Homeಕರ್ನಾಟಕಬಳ್ಳಾರಿ: ಶ್ರೀ ಕೃಷ್ಣದೇವರಾಯ ವಿ.ವಿ: ಒಳಜಗಳದ ಒಳಸುಳಿಗಳು

ಬಳ್ಳಾರಿ: ಶ್ರೀ ಕೃಷ್ಣದೇವರಾಯ ವಿ.ವಿ: ಒಳಜಗಳದ ಒಳಸುಳಿಗಳು

- Advertisement -
- Advertisement -

ಮುತ್ತುರಾಜ್ |

ಶೈಕ್ಷಣಿಕವಾಗಿ ಹಿಂದುಳಿದಿರುವ ಬಳ್ಳಾರಿ ಜಿಲ್ಲೆಯಲ್ಲಿ ಹೊಸ ಶಿಕ್ಷಣ ಕ್ರಾಂತಿಯನ್ನು ಮಾಡಬೇಕೆಂಬ ಆಶಯದೊಂದಿಗೆ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವನ್ನು 2010ರಲ್ಲಿ ಆರಂಭಿಸಲಾಯಿತು. ಕೊಪ್ಪಳ ಮತ್ತು ಬಳ್ಳಾರಿ ಎರಡು ಜಿಲ್ಲೆಗಳಲ್ಲಿ ಅಧಿಕಾರ ವ್ಯಾಪ್ತಿ ಹೊಂದಿರುವ, ಬಳ್ಳಾರಿಯ ವಿನಾಯಕನಗರದಲ್ಲಿ 100 ಎಕರೆ ವಿಶಾಲ ಪ್ರದೇಶದಲ್ಲಿ ಸ್ಥಾಪಿತವಾಗಿರುವ ಈ ವಿ.ವಿಯು ಶುರುವಾಗಿ 9 ವರ್ಷ ಆದರೂ ತನ್ನ ಮಹತ್ವಾಕಾಂಕ್ಷೆಯನ್ನು ಈಡೇರಿಸಲು ಸಫಲವಾಗಿಲ್ಲ. ಅಷ್ಟರಲ್ಲಾಗಲೇ ವಿ.ವಿಯು ನೇಮಕಾತಿ ಗೊಂದಲದಿಂದ ನಲುಗುತ್ತಿದ್ದು ಇಲ್ಲಿನ ಒಳಜಗಳ ಬೀದಿಗೆ ಬಂದುನಿಂತಿದೆ. ಗುಣಮಟ್ಟದ ಉನ್ನತ ಶಿಕ್ಷಣದ ಕನಸೊತ್ತು ಬರುವ ವಿದ್ಯಾರ್ಥಿಗಳ ಪಾಲಿಗೆ ಇದು ನಿಜವಾಗಲೂ ಸಮಗ್ರ ವಿ.ವಿ ಅನಿಸಿಕೊಳ್ಳುವುದು ಯಾವಾಗ ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ.
ಕಳೆದ ಹದಿನೈದು ದಿನಗಳಿಂದ ಕೃಷ್ಣದೇವರಾಯ ವಿ.ವಿಯಲ್ಲಿ ನಡೆಯುವ ಜಗಳಗಳು ದಿನಪತ್ರಿಕೆ, ಟಿವಿಗಳಿಗೆ ಆಹಾರವಾಗತೊಡಗಿವೆ. ಕುಲಪತಿ ಪ್ರೊ.ಎಂ.ಎಸ್ ಸುಭಾಷ್‍ರವರು ಕುಲಸಚಿವರಾದ ಪ್ರೊ.ಬಿ.ಕೆ ತುಳಸಿಮಾಲರವರನ್ನು ಪತ್ರಿಕಾಗೋಷ್ಠಿಯಿಂದ ಎದ್ದು ನಡಿಯಿರಿ ಎಂದದ್ದು ಇನ್ನು ಚರ್ಚೆಯಾಗುತ್ತಲೆ ಇದೆ. ಇವರಿಬ್ಬರ ನಡುವಿನ ಭಿನ್ನಾಭಿಪ್ರಾಯ ನೇಮಕಾತಿ ವಿಚಾರದಲ್ಲಿ ದೊಡ್ಡ ಮಾರಾಮಾರಿಯೆ ನಡೆಯುತ್ತಿದೆ.

ಏನಿದು ವಿವಾದ?
ವಿ.ವಿಯು 2012 ರಲ್ಲಿ 134 ಬೋಧಕ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ಮುಂದಾಗಿತ್ತು. 80% ಹೈದರಾಬಾದ್ ಕರ್ನಾಟಕದವರಿಗೆ ಮತ್ತು ಉಳಿದ ಹುದ್ದೆಗಳು ಜನರಲ್ ಮೆರಿಟ್ ಎಂದು ನಿರ್ಧರಿಸಲಾಗಿತ್ತು. ಶೇ.20 ಜನರಲ್ ಹುದ್ದೆಗಳು ನೇಮಕಗೊಂಡವೇ ಹೊರತು ಹೈ.ಕ ಭಾಗದವರಿಗೆ ದಕ್ಕಬೇಕಾಗಿದ್ದ 80% ಹುದ್ದೆಗಳು ಹಾಗೆ ಉಳಿದವು. ಹೈ.ಕ ದವರಿಗೆ ದಕ್ಕಬೇಕಿದ್ದ ಜೊತೆಗೆ 45 ಬೋಧಕೇತರ ಸಿಬ್ಬಂದಿ ನೇಮಕಾತಿಯೂ ನೆನೆಗುದಿಗೆ ಬಿದ್ದಿತ್ತು. ಪ್ರಸ್ತುತ ಕುಲಪತಿಗಳು ಈ ಹುದ್ದೆಗಳ ಭರ್ತಿಗೆ ಮುಂದಾಗಿದ್ದು 2018ರಲ್ಲೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದರು. ಆಗ ಮಧ್ಯ ಪ್ರವೇಶಿಸಿದ ಕೆಲವರು ಕುಲಪತಿಗಳ ಹುದ್ದೆ ಇನ್ನೇನು ಮುಗಿಯಲಿದೆ, ಚುನಾವಣೆ ಹತ್ತಿರ ಬಂದಿರುವಾಗ ನೇಮಕಾತಿ ನಡೆಯಬಾರದೆಂದು ಕೊಕ್ಕು ಹಾಕಿದರು.
ಆದರೆ ಇದಕ್ಕೆ ತಲೆಕೆಡಿಸಿಕೊಳ್ಳದ ಕುಲಪತಿಗಳು ಸರ್ಕಾರಕ್ಕೆ ಪತ್ರ ಬರೆದು 371ಜೆ ಮೀಸಲಾತಿಗೆ ಅನ್ಯಾಯವಾಗುತ್ತಿದೆ, ಹಾಗಾಗಿ ತುರ್ತು ನೇಮಕಾತಿ ನಡೆಯಬೇಕೆಂದು ಕೋರಿದರು. ಇದಕ್ಕೆ ನೇಮಕಾತಿ ಪ್ರಕ್ರಿಯೆ ನಡೆಸಲು ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಹಸಿರು ನಿಶಾನೆ ತೋರಿದ್ದರು. ಅಷ್ಟು ಮಾತ್ರವಲ್ಲ ಈ ವಿಷಯಕ್ಕೆ ಚುನಾವಣಾ ಆಯೋಗ ಸಲ್ಲಿಸಿದ್ದ ನೀತಿಸಂಹಿತೆ ಉಲ್ಲಂಘನೆಯ ಅರ್ಜಿಯನ್ನು ಹೈ ಕೋರ್ಟ್ ವಜಾ ಮಾಡಿ ನೇಮಕಾತಿಗೆ ಚುನಾವಣಾ ನೀತಿಸಂಹಿತೆ ಅಡ್ಡಿ ಬರುವುದಿಲ್ಲ ಎಂದು ತೀರ್ಪು ನೀಡಿತ್ತು. ಇದರಿಂದ ಬೋಧಕ ಸಿಬ್ಬಂದಿಯ ನೇಮಕಾತಿಯು ನಡೆಯಿತು. ಈಗ ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯೂ ಚಾಲನೆಯಲ್ಲಿದ್ದು ಇನ್ನೊಂದು ವಾರದಲ್ಲಿ ಮುಗಿಯಲಿದೆ. ತಾನು ಕುಲಪತಿ ಹುದ್ದೆಯಿಂದ ನಿರ್ಗಮಿಸುವುದರೊಳಗೆ ನೇಮಕಾತಿ ಮುಗಿಸಲೇಬೇಕೆಂದು ಪ್ರೊ.ಸುಭಾಷ್‍ರವರು ಹಠತೊಟ್ಟರೆ, ಕುಲಸಚಿವೆ ಪ್ರೊ.ಬಿ.ಕೆ ತುಳಸಿಮಾಲರವರು ನಿಯಮಾವಳಿಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂದು ಆರೋಪ ಮಾಡಿದರು. ಜೊತೆಗೆ ತಾನು ನೇಮಕಾತಿ ಪ್ರಕ್ರಿಯೆಯಿಂದ ಹೊರಗುಳಿಯುವುದಾಗಿ ಘೋಷಿಸಿದ್ದರು. ಇನ್ನೊಂದಿಷ್ಟು ಜನ ನೇಮಕಾತಿಯಲ್ಲಿ ಭ್ರಷ್ಟಾಚಾರವೂ ನಡೆಯುತ್ತಿದೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಟಿಯೆಂಬ ಡ್ರಾಮ
ವಿ.ವಿಯ 7 ಘಟಿಕೋತ್ಸವದ ನಿಮಿತ್ತ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿತ್ತು. ಕುಲಪತಿ ಪ್ರೊ.ಎಂ.ಎಸ್ ಸುಭಾಷ್ ಮತ್ತು ಕುಲಸಚಿವೆ ಪ್ರೊ.ಬಿ.ಕೆ ತುಳಸಿಮಾಲ ಉಪಸ್ಥಿತರಿದ್ದರು. ಪತ್ರಕರ್ತರೊಬ್ಬರ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕದ ಕುರಿತು ಪ್ರಶ್ನೆ ಎತ್ತಿದ್ದರು. ಆಗ ಪ್ರೊ.ಬಿ.ಕೆ ತುಳಸಿಮಾಲರವರು ಉತ್ತರಿಸಿ ನೇಮಕಾತಿಯಲ್ಲಿ ಹಲವು ಗೊಂದಲಗಳಾಗಿವೆ, ಹಾಗಾಗಿ ನಾನು ನೇಮಕಾತಿ ಪ್ರಕ್ರಿಯೆಯಿಂದ ಹೊರಗುಳಿದಿದ್ದೆ ಎನ್ನುತ್ತಿದ್ದಂತೆ ಪ್ರೊ.ಎಂ.ಎಸ್ ಸುಭಾಷ್‍ರವರು ಮಾತನಾಡಿ “ದಯವಿಟ್ಟು ನೀವು ಇಲ್ಲಿಂದ ಎದ್ದು ಹೋಗಿ, ನಿಮ್ಮ ಬಗ್ಗೆಯೇ ನಾನೊಂದಿಷ್ಟು ಮಾತಾಡಬೇಕಿದೆ. ನೀವಿದ್ದರೆ ಅದು ಸಾಧ್ಯವಿಲ್ಲ” ಎಂದು ಖಾರವಾಗಿ ನುಡಿದಿದ್ದಾರೆ. ನೊಂದ ತುಳಿಸಿಮಾಲರವರು ತಕ್ಷಣವೇ ಸುದ್ದಿಗೋಷ್ಠಿಯಿಂದ ಹೊರನಡೆದಿದ್ದು ಆ ಫೋಟೋ ಎಲ್ಲಾ ಕಡೆ ವೈರಲ್ ಆಗಿದೆ.
ನೇಮಕಾತಿ ಪ್ರಕ್ರಿಯೆಗೆ ನನಗೆ ಯಾವುದೇ ಆಕ್ಷೇಪವಿಲ್ಲ, ಕುಲಪತಿಗಳು ನನ್ನನ್ನು ಕುಲಸಚಿವೆಯನ್ನಾಗಿ ನೋಡುತ್ತಿಲ್ಲ. ತರಾತುರಿಯಲ್ಲಿ 30 ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುತ್ತಿರುವುದು ಸರಿಯಲ್ಲ ಎಂದು ಪ್ರೊ.ಬಿ.ಕೆ ತುಳಸಿಮಾಲ ಹೇಳುತ್ತಾರೆ. ಇದಕ್ಕೆ ಪ್ರತಿಯಾಗಿ ಬೆಂಗಳೂರು, ಮೈಸೂರು ಸೇರಿ ದಕ್ಷಿಣ ಕರ್ನಾಟಕದವರಿಗೆ ಉತ್ತರ ಕರ್ನಾಟಕದ ಜನರ ಕಷ್ಟಗಳು ಅರ್ಥವಾಗುತ್ತಿಲ್ಲ. ಒಂದು ವೇಳೆ ನೇಮಕಾತಿ ಪ್ರಕ್ರಿಯೆ ನಿಂತರೆ ಹೈದರಾಬಾದ್ ಕರ್ನಾಟಕ ಭಾಗಕ್ಕೆ ದೊಡ್ಡ ಅನ್ಯಾಯವಾಗುತ್ತದೆ. ನನ್ನ ಅವಧಿಯಲ್ಲಿ ಈ ಕೆಲಸ ಮುಗಿದು ಹೈ.ಕ ಭಾಗದವರಿಗೆ ಉದ್ಯೋಗ ಸಿಗಬೇಕೆಂಬುದು ನನ್ನ ಆಶಯ ಎಂದು ಪ್ರೊ.ಎಂ.ಎಸ್ ಸುಭಾಷ್ ಹೇಳುತ್ತಾರೆ.
ಇನ್ನು ಈ ವಿಚಾರವಾಗಿ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಬಳ್ಳಾರಿ ಜಿಲ್ಲಾಧ್ಯಕ್ಷರಾದ ಸಿರಿಗೇರಿ ಪನ್ನರಾಜ್‍ರವರು 371ಜೆ ವಿಚಾರಕ್ಕೆ ಹೆಚ್ಚು ಮಹತ್ವ ಕೊಡುತ್ತಾರೆ. ಹಿಂದೆ ಕುಲಪತಿಯಾಗಿದ್ದ ಮೈಸೂರು ಭಾಗದ ಮಂಜಪ್ಪ ಹೊಸಮನಿಯವರು 371ಜೆ ಮೀಸಲಾತಿಯನ್ನು ಪಾಲಿಸದೇ ಸ್ಥಳಿಯೇತರರನ್ನು ಮಾತ್ರ ನೇಮಕಾತಿ ಮಾಡಿದ್ದರು. ಆಗ ಹೈ.ಕ ದ ಅಭ್ಯರ್ಥಿಗಳು ಆಯ್ಕೆಯಾಗಿದ್ದರೆ ಇಂದಿಗೆ ಅವರಿಗೆ 7 ವರ್ಷಗಳ ಸೇವಾ ಹಿರಿತನ ಲಭಿಸುತ್ತಿತ್ತು. ಅವರು ಮಾಡಿದ ಅನ್ಯಾಯದಿಂದ 7 ವರ್ಷಗಳ ಸೇವಾ ಹಿರಿತನವನ್ನು ಕಳೆದುಕೊಂಡಿರುವ ಈ ಭಾಗದ ಅರ್ಹ ಅಭ್ಯರ್ಥಿಗಳಿಗೆ ಈಗಲಾದರೂ ನ್ಯಾಯ ಸಿಗಬೇಕು ಹಾಗಾಗಿ ನೇಮಕಾತಿ ಪ್ರಕ್ರಿಯೆ ಬೇಗ ಮುಗಿಯಬೇಕೆಂದು ಹೇಳಿದ್ದಾರೆ. ಇದೇ ವೇಳೆ ಭ್ರಷ್ಟಾಚಾರಕ್ಕೆ ಅವಕಾಶವಿರಬಾರದು ಈ ಕುರಿತು ತನಿಖೆಯೂ ನಡೆಯಬೇಕೆಂದು ಅಭಿಪ್ರಾಯಪಡುತ್ತಾರೆ.

ಮರೀಚಿಕೆಯಾದ ಗುಣಮಟ್ಟದ ಶಿಕ್ಷಣ
ಬಳ್ಳಾರಿ ನಗರದಲ್ಲಿದ್ದರೂ ಬಹುತೇಕ ವಿದ್ಯಾರ್ಥಿಗಳು ವಿ.ವಿ ಸೇರಲು ಹಿಂದೇಟು ಹಾಕುತ್ತಿದ್ದಾರೆ. ನೂರು ಎಕರೆಗಳ ವಿಶಾಲತೆಯಿದ್ದರೂ ಇದು ಒಂದು ಸಾಮಾನ್ಯ ಪದವಿ ಕಾಲೇಜಿಗಿಂತಲೂ ಕಳಪೆಯಾಗಿ ಕಾಣುತ್ತಿದೆ ಎಂಬುದು ಅವರ ಆರೋಪ. ಆರೋಪಕ್ಕೆ ಸಾಕ್ಷಿಯೆಂಬಂತೆ ವಿವಿಯಲ್ಲಿ ಅತ್ಯುತ್ತಮ ಬೋಧನೆ, ಪಾರದರ್ಶಕ ಪರೀಕ್ಷೆ, ಉತ್ತಮ ಫಲಿತಾಂಶವೂ ಕಂಡುಬರುತ್ತಿಲ್ಲ. ಮೂಲಭೂತ ಸೌಲಭ್ಯಗಳ ಕೊರತೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಕೊರತೆ, ಅಸಮರ್ಪಕ ಆಡಳಿತ, ಕೆಟ್ಟು ನಿಂತ ಹಾಸ್ಟೆಲ್‍ಗಳು, ಇಚ್ಛಾಶಕ್ತಿಯ ಕೊರತೆ ಇದಕ್ಕೆ ಕಾರಣವಾಗಿದೆ. ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಹಂಪಿಯಲ್ಲಿರುವ ಹಂಪಿ ಕನ್ನಡ ವಿ.ವಿ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾದರೆ ಬಳ್ಳಾರಿ ಕೃಷ್ಣದೇವರಾಯ ವಿ.ವಿ ಮಾತ್ರ ಅರಾಜಕತೆಗೆ ಕುಖ್ಯಾತಿಯಾಗುತ್ತಿದೆ.

ಕಳಪೆ ಆಹಾರದ ಕೊಂಪೆಗಳಾದ ಹಾಸ್ಟೆಲ್‍ಗಳು
ಇನ್ನು ಕಾಲೇಜಿಗೆ ಸೇರಿದರೂ ಕೂಡ ಯಾವುದೇ ಕಾರಣಕ್ಕೂ ಹಾಸ್ಟೆಲ್‍ಗಳಿಗೆ ಸೇರುವುದಿಲ್ಲ ಎಂಬುದು ಎಲ್ಲಾ ವಿದ್ಯಾರ್ಥಿಗಳ ಸಾಮಾನ್ಯ ದೂರು. ಅಪರಿಮಿತ ಭ್ರಷ್ಟಾಚಾರದ ಕಾರಣಕ್ಕೆ ಇಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ. ಶುಚಿತ್ವದ ಬಗ್ಗೆ ಕೇಳಲೇಬೇಕಿಲ್ಲ. ಈ ಕಷ್ಟವನ್ನು ಸಹಿಸಿಕೊಳ್ಳಲಾಗದೇ ಬಹಳಷ್ಟು ವಿದ್ಯಾರ್ಥಿಗಳು ಕಾಲೇಜಿಗೆ ಸೇರಿ ನಂತರ ಬಿಟ್ಟು ಬಿಟ್ಟಿದ್ದಾರೆ. ಹಾಸ್ಟೆಲ್ ಸರಿಯಿಲ್ಲದ್ದಕ್ಕೆ ಬಹಳಷ್ಟು ವಿದ್ಯಾರ್ಥಿಗಳು ಕಾಲೇಜು ತೊರೆದಿದ್ದಾರೆ. ಇದರ ವಿರುದ್ಧ ಹೋರಾಟ ನಡೆಸಿದ ಎಸ್‍ಎಫ್‍ಐ ವಿದ್ಯಾರ್ಥಿಯೊಬ್ಬನಿಗೆ ಪ್ರಾಧ್ಯಾಪಕರೊಬ್ಬರು ಹಲ್ಲೆ ನಡೆಸಿದ ಘಟನೆ ನಡೆದು ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಡಾ.ಮೋಹನ್ ದಾಸ್ ಎಂಬ ಪ್ರಾಧ್ಯಾಪಕರು ಎಸ್‍ಎಫ್‍ಐ ಪದಾಧಿಕಾರಿ ಬಸವರಾಜ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು. ಅವರನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಮತ್ತು ಹಾಸ್ಟೆಲ್‍ಗಳನ್ನು ಸಂಬಂಧಿಸಿದ ಇಲಾಖೆಗಳೆ ನಡೆಸುವಂತೆ ಆಗ್ರಹಿಸಿ ಕಳೆದ ವರ್ಷ ಸೆಪ್ಟಂಬರ್‍ನಲ್ಲಿ ವಿ.ವಿಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳು ಹೋರಾಟ ನಡೆಸಿದ್ದರು.
ಒಟ್ಟಾರೆಯಾಗಿ ದಿನದಿಂದ ದಿನಕ್ಕೆ ಅಭಿವೃದ್ದಿಯತ್ತ ಸಾಗಬೇಕಿದ್ದ ವಿ.ವಿ ಕೆಲವು ವ್ಯಕ್ತಿಗಳ ನಡುವಿನ ವೈಯಕ್ತಿಕ ಇಗೋ, ಅಧಿಕಾರದ ಮದ, ಭ್ರಷ್ಟಾಚಾರ, ಸರ್ಕಾರದ ನಿರ್ಲಕ್ಷ್ಯದ ಕಾರಣಕ್ಕಾಗಿ ದಿನೇ ದಿನೇ ಕುಸಿಯುತ್ತಿದೆ. ಇದರಿಂದ ಸಾವಿರಾರು ಅಮಾಯಕ ವಿದ್ಯಾರ್ಥಿಗಳ ಭವಿಷ್ಯ ಕಮರಿಹೋಗುತ್ತಿದೆ. ಅತಿಹೆಚ್ಚು ಬಡತನವಿರುವ, ಅನಕ್ಷರತೆ ಇರುವ, ನಿರುದ್ಯೋಗವಿರುವ ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಈ ಪರಿಸ್ಥಿತಿ ಇರುವುದು ನಾಡಿನ ದುರಂತವಾಗಿದೆ. ಕೂಡಲೇ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ವಿ.ವಿಯನ್ನು ಗುಣಮಟ್ಟದತ್ತ ತೆಗೆದುಕೊಂಡು ಹೋಗಬೇಕಿದೆ. ಅದಕ್ಕಾಗಿ ಜನಪರ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಅಲ್ಲಿನ ವಿದ್ಯಾರ್ಥಿಗಳು ದನಿಯೆತ್ತಬೇಕಿದೆ, ದಿಟ್ಟ ಹೋರಾಟ ನಡೆಯಬೇಕಿದೆ. ಅಂತಹ ಹೋರಾಟದ ಸಂದರ್ಭ ಬೇಗ ಬರಲೆಂದು ಪತ್ರಿಕೆ ಆಶಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...