳಲೇಬೇಕು ಎಂದರು.

ನಾವು ಕೆಪಿಎಸ್‌ಸಿ ಸಿಬ್ಬಂದಿ ನೇಮಕ, ವರ್ಗಾವಣೆ ಇತ್ಯಾದಿಗಳ ಕುರಿತಂತೆ ನಿಯಮಗಳಿಗೆ ಹಲವಾರು ತಿದ್ದುಪಡಿ ತರಲು ಉದ್ದೇಶಿಸಿದ್ದೇವೆ. ಪ್ರಯತ್ನಗಳನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ಕೆಎಎಸ್ ಪೂರ್ವಭಾವಿ ಪರೀಕ್ಷೆಯ ವಿಷಯ :

384 ಹುದ್ದೆಗಳ ಗೆಜೆಟೆಡ್ ಪ್ರೊಬೆಷನರ್ ಪೂರ್ವಭಾವಿ ಪರೀಕ್ಷೆಯನ್ನು ಆಯೋಗವು ಮೊದಲಿಗೆ 27 ಆಗಸ್ಟ್ 2024ರಂದು ನಡೆಸಿದ್ದು, ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳ ಕನ್ನಡ ಭಾಷಾಂತರದಲ್ಲಿನ ಲೋಪದೋಷಗಳಿಂದ ಗೊಂದಲ ಉಂಟಾದ ಹಿನ್ನೆಲೆ, ಈ ಬಗ್ಗೆ ಪರಿಶೀಲಿಸಲು ಆಯೋಗವು ವಿಷಯ ತಜ್ಞರುಗಳ ಸಮಿತಿಗಳನ್ನು ರಚಿಸಿತ್ತು. ಈ ಸಮಿತಿಯು ಭಾಷಾಂತರದ ಲೋಪದಿಂದಾಗಿ ಎರಡೂ ಪತ್ರಿಕೆಗಳಿಂದ ಒಟ್ಟು 10 ಪ್ರಶ್ನೆಗಳ ಕೀ-ಉತ್ತರಗಳು ಪರಿಷ್ಕೃತಗೊಳ್ಳಲಿವೆ ಎಂಬ ಅಭಿಪ್ರಾಯವನ್ನು ನೀಡಿದೆ.

ಆದಾಗ್ಯೂ, ಆಯೋಗ ಮರು ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿ, 29 ಡಿಸೆಂಬರ್ 2024ರಂದು ಮರುಪರೀಕ್ಷೆ ನಡೆಸಿದೆ. ಈ ಮರು ಪರೀಕ್ಷೆಯಲ್ಲಿಯೂ ಸಹ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಭಾಷಾಂತರದಲ್ಲಿ ಲೋಪವಿರುವುದಾಗಿ ದೂರುಗಳು ಸ್ವೀಕೃತವಾದ ಹಿನ್ನೆಲೆ, ಆಯೋಗವು ವಿಷಯ ತಜ್ಞರುಗಳ ಸಮಿತಿಯನ್ನು ಮತ್ತೊಮ್ಮೆ ರಚಿಸಿದೆ. ಈ ಸಮಿತಿ ಎರಡೂ ಪತ್ರಿಕೆಗಳನ್ನು ಪರಿಶೀಲಿಸಿ, ಒಟ್ಟು 6 ಪ್ರಶ್ನೆಗಳು ತಪ್ಪಾಗಿದ್ದು, ಕೃಪಾಂಕ ನೀಡಬಹುದೆಂದು ಅಭಿಪ್ರಾಯಪಟ್ಟಿದೆ.

ಇಂತಹ ಪ್ರಕರಣಗಳಲ್ಲಿ ವಿಷಯ ತಜ್ಞರ ಸಮಿತಿ ನೀಡುವ ಅಭಿಪ್ರಾಯಗಳನ್ನು ಪರಿಗಣಿಸುವುದನ್ನು ಉತ್ತರ ಪ್ರದೇಶ ಸರ್ವಿಸ್ ಕಮಿಷನ್ V/s ರಾಹುಲ್ ಸಿಂಗ್ ಪ್ರಕರಣ 2018 ರಲ್ಲಿ ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ ಎಂದು ಸಿಎಂ ತಿಳಿಸಿದರು.

ಈ ಹಿಂದಿನ ಪರೀಕ್ಷೆಗಳ ತುಲನಾತ್ಮಕ ದತ್ತಾಂಶ ವಿಶ್ಲೇಷಣೆಯನ್ವಯ 2023-24ನೇ ಸಾಲಿನಲ್ಲಿ ಕನ್ನಡ ಮಾಧ್ಯಮ ಪರೀಕ್ಷೆಯನ್ನು ತೆಗೆದುಕೊಂಡು ಮುಖ್ಯ ಪರೀಕ್ಷೆಗೆ ಅರ್ಹರಾದ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಸಂಖ್ಯೆಯು ಕಳೆದ ಸಾಲಿನ ನೇಮಕಾತಿಗೆ ಹೋಲಿಸಿದಲ್ಲಿ ಶೇ.6.50 ರಷ್ಟು ಹೆಚ್ಚಳವಾಗಿರುತ್ತದೆಂದು ಆಯೋಗವು ಮಾಧ್ಯಮಗಳಿಗೆ ಪ್ರಕಟ ಮಾಡಿದೆ.

ಈಗಾಗಲೇ ಮುಖ್ಯ ಪರೀಕ್ಷೆಗೆ ಅರ್ಜಿಗಳನ್ನು ಆಹ್ವಾನಿಸಿ, ಆಯೋಗವು ಅಧಿಸೂಚನೆಯನ್ನು ಹೊರಡಿಸಿದ್ದು, ಇದನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ ಪ್ರಕರಣ ಬಾಕಿ ಇದೆ.

ಪ್ರಕರಣವು ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಈ ಹಂತದಲ್ಲಿ ಸರ್ಕಾರವು ಯಾವುದೇ ನಿರ್ಣಯವನ್ನು ಕೈಗೊಳ್ಳುವುದು ನ್ಯಾಯೋಚಿತವಾಗಿರುವುದಿಲ್ಲ. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾದ ನಂತರ ಆಯೋಗವು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಸರ್ಕಾರವು ಆಯೋಗಕ್ಕೆ ಸೂಚನೆ ನೀಡುತ್ತದೆ. ಈ ಹಂತದಲ್ಲಿ ಸರ್ಕಾರವು ಯಾವುದೇ ಕ್ರಮಗಳನ್ನು ಕೈಗೊಳ್ಳಲು ಬರುವುದಿಲ್ಲ ಎಂದು ಸಿಎಂ ವವರಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರ ನೇಮಕಾತಿ ಪ್ರಕರಣ :

ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರು 25 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಯನ್ನು ನಡೆಸಿ ಅಂತಿಮ ಆಯ್ಕೆಪಟ್ಟಿಯನ್ನು 31 ಜನವರಿ 2024 ರಂದು ಪ್ರಕಟಿಸಿರುತ್ತದೆ. ತಾತ್ಕಾಲಿಕ ಆಯ್ಕೆಪಟ್ಟಿಗೆ ಆನಂದ್ ಎಸ್.ಸಿದ್ಧಾರೆಡ್ಡಿ ಅವರು 25 ಸೆಪ್ಟೆಂಬರ್ 2023 ರಂದು ಸಲ್ಲಿಸಿರುವ ಆಕ್ಷೇಪಣೆಯನ್ನು ಪರಿಶೀಲಿಸುವ ಸಲುವಾಗಿ ಆಯೋಗದಲ್ಲಿರುವ ಸದಸ್ಯರುಗಳನ್ನೊಳಗೊಂಡ ಸದಸ್ಯರ ಸಮಿತಿಯನ್ನು ಆಯೋಗವು ರಚಿಸಿ ಅಂತಿಮ ವರದಿಯನ್ನು ಈ ಕೆಳಕಂಡ ಪ್ರಮುಖ ಶಿಫಾರಸ್ಸುಗಳೊಂದಿಗೆ ಸರ್ಕಾರಕ್ಕೆ ಸಲ್ಲಿಸಿರುತ್ತದೆ.

1. 10 ಅಭ್ಯರ್ಥಿಗಳ ಅಭ್ಯರ್ಥಿತ್ವವನ್ನು ರದ್ದುಪಡಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು.
2. ಇನ್ನುಳಿದ ಕಳಂಕರಹಿತ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಜಾರಿ ಮಾಡುವುದು.
3. ಸದರಿ ಸಮಿತಿಯ ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿಯುವ ಸಲುವಾಗಿ ಹೆಚ್ಚಿನ ತನಿಖೆಯನ್ನು ಪೊಲೀಸ್/ ಸಿಐಡಿ ಮುಖಾಂತರ ಮಾಡಿಸುವುದು.

ಆಯ್ಕೆಯಾದ ಅಭ್ಯರ್ಥಿ ವಿಶ್ವಾಸ್.ಎಸ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದು, ಈ ಸಂಬಂಧ ನ್ಯಾಯಾಲಯ “ಈ ಪ್ರಕರಣದಲ್ಲಿ ಮುಂದಿನ ವಿಚಾರಣೆವರೆಗೆ ಯಾವುದೇ ಕ್ರಮಕೈಗೊಳ್ಳದಂತೆ ” ನಿರ್ದೇಶನ ನೀಡಿದೆ. ಪ್ರಕರಣ ಇತ್ಯರ್ಥ ಆದ ಕೂಡಲೇ ಈ ಕುರಿತು ಕ್ರಮವಹಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ನೇಮಕಾತಿ ಪ್ರಕ್ರಿಯೆ ಸಂಬಂಧಿಸಿದಂತೆ, ಈ ಕೆಳಕಂಡ ಸುಧಾರಣೆಗಳನ್ನು ಮಾಡಲು ಸರ್ಕಾರವು ಮುಂದಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಎಲ್ಲಾ ಪರೀಕ್ಷೆಗಳನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಸಲಾಗುತ್ತಿದೆ. ಪ್ರತಿ ಅಭ್ಯರ್ಥಿಗೂ ವೈಯಕ್ತಿಕ ಒಎಂಆರ್ ಹಾಳೆಯನ್ನು ಬಾರ್ ಕೋಡ್ ನೊಂದಿಗೆ ನೀಡಲಾಗುತ್ತಿದ್ದು, ನಂತರ ಅತ್ಯಂತ ಗೌಪ್ಯವಾಗಿ ಸ್ಕ್ಯಾನ್ ಮಾಡಲಾಗುತ್ತಿದೆ.

ಕರ್ನಾಟಕ ಲೋಕಸೇವಾ ಆಯೋಗ (ಸೇವಾ ಷರತ್ತುಗಳು) ವಿನಿಯಮಗಳು, 1957ಕ್ಕೆ ಸಮಗ್ರ ತಿದ್ದುಪಡಿಯನ್ನು ತರಲು ಅಧಿಸೂಚನೆ ಹೊರಡಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಿದೆ.

ಕರ್ನಾಟಕ ಲೋಕಸೇವಾ ಆಯೋಗದ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರಗಳು) ಅಧಿನಿಯಮ, 1959ರ ಕಾಯ್ದೆಗೆ ತಿದ್ದುಪಡಿ ತರಲು ಪ್ರಸ್ತಾಪಿಸಲಾಗಿದೆ.

ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಎಲ್ಲಾ ಇಲಾಖೆಗಳು ಪ್ರತಿ ವರ್ಷ ಹುದ್ದೆಗಳನ್ನು ಆಯ್ಕೆ ಪ್ರಾಧಿಕಾರಗಳಿಗೆ ನಿಯಮಿತವಾಗಿ ಬಿಡುಗಡೆ ಮಾಡಲು ವಾರ್ಷಿಕ ವೇಳಾಪಟ್ಟಿಯನ್ನು ನಿಗದಿಪಡಿಸಿ 17 ಜನವರಿ 2025 ರಂದು ಸುತ್ತೋಲೆ ಹೊರಡಿಸಲಾಗಿದೆ.

ಪರೀಕ್ಷೆಗಳಲ್ಲಿನ ಪ್ರಶ್ನೆ ಪತ್ರಿಕೆಯಲ್ಲಿನ ಕನ್ನಡ ಭಾಷಾಂತರವನ್ನು ಸಮರ್ಪಕವಾಗಿ ನಿರ್ವಹಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗಗಳ ಸಹಯೋಗದೊಂದಿಗೆ ಒಂದು ಕನ್ನಡ ಭಾಷಾ ತಜ್ಞರ ತಂಡವನ್ನು ರಚಿಸಲು ಪ್ರಸ್ತಾಪಿಸಿದೆ.

ಕೇಂದ್ರ ಲೋಕಸೇವಾ ಆಯೋಗವು ನಡೆಸುವ ನೇಮಕಾತಿ ವಿಧಾನಗಳನ್ನು ಪರಿಶೀಲಿಸಿ, ಕರ್ನಾಟಕ ಲೋಕಸೇವಾ ಆಯೋಗದಲ್ಲಿಯೂ ಅಳವಡಿಸಿಕೊಳ್ಳಲು ಸೂಚನೆಗಳನ್ನು ನೀಡಲಾಗಿದೆ.

ಕೆಎಎಸ್ ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ಆಯೋಗಕ್ಕೆ ಸೂಚನೆ ನೀಡಲಿದೆ ಎಂದು ಸಿಎಂ ಹೇಳಿದ್ದಾರೆ. 

1. ಕೆಎಎಸ್ ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಲೋಪದೋಷಗಳಿಗೆ ಕಾರಣರಾದ ವಿಷಯ ತಜ್ಞರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಅವರ ಮೇಲೆ ಕ್ರಮಗಳನ್ನು ತೆಗೆದುಕೊಳ್ಳಬೇಕು.

2. ಭಾಷಾಂತರಕಾರರ ಲೋಪವಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು.

3. ಆಯೋಗವು ನಡೆಸುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಮೊದಲು ಕನ್ನಡದಲ್ಲಿ ತಯಾರಿಸಿ, ನಂತರ ಇಂಗ್ಲೀಷ್‌ಗೆ ಭಾಷಾಂತರ ಮಾಡಬೇಕು.

ಏನೇ ಆದರೂ ಈಗ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಹಾಗೂ ಕೆಎಟಿಗಳು ನೀಡುವ ಆದೇಶಗಳನ್ನು ಆಧರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು. ಈ ವಿಚಾರದಲ್ಲಿ ಯಾವುದೇ ಮುಲಾಜುಗಳು ಸರ್ಕಾರಕ್ಕಿಲ್ಲ ಎಂಬುದನ್ನು ಸದನಕ್ಕೆ ತಿಳಿಸಬಯಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್‌ ಕಮಿಷನ್ ಆರೋಪ : ಸಿಎಂಗೆ ತನಿಖಾ ವರದಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...