HomeಚಳವಳಿKRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಸಿಎಂ ಎದುರು ಹೋರಾಟ: ಮುಖಂಡರ ಬಂಧನ

KRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಸಿಎಂ ಎದುರು ಹೋರಾಟ: ಮುಖಂಡರ ಬಂಧನ

ಕೆಆರ್‌ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಅದು ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ. ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

- Advertisement -
- Advertisement -

KRS ಬುಡದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಒತ್ತಾಯಿಸಿ ರೈತಸಂಘ, ದಲಿತ ಸಂಘರ್ಷ ಸಮಿತಿ, ಸ್ವರಾಜ್ ಇಂಡಿಯಾ ಪಕ್ಷ ಹಾಗೂ ಜನಾಂದೋಲನಗಳ ಮಹಾಮೈತ್ರಿ ಸಂಘಟನೆಗಳು ಹೋರಾಟಕ್ಕಿಳಿದಿವೆ. ಇಂದು ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಿಸಲು ಆಗಮಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕಪ್ಪು ಬಾವುಟ ತೋರಿಸಲು ರೈತರು ಸಜ್ಜಾಗಿದ್ದಾರೆ.

ಜಲಾಶಯ
ಕೃಪೆ: ಸ್ಟಾರ್ ಆಫ್ ಮೈಸೂರು

ಬುಧವಾರ ನಡೆದ ಜಂಟಿ ಸುದ್ಧಿಗೋಷ್ಟಿಯಲ್ಲಿ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ, ವಿದ್ಯುತ್ ಕಾಯ್ದೆಗಳಿಗೆ ತಿದ್ದುಪಡಿ ಮಾಡುತ್ತಿರುವುದನ್ನು ವಿರೋಧಿಸಿ, ಮತ್ತು ಕೆಆರ್‌ಎಸ್‌ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಶಾಶ್ವತ ನಿಷೇ‍ಧಕ್ಕೆ ಮತ್ತು ನಾಲ್ವಡಿಯವರ ಏಕ ಪ್ರತಿಮೆಗೆ ಒತ್ತಾಯಿಸಿ ಸಿಎಂಗೆ ಕಪ್ಪ ಬಾವುಟ ಪ್ರದರ್ಶಿಸಲಾಗುವುದು ಎಂದು ಹೇಳಿದ್ದರು.

ಇಂದು ಮಧ್ಯಾಹ್ನದ ವೇಳೆಗೆ ಸಿಎಂ ಕೆಆರ್‌ಎಸ್‌ಗೆ ಆಗಮಿಸಲಿದ್ದು ಬಾಗಿನ ಅರ್ಪಿಸಲಿದ್ದಾರೆ. ಹಾಗಾಗಿ ಈಗಾಗಲೇ ಸ್ಥಳಕ್ಕೆ ಆಗಮಿಸುತ್ತಿರುವ ನೂರಾರು ಪ್ರತಿಭಟನಾಕಾರರನ್ನು ಜಿಲ್ಲಾ ಪೋಲೀಸರು ತಡೆದಿದ್ದಾರೆ. ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮತ್ತು ರವೀಂದ್ರ ಅವರನ್ನು ಈಗಾಗಲೆ ಬಂಧಿಸಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ ನಾನುಗೌರಿ.ಕಾಂಗೆ ತಿಳಿಸಿದರು. ನಮ್ಮನ್ನೂ ಬಂಧಿಸುವುದಾಗಿ ಪೋಲೀಸರು ಹೇಳಿದ್ದಾರೆ. ಆದರೂ ನಾವು ಕಛೇರಿಯ ಬಳಿಯೇ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಸೇರಿದಂತೆ ಸುಮಾರು 250ಕ್ಕೂ ಹೆಚ್ಚು ಹೋರಾಟಗಾರರನ್ನು ಸಹ ಕೆಆರ್‌ಎಸ್‌ಗೆ ಹೋಗುವಾಗ ಹೊಸೂರ್ ಗೇಟ್ ಬಳಿ ಬಂಧಿಸಲಾಗಿದೆ. ಕೆಆರ್‌ಎಸ್‌ಗೆ ಪ್ರತಿಭಟನೆಗೆ ಬರುತ್ತಿದ್ದವರನ್ನು ದಾರಿ ಮಧ್ಯೆಯೆ ತಡೆದು ಬಂಧಿಸಿದ್ದಾರೆ ಎಂದ ರೈತ ಸಂಘದ ಅಧ್ಯಕ್ಷರು ಹೇಳಿದ್ದಾರೆ.

ಬಡಗಲಪುರ ನಾಗೇಂದ್ರ
ಬಡಗಲಪುರ ನಾಗೇಂದ್ರ. ಫೋಟೊ ಕೃಪೆ: ಪ್ರಜಾವಾಣಿ

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ, ‘KRS ಜಲಾಶಯದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸದಿದ್ದರೆ, ರಾಜ್ಯ ಮಟ್ಟದಲ್ಲಿ ದೊಡ್ಡ ಹೋರಾಟ ಹಮ್ಮಿಕೊಳ್ಳುವುದಾಗಿ ಯಡಿಯೂರಪ್ಪನವರು ಎಚ್ಚರಿಕೆ ನೀಡಿದ್ದರು. ಆದರೆ ಈಗ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ವರ್ಷ ಕಳೆದರೂ ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಹಾಗಾಗಿಯೇ ಈ ಪ್ರತಿಭಟನೆ ಎಂದು ಕೆಂಪೂಗೌಡರು ಹೇಳಿದರು.

ಕೆ ಆರ್ ಎಸ್ ಬಳಿ ಗಣಿಗಾರಿಕೆ
ಕೃಪೆ: ಸ್ಟಾರ್ ಆಫ್ ಮೈಸೂರು

ಗಣಿಗಾರಿಕೆಯಿಂದ ಸುತ್ತಮುತ್ತಲಿನ ಕೃಷಿ ಪರಿಸರಕ್ಕೆ, ಅರಣ್ಯ ಪ್ರದೇಶಕ್ಕೆ ಮತ್ತು ಜಲಾಶಯಕ್ಕೆ ಹೆಚ್ಚಿನ ತೊಂದರೆಯಾಗಲಿದೆ. ಇಲ್ಲಿನ ಗಣಿಗಾರಿಕೆಯ ನಿಷೇಧದ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದ್ದರೂ, ಸರ್ಕಾರ ಈ ಕೆಲಸಕ್ಕೆ ಕೈ ಹಾಕುತ್ತಿಲ್ಲ ಎಂದು ಹಲವು ಹೋರಾಟಗಾರರು ಅಸಮಧಾನ ವ್ಯಕ್ತಪಡಿಸಿದರು.

ದಕ್ಷಿಣ ಕರ್ನಾಟಕದ ಪ್ರಮುಖ ಜಿಲ್ಲೆಗಳ ಜನರಿಗೆ ನೀರುಣಿಸುತ್ತಾ, ರೈತದ ಬದುಕನ್ನು ಮುನ್ನಡೆಸುತ್ತಿರುವ KRS ಜಲಾಶಯಕ್ಕೇ ಅಪಾಯವೊದಗಿದೆ. ಕೆಆರ್‌ಎಸ್‍ನಿಂದ 10.5ಕಿ.ಮೀ ದೂರದಲ್ಲಿರುವ ನೂರಾರು ಎಕರೆಯಿರುವ ಬೇಬಿಬೆಟ್ಟದ ಕಾವಲಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದ ಹೊರಟ ಕಂಪನಗಳು 2018ರ ಸೆಪ್ಟೆಂಬರ್ 25ರಂದು ಕೆಆರ್‌ಎಸ್ ಬುಡದಲ್ಲಿರುವ ಭೂಕಂಪ ಮಾಪನ ಯಂತ್ರದಲ್ಲಿ ದಾಖಲಾಗಿದೆ.

ಕೆಆರ್‌ಎಸ್ ನಿರ್ಮಾಣವಾಗಿ ಇನ್ನೂ ಒಂದು ಶತಮಾನವೂ ಕಳೆದಿಲ್ಲ ಆದರೀಗ ಅದು ಶಿಥಿಲೀಕರಣದ ಸುಳಿಗೆ ಸಿಲುಕುತ್ತಿದೆ. ಜಲಾಶಯ ನಿಂತಿರುವುದೇ ಸುತ್ತ-ಮುತ್ತಲ ಬೆಟ್ಟಗಳ ಆಧಾರದಿಂದ. ಅದೇ ಬೆಟ್ಟಗಳ ಸರಣಿಯ ಇನ್ನೊಂದು ಕಡೆ ಗುಡ್ಡ ಕರಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ.

ಈ ಕಂಪನ ಭೂಕಂಪವಲ್ಲ, ಹಾಗಾಗಿ ಅಂತಹ ತೊಂದರೆಯಿಲ್ಲ ಎಂಬ ವರದಿಯನ್ನು ನೈಸರ್ಗಿಕ ವಿಕೋಪ ಸಂಸ್ಥೆಯು ನೀಡಿ ಹಲವು ಎಚ್ಚರಿಕೆಯ ಮಾತುಗಳನ್ನು ಹೇಳಿದೆ. ಕೆಆರ್‌ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಮೆಗಾಬ್ಲಾಸ್ಟ್‌ಗೆ ಅನುಮತಿ ಇಲ್ಲದಿದ್ದರೂ ಬೇಬಿ ಬೆಟ್ಟದಲ್ಲಿ ಸಿಡಿಸಿದ ಮೆಗಾಬ್ಲಾಸ್ಟ್‌ನಿಂದಾಗಿ ಈ ಕಂಪನ ಉಂಟಾಗಿದೆ. ಈ ಸದ್ಯ ಅಪಾಯವಾಗಿಲ್ಲ ಎಂಬುದನ್ನು, ಮುಂದೆಯೂ ಅಪಾಯವಾಗುವುದಿಲ್ಲವೆಂದು ವ್ಯಾಖ್ಯಾನಿಸುತ್ತಿರುವ ಗಣಿ ಮಾಲೀಕರು ನಿರಂತರ ಲೂಟಿಗೆ ಮುಂದಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವವೆ.

ಈಗಾಗಲೇ ಇಂತಹ ಮೈನಿಂಗ್ ಮಾಫಿಯಾ, ದರೋಡೆ, ಲೂಟಿಗಳಂತಹ ಕಾರಣಗಳಿಂದಾಗಿ ದೇಶದ 36 ಜಲಾಶಯಗಳು ಶಿಥಿಲಗೊಂಡಿವೆ. ಹಾಗಾಗಿ 87 ವರ್ಷ ಹಳೆಯದಾದ ಕೆಆರ್‌ಎಸ್ ಕೂಡ ಈ ಪಟ್ಟಿಗೆ ಸೇರುವ ದಿನಗಳು ದೂರವಿಲ್ಲ.

ಸ್ವತಃ ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಇಲಾಖೆಯೇ KRS ಜಲಾಶಯ ಅಪಾದಲ್ಲಿದೆ ಎಂದು ವರದಿ ಸಲ್ಲಿಸಿದ್ದರೂ ಸಹ ರಾಜ್ಯ ಸರ್ಕಾರ ಗಣಿಗಾರಿಕೆಯ ನಿಷೇಧಕ್ಕೆ ಮುಂದಾಗುತ್ತಿಲ್ಲ. ಜಲಾಶಯಕ್ಕೆ ಏನಾದರೂ ಹಾನಿಯಾದರೆ ಬೆಂಗಳೂರು ಸೇರಿದಂತೆ ಸುಮಾರು 8 ಜಿಲ್ಲೆಗಳಿಗೆ ತೊಂದರೆಯಾಗಲಿದೆ. ವಿರೋಧ ಪಕ್ಷದಲ್ಲಿದ್ದಾಗ ಯಡಿಯೂರಪ್ಪನವರು ಹೇಳಿದ ಮಾತನ್ನು ನೆನಪಿಸುವ ಸಲುವಾಗಿ ಈ ಹೋರಾಟ ಮಾಡುತ್ತಿದ್ದೇವ ಎಂದು ಹೋರಾಟಗಾರರಾದ ಸುರೇಶ್ ಶಂಭುನಹಳ್ಳಿ ಹೇಳಿದರು.

ಇಂದು ಬಂಧನಕ್ಕೆ ಒಳಗಾಗಿರುವ ಮತ್ತೋರ್ವ ಹೋರಾಟಗಾರರಾದ ಅಭಿ ಹನಕೆರೆ ಮಾತನಾಡಿ, KRS ಉಳಿವಿಗಾಗಿ ಪ್ರತಿಭಟಿಸುತ್ತೇವೆ ಎಂದು ತಿಳಿದ ತಕ್ಷಣ ನೆನ್ನೆ ರಾತ್ರಿಯಿಂದಲೇ ಮಂಡ್ಯದಾದ್ಯಂತ ಇರುವ ಬಹುತೇಕ ಎಲ್ಲಾ ನಾಯಕರನ್ನೂ ಬಂಧಿಸಲಾಗಿದೆ. ಇದರ ಮೂಲಕ ಸರ್ಕಾರ ಸರ್ವಾಧಿಕಾರಿ ಧೋರಣೆಯನ್ನು ಮೆರೆಯುತ್ತಿದೆ. ಇಂಥಾ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಬಾಗಿನ ಬಿಡುವಂತಹ ಕಂದಾಚಾರಗಳನ್ನು ಮಾಡಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. 


ಇದನ್ನೂ ಓದಿ: ಕೆಆರ್‌ಎಸ್ ಬುಡದಲ್ಲಿ ಗಣಿಗಾರಿಕೆ ಕಂಪನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...