Homeಮುಖಪುಟಕೃಷ್ಣ ಜನ್ಮಭೂಮಿ ಪ್ರಕರಣ: ಮಸೀದಿ ತೆರವಿಗೆ ಕೋರಿದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಕೃಷ್ಣ ಜನ್ಮಭೂಮಿ ಪ್ರಕರಣ: ಮಸೀದಿ ತೆರವಿಗೆ ಕೋರಿದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಶಾಹಿ ಈದ್ಗಾ ಮಸೀದಿಯ ವಿವಾದಿತ ಭೂಮಿಯನ್ನು ಹಿಂದೂಗಳ ಪಾಲಿಗೆ ಹಸ್ತಾಂತರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ.

ಅರ್ಜಿದಾರರು ಶಾಹಿ ಈದ್ಗಾ ಮಸೀದಿಯ ವಿವಾದಿತ ನಿವೇಶನದ ಮಾಲೀಕತ್ವವನ್ನು ಹಿಂದೂಗಳಿಗೆ ನೀಡಬೇಕು ಎಂದು ಕೋರಿದ್ದರು. ಈ ಕುರಿತು ಬುಧವಾರ ನ್ಯಾಯಾಲಯದ ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಶ್ರೀವಾಸ್ತವ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಎರಡೂ ಕಡೆಯವರು ತಮ್ಮ ತಮ್ಮ ವಾದ ಮಂಡಿಸಿ, ವಿಚಾರಣೆ ಪೂರ್ಣಗೊಂಡ ಬಳಿಕ ನ್ಯಾಯಾಲಯ ತನ್ನ ತೀರ್ಪನ್ನು ಸೆಪ್ಟೆಂಬರ್ 4ರಂದು ಕಾಯ್ದಿರಿಸಿತ್ತು.

ಸುಪ್ರೀಂಕೋರ್ಟ್ ವಕೀಲ ಮೆಹಕ್ ಮಹೇಶ್ವರಿ ಅವರು 2020ರಲ್ಲಿ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೆ ಹಿಂದೂಗಳು ವಿವಾದಿತ ಸ್ಥಳದಲ್ಲಿ ಪೂಜೆ ಸಲ್ಲಿಸಬೇಕು. ಪಿಐಎಲ್ ಅದರ ಪ್ರಸ್ತುತ ರೂಪದಲ್ಲಿ ವಿವಾದಿತ ಆವರಣದ ವೈಜ್ಞಾನಿಕ ತನಿಖೆಯನ್ನು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ (ASI) ನಡೆಸಬೇಕು ಎಂದು ಒತ್ತಾಯಿಸಿದೆ.

”ಈ ಹಿಂದೆ ವಿವಾದಿತ ಸ್ಥಳದಲ್ಲಿ ದೇವಸ್ಥಾನವಿದ್ದು, ಅದನ್ನು ಕೆಡವಿ ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿದೆ” ಎಂದು ಹಿಂದೂ ಪರ ಇರುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹೇಳಲಾಗಿದೆ.

”ಈಗ ಮಸೀದಿ ಇರುವ ಸ್ಥಳದಲ್ಲಿ ದ್ವಾಪರ ಯುಗದಲ್ಲಿ ಕಂಸನ ಕಾರಾಗೃಹವಿದ್ದು, ಇಲ್ಲಿ ಕಂಸನು ಶ್ರೀಕೃಷ್ಣನ ತಂದೆ-ತಾಯಿಗಳನ್ನು ಬಂಧಿಸಿದ್ದನು . ಈ ಜೈಲಿನಲ್ಲಿಯೇ ಶ್ರೀಕೃಷ್ಣನ ಹುಟ್ಟಿದ್ದಾನೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಆದ್ದರಿಂದ ಇದು ದೇವರ ನಿಜವಾದ ಜನ್ಮಸ್ಥಳವಾಗಿದೆ” ಎಂದು ಅರ್ಜಿದಾರರ ವಾದವಾಗಿದೆ.

ಈ ಹಿಂದೆ ವಿಚಾರಣೆ ವೇಳೆ ವಕೀಲರು ಗೈರು ಹಾಜರಾದ ಕಾರಣ ಈ ಅರ್ಜಿಯನ್ನು ಈಗಾಗಲೇ ಒಮ್ಮೆ ತಿರಸ್ಕರಿಸಲಾಗಿದೆ. ಈ ಪಿಐಎಲ್‌ನ್ನು 19 ಜನವರಿ 2021 ರಂದು ತಿರಸ್ಕರಿಸಲಾಯಿತು. ಹೈಕೋರ್ಟ್ ಈ PIL ಅನ್ನು ಮಾರ್ಚ್ 2022ರಲ್ಲಿ ಮರು-ಸಂಗ್ರಹಿಸಿತ್ತು. ಅದನ್ನು ಮತ್ತೊಮ್ಮೆ ವಿಚಾರಣೆಗೆ ಹಾಜರುಪಡಿಸಲು ಹೈಕೋರ್ಟ್ ಸೂಚನೆಗಳನ್ನು ನೀಡಿತ್ತು.

ಇದನ್ನೂ ಓದಿ: ಮಹಿಷ ದಸರಾ ನಿಲ್ಲಿಸಬೇಕು ಎನ್ನಲು ಪ್ರತಾಪ್ ಸಿಂಹ ಯಾರು?: ಬಿಜೆಪಿ ಮುಖಂಡರಿಂದ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...