Homeರಾಜಕೀಯಸಂತೋಷ್‌ ಸಾವು ಪ್ರಕರಣ: ಆರೋಪಿ ನಂ.1 ಈಶ್ವರಪ್ಪನವರಿಂದ ಅಧಿಕೃತ ರಾಜೀನಾಮೆ

ಸಂತೋಷ್‌ ಸಾವು ಪ್ರಕರಣ: ಆರೋಪಿ ನಂ.1 ಈಶ್ವರಪ್ಪನವರಿಂದ ಅಧಿಕೃತ ರಾಜೀನಾಮೆ

- Advertisement -
- Advertisement -

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಚೋದನೆ ನೀಡಿದ ಒಂದನೇ ಆರೋಪಿ, ಬಿಜೆಪಿ ಹಿರಿಯ ನಾಯಕ, ಶಾಸಕ ಕೆ.ಎಸ್‌. ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರಾಜಕೀಯ ಹೈಡ್ರಾಮವೊಂದನ್ನು ಅವರು ಮುಗಿಸಿದ್ದಾರೆ.

ರಾಜ್ಯದಾದ್ಯಂತ ಭಾರಿ ತಲ್ಲಣ ಸೃಷ್ಟಿಸಿದ್ದ ಪ್ರಕರಣದಲ್ಲಿ ಆರೋಪಿ ಈಶ್ವರಪ್ಪ ಅವರು, “ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ಮೃತ ಸಂತೋಷ್ ತನಗೆ ಯಾರೆಂದೇ ಗೊತ್ತಿಲ್ಲ, ಆತನನ್ನು ತಾನು ನೋಡಿಯೇ ಇಲ್ಲ” ಎಂದು ಹೇಳಿದ್ದರು.

ಆದರೆ ನಿನ್ನೆ ಶಿವಮೊಗ್ಗದಲ್ಲಿ ದಿಢೀರ್‌ ಪತ್ರಿಕಾಗೋಷ್ಠಿ ಕರೆದಿದ್ದ ಆರೋಪಿ ಈಶ್ವರಪ್ಪ, ಪಕ್ಷದ ಯಾರಿಗೂ ಮುಜುಗರಕ್ಕೆ ಒಳಗಾಗಬಾರದು ಎಂಬ ಕಾರಣಕ್ಕೆ ತಾನು ಶುಕ್ರವಾರ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ನೀಡುವುದಾಗಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೀಗ ಈಶ್ವರಪ್ಪ ಅವರು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಸಿಎಂ ನಿವಾಸಕ್ಕೆ ಬಳಿ ಬಂದಾಗ ಈಶ್ವರಪ್ಪನವರ ಬೆಂಬಲಿಗರು ಘೋಷಣೆಗಳನ್ನು ಕೂಗಿದರು. ‘ಈಶ್ವರಪ್ಪ ಜಿಂದಾಬಾದ್‌, ಜೈಶ್ರೀರಾಮ್‌, ರಾಜೀನಾಮೆ ಬೇಡ’ ಎಂದು ಒತ್ತಾಯಿಸಿದರು.

ರಾಜೀನಾಮೆಗೆ ಒಂದು ಸಾಲಿನಲ್ಲಿ ಕಾರಣ ತಿಳಿಸಿರುವ ಈಶ್ವರಪ್ಪನವರು, ‘ಸ್ವಇಚ್ಛೆಯಿಂದ ರಾಜೀನಾಮೆ’ ನೀಡಿರುವುದಾಗಿ ತಿಳಿಸಿದ್ದಾರೆ.

ಈ ಮಧ್ಯೆ ಶುಕ್ರವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, “ಈಶ್ವರಪ್ಪನನ್ನು ಅಗತ್ಯವಿದ್ದರಷ್ಟೆ ಪೊಲೀಸರು ಬಂಧಿಸಲಿದ್ದಾರೆ. ಅವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಅವರ ಮೇಲೆ ಯಾವುದೇ ಒತ್ತಡ ಇರಲಿಲ್ಲ. ಸಾವು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಅಗತ್ಯವಿದ್ದರೆ ಅವರನ್ನು ಬಂಧಿಸಲಿದ್ದಾರೆ. ಈಶ್ವರಪ್ಪ ತಾವು ನಿರಪರಾಧಿ ಎಂದು ಹೇಳಿದ್ದು, ಆದಷ್ಟು ಬೇಗನೆ ತನಿಖೆ ಮಾಡಿದರೆ ಆರೋಪದಿಂದ ಮುಕ್ತನಾಗುತ್ತೇನೆ ಎಂದು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗತ್ಯವಿದ್ದರಷ್ಟೆ ಈಶ್ವರಪ್ಪರನ್ನು ಪೊಲೀಸರು ಬಂಧಿಸಲಿದ್ದಾರೆ: ಸಿಎಂ ಬೊಮ್ಮಾಯಿ

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಆರೋಪಿ ಈಶ್ವರಪ್ಪ,“ನಾನು ದೇವರನ್ನು ನಂಬುವವನು, ಪ್ರಕರಣದ ಬಗ್ಗೆ ನನಗೆ ಪೂರ್ಣ ವಿಶ್ವಾವಿದೆ.  ಈ ಇಡೀ ಎಪಿಸೋಡಲ್ಲಿ ಒಂದೇ ಒಂದು ಪರ್ಸೆಂಟ್ ನನ್ನದೇನಾದರೂ ತಪ್ಪಿದ್ದರೆ, ಆ ಭಗವಂತ ನನಗೆ ಶಿಕ್ಷೆ ಕೊಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ. ಪ್ರಕರಣದಲ್ಲಿ ನಾನು ಮುಕ್ತವಾಗಿ ಹೊರಬರುತ್ತೇನೆ ಎಂದು ನನಗೆ ಪೂರ್ಣ ನಂಬಿಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ನಾನು ಮುಖ್ಯಮಂತ್ರಿಗೆ ಹೇಳಿದಾಗ ಅವರು ಕೂಡಾ ಸಂತೋಷದಿಂದ ತನಿಖೆ ಮಾಡುತ್ತೇನೆ ಎಂದು ಅವರು ಒಪ್ಪಿಕೊಂಡಿದ್ದಾರೆ. ನನ್ನ ಮನೆ ದೇವರಾದ ಚೌಡೇಶ್ವರಿ ನಾನು ತಪ್ಪಿತಸ್ಥ ಅಲ್ಲ ಎಂದು ನಿರ್ದೋಷಿಯಾಗಿ ನನ್ನನ್ನು ಹೊರ ತರುತ್ತಾಳೆ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅವರಿನ್ನೂ ಅಪರಾಧಿ ಅಂತ ನ್ಯಾಯಾಲದಲ್ಲಿ ತೀರ್ಮಾನ ಆಗಿಲ್ಲ. ಅಪರಾಧಿ ಎನ್ನುವ ತಲೆಬರಹ ಸರಿಯಲ್ಲ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...