Homeಕರ್ನಾಟಕಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

ಸರ್ಕಾರಿ ಕಚೇರಿಗಳ ಹಲವು ಸಮಸ್ಯೆಗಳನ್ನು ಬಯಲಿಗೆಳೆಯುತ್ತಿರುವ KRS ಪಕ್ಷ

‘ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ’ ಮತ್ತು ‘ ನಾಡಪ್ರೇಮಿಗಳೇ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎಂಬ ಘೋಷವಾಕ್ಯದಡಿ, ಪ್ರತಿ ಜಿಲ್ಲೆಯಲ್ಲೂ ‘ಲಂಚಮುಕ್ತ ಕರ್ನಾಟಕ’ ಜಾಗೃತಿ ಅಭಿಯಾನವನ್ನು ಪಕ್ಷ ನಡೆಸುತ್ತಿದೆ.

- Advertisement -
- Advertisement -

ರಾಜ್ಯದ ಪ್ರಮುಖ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ರವಿ ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಎರಡು ವರ್ಷಗಳ ಹಿಂದೆ ಪ್ರಾರಂಭವಾಗಿರುವ ‘ಕರ್ನಾಟಕ ರಾಷ್ಟ್ರ ಸಮಿತಿ’(KRS) ಪಕ್ಷವು, ‘ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ’ ಮತ್ತು ‘ ನಾಡಪ್ರೇಮಿಗಳೇ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ’ ಎಂಬ ಘೋಷವಾಕ್ಯದಡಿ ರಾಜ್ಯವ್ಯಾಪಿ ಅಭಿಯಾನವನ್ನು ನಡೆಸುತ್ತಿದೆ. ಆಗಸ್ಟ್ 8 ರಿಂದ ಪ್ರಾರಂಭವಾಗಿರುವ ಈ ಕಾರ್ಯಕ್ರಮವು ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ, 32 ದಿನಗಳ ಕಾಲ, 3500 ಕಿಲೋಮೀಟರ್‌ ಪ್ರವಾಸ ಮತ್ತು ಜನಜಾಗೃತಿ ಅಭಿಯಾನದ ಮೂಲಕ ನಡೆಯಲಿದೆ.

ಈಗಾಗಲೆ 12 ದಿನವನ್ನು ಪೂರೈಸಿರುವ ಅಭಿಯಾನವು ಪ್ರಸ್ತುತ ಲಿಂಗಸುಗೂರು ಮತ್ತು ಮಸ್ಕಿಯಲ್ಲಿದ್ದು, ಇಂದು ಅಲ್ಲಿನ ತಾಲೂಕು ಕಚೇರಿಗಳಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

ಅಭಿಯಾನದ ಅಂಗವಾಗಿ ಪ್ರತಿ ಜಿಲ್ಲೆಗಳ ಸರ್ಕಾರಿ ಕಚೇರಿಗಳಿಗೆ ತೆರಳಿ ಅಲ್ಲಿ, “ಲಂಚಮುಕ್ತ ಕರ್ನಾಟಕ” ಜಾಗೃತಿ ಅಭಿಯಾನವನ್ನು ನಡೆಸುತ್ತಿದೆ. ಇಷ್ಟೇ ಅಲ್ಲದೆ, ಸ್ಥಳೀಯ ಭ್ರಷ್ಟಾಚಾರಿಗಳ ವಿರುದ್ದ ಜನಜಾಗೃತಿ, ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಸಾರ್ವಜನಿಕರೊಡನೆ ಮತ್ತು ವೈದ್ಯಾಧಿಕಾರಿಗಳೊಡನೆ ಅಲ್ಲಿಯ ಮೂಲಭೂತ ಸೌಲಭ್ಯಗಳ ಕುರಿತು ಚರ್ಚೆ, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ, ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ಆಗ್ರಹ, ಪರಿಸರ ಕಾರ್ಯಕ್ರಮಗಳು, ಪ್ರಾಮಾಣಿಕ ಹೋರಾಟಗಾರ/ರಾಜಕಾರಣಿಗಳ ಭೇಟಿ, ಭ್ರಷ್ಟರನ್ನು ರಾಜಕೀಯದಿಂದ ಹೊರಗಟ್ಟಲು ಪ್ರಾಮಾಣಿಕರು ಚುನಾವಣಾ ರಾಜಕೀಯವನ್ನು ಪ್ರವೇಶಿಸಲು ಉತ್ತೇಜನ, ಪಕ್ಷ ಸೇರ್ಪಡೆ, ಇತ್ಯಾದಿ ಕಾರ್ಯಕ್ರಮಗಳನ್ನು ಪಕ್ಷವು ಈ ಅಭಿಯಾನದ ಅಂಗವಾಗಿ ನಡೆಸುತ್ತಿದೆ.

“ತನ್ನ ನ್ಯಾಯಬದ್ದ ಕೆಲಸಕ್ಕಾಗಿ ಯಾವುದೇ ಸರ್ಕಾರಿ ಕಚೇರಿಗೆ ಭೇಟಿ ಕೊಡುವ ಜನಸಾಮಾನ್ಯನಿಗೆ ಇಂದು ಅಲ್ಲಿ ಗೌರವ ಸಿಗುತ್ತಿಲ್ಲ. ರೈತರೂ ಸೇರಿದಂತೆ ಅತಿ ಹೆಚ್ಚು ಜನರು ಭೇಟಿ ಕೊಡುವ ಕಂದಾಯ ಇಲಾಖೆಯಲ್ಲಿಯಂತೂ ಲಂಚ ಕೊಡದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕಾದ ಪೊಲೀಸ್ ಮತ್ತು ಅಬಕಾರಿ ಇಲಾಖೆಗಳು ಇಂದು ಸುಲಿಗೆಯ, ವಂಚನೆಯ, ದೌರ್ಜನ್ಯದ ಕೇಂದ್ರಗಳಾಗಿವೆ ಹಾಗೂ ಅಪರಾಧಗಳನ್ನು ಉತ್ತೇಜಿಸುವ ಕೆಲಸವನ್ನು ಮಾಡುತ್ತಿವೆ. ಇದರ ವಿರುದ್ಧ ಕೆಆರ್‌ಎಸ್‌ ಪಕ್ಷವು ಅಭಿಯಾನವನ್ನು ನಡೆಸುತ್ತಿದೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ದೀಪಕ್ ಸಿ.ಎನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಕಛೇರಿಯಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಶ್ನೆ: KRS ಪಕ್ಷದ ರವಿಕೃಷ್ಣಾ ರೆಡ್ಡಿ ಬಂಧನ

ಈ ಮಧ್ಯೆ, ದಾವಣಗೆರೆಯಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ ಘಟನೆಯು ನಡೆದಿದೆ. ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾರೆಡ್ಡಿ ಅವರು ಹೇಳುವಂತೆ, “ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ಆಗುತ್ತಿದ್ದ ತೊಂದರೆಯನ್ನು ವಿಡಿಯೋ ಮಾಡುತ್ತಿದ್ದ KRS ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ಹರಿಹಾಯ್ದಿದ್ದಾರೆ. ಅವರ ಫೋನ್ ಕಿತ್ತುಕೊಂಡು, ಅದರಿಂದ ವಿಡಿಯೋ ಡಿಲೀಟ್ ಮಾಡಿ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡಿ, ನಂತರ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಠಾಣೆಗೂ ಎಳೆದುಕೊಂಡು ಹೋಗಿ, ಅಲ್ಲಿಯೂ ಹೆದರಿಸಿ ಬೆದರಿಸಿ ಬಲಾತ್ಕಾರದಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪೊಲೀಸರ ಈ ನಡೆಯ ಬಗ್ಗೆ ಪ್ರಕರಣ ದಾಖಲಿಸಲು ಠಾಣೆಗೆ ತೆರಳಿದಾಗ ಪಕ್ಷದ ಯುವ ಮುಖಂಡನ್ನು, ‘ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡಿದರು’ ಎಂದು ಸುಳ್ಳು ಆರೋಪ ಹೊರಿಸಿ ಠಾಣೆಯಲ್ಲಿಯೇ ಬಂಧಿಸಿ ಏಳು ಜೈಲಿನಲ್ಲಿಡಲಾಗಿತ್ತು. ಇದೀಗ ಅವರು ಜಾಮೀನಿನ ಅಡಿಯಲ್ಲಿ ಬಿಡುಗಡೆಯಾಗಿದ್ದು, ಇಂದಲ್ಲ ನಾಳೆ ದೂರುದಾರ ಪೊಲೀಸನಿಗೆ ಮಂಪರು ಪರೀಕ್ಷೆ ಮಾಡಿಸಿ ಅಮಾಯಕರ ಪ್ರಾಣ ಹಿಂಡುವ ಕಾನೂನು ಭಂಜಕ ಅಪರಾಧಿ ಮನೋಭಾವದ ಪೊಲೀಸರಿಗೆ ಪಕ್ಷವು ಪಾಠ ಕಲಿಸದೆ ಬಿಡುವುದಿಲ್ಲ” ಎಂದು ಫೇಸ್‌ಬುಕ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಪ್ರಕರಣದಲ್ಲಿ ಪೊಲೀಸರು ಅವರನ್ನು ಕೂಡಾ ವಿಚಾರಣೆಗೆ ಹಾಜರಾಗುವಂತೆ ನೋಟಿಸು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರವಿಕೃಷ್ಣ ರೆಡ್ಡಿ ತಾನು ಆಗಸ್ಟ್‌ 24 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದು, “ಪೊಲೀಸರು ಅಂದು ಬಂಧಿಸಿದರೂ ಬಂಧಿಸಬಹುದೇನೋ! ಯಾರಿಗೆ ಗೊತ್ತು? ನಾನೂ ದಾವಣಗೆರೆ ಜೈಲು ನೋಡಿಲ್ಲ. ಈ ರಾಜ್ಯದಲ್ಲಿ ಅದೆಷ್ಟು ಸಾವಿರ, ಲಕ್ಷ ಅಮಾಯಕರು ಪೊಲೀಸರಿಂದ ಅನ್ಯಾಯಕ್ಕೆ ಒಳಗಾಗಿದ್ದಾರೋ! ಎಷ್ಟೆಲ್ಲಾ ನಿರಪರಾಧಿಗಳು ಸುಳ್ಳು ಕೇಸುಗಳಲ್ಲಿ ಜೈಲು ಪಾಲಾಗಿದ್ದಾರೋ!” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅಭಿಯಾನ ಪ್ರಾರಂಭವಾಗಿ 12 ದಿನಗಳಷ್ಟೇ ಆಗಿದ್ದು ಈಗಾಗಲೆ ಪಕ್ಷದ ಅಭಿಯಾನವು ಸರ್ಕಾರಿ ಕಚೇರಿಗಳಲ್ಲಿನ ಹಲವು ಸಮಸ್ಯೆಗಳನ್ನು ಬಯಲಿಗೆ ಎಳೆದಿದೆ. ಅಭಿಯಾನದ ಎಲ್ಲಾ ದೃಶ್ಯಗಳನ್ನು ಪಕ್ಷವು ಫೇಸ್‌ಬುಕ್ ಮೂಲಕ ರಾಜ್ಯದ ಜನತೆಗೆ ತಲುಪಿಸುತ್ತಿದೆ. ಅಭಿಯಾನದ ತಂಡವು ಇನ್ನೂ ಇಪ್ಪತ್ತು ದಿನಗಳು ರಾಜ್ಯದಾದ್ಯಂತ ಸಂಚರಿಸಲಿದೆ.

ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...