Homeಮುಖಪುಟಕೃಷ್ಣ ಜನ್ಮಭೂಮಿ ಪ್ರಕರಣ: ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋದ ಮಸೀದಿ ಸಮಿತಿ

ಕೃಷ್ಣ ಜನ್ಮಭೂಮಿ ಪ್ರಕರಣ: ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋದ ಮಸೀದಿ ಸಮಿತಿ

- Advertisement -
- Advertisement -

ಕೃಷ್ಣ ಜನ್ಮಭೂಮಿ ವಿವಾದಕ್ಕೆ ಸಂಬಂಧಪಟ್ಟಂತೆ ಮಥುರಾದ ಶಾಹಿ ಈದ್ಗಾ ಮಸೀದಿ ಆವರಣದ ಸಮೀಕ್ಷೆಗೆ ಕಮಿಷನರ್ ನೇಮಕ ಮಾಡಲು ಅನುಮತಿ ನೀಡಿರುವ ಅಲಹಾಬಾದ್ ಹೈಕೋರ್ಟ್‌ ಆದೇಶ ವಿರುದ್ದ ಮಸೀದಿ ಸಮಿತಿ ಮತ್ತೊಮ್ಮೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ನ್ಯಾಯಾಲದ ಮೇಲ್ವಿಚಾರಣೆಯಲ್ಲಿ ಕಮಿಷನರ್ ನೇತೃತ್ವದಲ್ಲಿ ಶಾಹಿ ಈದ್ಗಾ ಮಸೀದಿ ಆವರಣದ ಸಮೀಕ್ಷೆಗೆ ಅನುಮತಿ ನೀಡಿ ಡಿಸೆಂಬರ್ 15ರಂದು ಅಲಹಾಬಾದ್ ಹೈಕೋರ್ಟ್‌ ಆದೇಶ ನೀಡಿತ್ತು. ಇದಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಡಿಸೆಂಬರ್ 15ರಂದು ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ಗೆ ಮೌಖಿಕ ಮನವಿ ಮಾಡಿತ್ತು. ಸುಪ್ರೀಂ ಕೋರ್ಟ್‌ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತ್ತು.

ಇದೀಗ, ಮಸೀದಿ ಸಮಿತಿಯು ಹೈಕೋರ್ಟ್‌ನ ಆದೇಶವನ್ನು ಔಪಚಾರಿಕವಾಗಿ ಪ್ರಶ್ನಿಸಿ ಅಡ್ವೊಕೇಟ್-ಆನ್-ರೆಕಾರ್ಡ್ ಆರ್‌ಹೆಚ್‌ಎ ಸಿಕಂದರ್ ಮೂಲಕ ವಿಶೇಷ ರಜೆ ಅವಧಿಯ ಅರ್ಜಿಯನ್ನು ಸಲ್ಲಿಸಿದೆ.

ಮಥುರಾದ ಕೃಷ್ಣ ಜನ್ಮ ಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯ ಆವರಣದಲ್ಲಿ ಸಮೀಕ್ಷೆ ಮಾಡುವಂತೆ ಕೋರಿದ್ದ ಅರ್ಜಿಯನ್ನು ಡಿ.14,2023ರಂದು ಅಲಹಾಬಾದ್ ಹೈಕೋರ್ಟ್‌ ಮಾನ್ಯ ಮಾಡಿದೆ. ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಲು ಅನುಮತಿ ನೀಡಿದೆ.

ಮಥುರಾದ ಕೃಷ್ಣ ಜನ್ಮಭೂಮಿಯಲ್ಲಿದ್ದ ದೇವಸ್ಥಾನವನ್ನು ಕೆಡವಿ ಮೊಗಲ್ ದೊರೆ ಔರಂಗಜೇಬ್ ನಿರ್ದೇಶನದಂತೆ ಅಲ್ಲಿ ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಸುಮಾರು 12ರಷ್ಟು ಅರ್ಜಿಗಳು ಈಗಾಗಲೇ ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಕೆಯಾಗಿದ್ದು, ಎಲ್ಲಾ ಅರ್ಜಿಗಳು ಕತ್ರಾ ಕೇಶವ್ ದೇವಸ್ಥಾನಕ್ಕೆ ಹೊಂದಿಕೊಂಡಿರುವ 13.17 ಎಕರೆ ಜಾಗದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿವೆ.

ಇದನ್ನೂ ಓದಿ : ಮದರಸಾಗಳಲ್ಲಿನ ಮುಸ್ಲಿಮೇತರ ಮಕ್ಕಳ ಬಗ್ಗೆ ಮಾಹಿತಿ ನೀಡದ 11 ರಾಜ್ಯಗಳ ಕಾರ್ಯದರ್ಶಿಗಳಿಗೆ NCPCR ಸಮನ್ಸ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ...

0
ಕಾಂಗ್ರೆಸ್‌ ಪ್ರಣಾಳಿಕೆಯ ಬಗ್ಗೆ ಮೋದಿ, ಅಮಿತ್‌ ಶಾ ಚುನಾವಣಾ ಭಾಷಣದಲ್ಲಿ ಸುಳ್ಳು ಆಪಾದನೆ ಮಾಡುತ್ತಿರುವ ಮಧ್ಯೆ ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಚರ್ಚೆಗೆ ನರೇಂದ್ರ ಮೋದಿ ಅಥವಾ ಅವರಿಂದ ನಿಯೋಜಿಸಲ್ಪಟ್ಟ ಯಾರಾದರು ಬನ್ನಿ ಎಂದು...