Homeಕರ್ನಾಟಕಕ್ರಿಯಾ ಮಾಧ್ಯಮ ಪ್ರಕಟನೆಯ ‘ಜರ್ಮನ್ ರೈತ ಯುದ್ಧ’ - ಪುಸ್ತಕ ಬಿಡುಗಡೆ, ಉಪನ್ಯಾಸ, ಸಂವಾದ

ಕ್ರಿಯಾ ಮಾಧ್ಯಮ ಪ್ರಕಟನೆಯ ‘ಜರ್ಮನ್ ರೈತ ಯುದ್ಧ’ – ಪುಸ್ತಕ ಬಿಡುಗಡೆ, ಉಪನ್ಯಾಸ, ಸಂವಾದ

- Advertisement -
- Advertisement -

ಕ್ರಿಯಾ ಮಾಧ್ಯಮ ಮತ್ತು ನವಕರ್ನಾಟಕ ಜಂಟಿಯಾಗಿ ಹಮ್ಮಿಕೊಂಡಿರುವ ‘ಏಂಗೆಲ್ಸ್-200 ಮಾಲಿಕೆ’ಯ ಲೇಖಕ ನಾ. ದಿವಾಕರ ಅವರು ಅನುವಾದಿಸಿರುವ ‘ಜರ್ಮನ್ ರೈತ ಯುದ್ಧ’ ಪುಸ್ತಕ ಬಿಡುಗಡೆ ಸೆಪ್ಟೆಂಬರ್ 21ರ ಬುಧವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಬಸವನಗುಡಿಯಲ್ಲಿರುವ ‘ಕ್ರಿಯಾ ಮಾಧ್ಯಮ ಪುಸ್ತಕ ಮಳಿಗೆ’ಯಲ್ಲಿ ನಡೆಯಲಿದೆ.

ಚಿಂತಕ ಜಿ.ಎನ್.ನಾಗರಾಜ್ ಅವರು ಪುಸ್ತಕವನ್ನು ಬಿಡುಗಡೆ ಮಾಡಿ, “ಜರ್ಮನ್ ರೈತ ಯುದ್ಧದ ಮರು-ಓದು: ಜನರ ಸಂಕಟಗಳು, ಚಳುವಳಿಗಳು ಮತ್ತು ಧಾರ್ಮಿಕ ರೂಪಗಳು” ಎಂಬ ವಿಷಯದ ಕುರಿತು  ಉಪನ್ಯಾಸ ನೀಡಿ ಸಂವಾದಕ್ಕೆ ಚಾಲನೆ ನೀಡಲಿದ್ದಾರೆ. ಸಂವಾದದಲ್ಲಿ ಹೋರಾಟಗಾರ ರಾಘವೇಂದ್ರ ಕುಷ್ಟಗಿ ಮತ್ತು ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಭಾಗವಹಿಸಲಿದ್ದಾರೆ. ರೈತ ಹೋರಾಟಗಾರ ನವೀನ್ ಕುಮಾರ್ ಎಚ್.ಆರ್ ಪುಸ್ತಕವನ್ನು ಪರಿಚಯ ಮಾಡಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1524-25ರಲ್ಲಿ ನಡೆದ ಜರ್ಮನ್ ರೈತ ಯುದ್ಧ 1789ರ ಫ್ರೆಂಚ್ ಕ್ರಾಂತಿಯ ಮೊದಲು ನಡೆದ ಅತ್ಯಂತ ದೊಡ್ಡ ಕ್ರಾಂತಿಕಾರಿ ಹೋರಾಟವಾಗಿದೆ. ಇತರ ಹಲವು ಅಂಶಗಳ ಜತೆಗೆ ಲೂಥರ್ ಮಂಡಿಸಿದ ಧಾರ್ಮಿಕ ಸುಧಾರಣೆಗಳ ಹಿನ್ನೆಲೆಯಲ್ಲಿ ಬೆಳೆದು ಬಂದ ಇದು, ಹಲವು ತಿಂಗಳ ಕಾಲ ಮಧ್ಯ ಯುರೋಪಿನ ಈಗಿನ ಜರ್ಮನಿ, ನೆದರ್ ಲ್ಯಾಂಡ್ಸ್ ಗಳ ಬಹುಭಾಗಗಳನ್ನು ಆವರಿಸಿ ಬೃಹತ್ ರೈತ ಯುದ್ಧವಾಗಿತ್ತು.

ಇದನ್ನೂ ಓದಿ: ತ್ಯಾಗ -ಸ್ಪೂರ್ತಿಯ ಸಂಕೇತ ಮಾತೆ ರಮಾಬಾಯಿ ಅಂಬೇಡ್ಕರ್

ಚಳುವಳಿಯ ಆರಂಭದಲ್ಲೇ ರೂಪಿತವಾಗಿದ್ದ “ರೈತರ ಹನ್ನೆರಡು ಕಟ್ಟಳೆಗಳ” ಜಾರಿಗಾಗಿ ಈ ಯುದ್ಧವನ್ನು ಸಾರಲಾಯಿತು. ಇದು ರೈತ ಸಂಘಟನೆಗಳ ಒಕ್ಕೂಟದ ಪ್ರಣಾಳಿಕೆ, ಸಂವಿಧಾನ, ಹಕ್ಕೊತ್ತಾಯಗಳ ಪಟ್ಟಿ, ಗೆದ್ದರೆ ಮುಂಬರುವ ಆಡಳಿತದ ಕಾರ್ಯಸೂಚಿ ಇವೆಲ್ಲವನ್ನೂ ಒಳಗೊಂಡಿತ್ತು. ಇದನ್ನು ಮೊದಲ ಮಾನವ ಹಕ್ಕುಗಳ ಘೋಷಣೆ ಎಂದೂ ಪರಿಗಣಿಸಲಾಗಿದೆ.

ಜರ್ಮನ್ ರೈತ ಯುದ್ಧದಲ್ಲಿ ಸಶಸ್ತ್ರವಾಗಿ ಭಾಗವಹಿಸಿದ ರೈತರ ಸಂಖ್ಯೆ 3 ಲಕ್ಷವನ್ನು ಮೀರಿತ್ತು. ಯುದ್ಧದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ರೈತರು ಬಲಿಯಾಗಿದ್ದರು. ಈ ಚಾರಿತ್ರಿಕ ರೈತರ ಯುದ್ಧ ಸೋತರೂ ಯುರೋಪಿನಲ್ಲೂ ಜಾಗತಿಕವಾಗಿಯೂ ಹಲವು ಸ್ಥಿತ್ಯಂತರಗಳ ಮುನ್ನುಡಿ ಬರೆಯಿತು. ಇಂದಿನವರೆಗೂ ಎಲ್ಲ ರೈತ ಯುದ್ಧಗಳಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದು, ಪಾಳೆಯಗಾರಿ ವ್ಯವಸ್ಥೆಯ ವಿರುದ್ಧ ಬಂಡಾಯದ ಪ್ರತೀಕವಾಗಿದೆ.

ಇದನ್ನೂ ಓದಿ: ಓಶೋ ಕಂಡಂತೆ ವಿವೇಕಾನಂದರು

ಹೆಚ್ಚಿನ ರೈತ ಸಂಬಂಧಿ ಪ್ರಶ್ನೆಗಳನ್ನು ಮೊದಲ ಬಾರಿಗೆ ಅಂದಿನ ಸಂದರ್ಭದಲ್ಲಿ ಎತ್ತಿ ಉತ್ತರಿಸಲು ಪ್ರಯತ್ನಿಸಿದ, ಈ ಕೃತಿ ಇಂದಿಗೂ ಅತ್ಯಂತ ಪ್ರಸ್ತುತ ಎಂದು ಕ್ರಿಯಾ ಮಾಧ್ಯಮ ಹೇಳಿದೆ. ಪುಸ್ತಕವು ಏಂಗೆಲ್ಸ್ ಅವರ ಗತಿತಾರ್ಕಿಕ ಭೌತವಾದವನ್ನು ಚರಿತ್ರೆಗೆ ಅನ್ವಯಿಸಿದ ಆರಂಭಿಕ ಪ್ರಯತ್ನಗಳಲ್ಲಿ ಒಂದಾಗಿದ್ದು, ಈ ವಿಧಾನ ಇತರ ಚಾರಿತ್ರಿಕ ವಿದ್ಯಮಾನಗಳ ಸಮಗ್ರ ಅರ್ಥೈಸುವಿಕೆಗೆ ಒಂದು ಮಾದರಿಯನ್ನು ಒದಗಿಸುತ್ತದೆ ಎಂದು ಕ್ರಿಯಾ ಮಾಧ್ಯಮ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...