Homeಕರ್ನಾಟಕಬಿಜೆಪಿ ವಿರುದ್ಧ ಈಶ್ವರಪ್ಪ ಬಂಡಾಯ: ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಣೆ

ಬಿಜೆಪಿ ವಿರುದ್ಧ ಈಶ್ವರಪ್ಪ ಬಂಡಾಯ: ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಣೆ

- Advertisement -
- Advertisement -

ಲೋಕಸಭೆ ಚನಾವಣೆಯಲ್ಲಿಗೆ ಬಿಜೆಪಿ ಟಿಕೆಟ್‌ ಕೈ ತಪ್ಪಿರುವ ಹಿನ್ನೆಲೆ ಆಕ್ರೋಶಗೊಂಡಿದ್ದ ಬಿಜೆಪಿಯ ಹಿರಿಯ ನಾಯಕ ಕೆಎಸ್‌ ಈಶ್ವರಪ್ಪ ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಶಿವಮೊಗ್ಗ ಕ್ಷೇತ್ರಕ್ಕೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಟಿಕೆಟ್‌ ನೀಡಲಾಗಿದೆ. ಇದೀಗ ಯಡಿಯೂರಪ್ಪ ಪುತ್ರನ ವಿರುದ್ಧ ತಾನು ಸ್ಪರ್ಧಿಸುವುದಾಗಿ ಈಶ್ವರಪ್ಪ ಘೋಷಿಸಿದ್ದಾರೆ.

ನಿನ್ನೆ ಶಿವಮೊಗ್ಗದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದು ಉದ್ವೇಗದ ತೀರ್ಮಾನ ಅಲ್ಲ. ಕಾಂಗ್ರೆಸ್‌ ಪಕ್ಷದ ಕುಟುಂಬ ರಾಜಕಾರಣವನ್ನು ವಿರೋಧಿಸಿಕೊಂಡು ಬಂದಿದ್ದೆವು. ಯಡಿಯೂರಪ್ಪ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ, ಅದಕ್ಕೆ ಮನ್ನಣೆ ನೀಡುವುದು ಸರಿಯಾ? ಪಕ್ಷವನ್ನು ಕುಟುಂಬ ರಾಜಕಾರಣದ ಹಿಡಿತದಿಂದ ಬಿಡಿಸಲು ಹೋರಾಟ ಆರಂಭಿಸಿದ್ದೇನೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿಯ ಬಿ.ವೈ.ರಾಘವೇಂದ್ರ, ಕಾಂಗ್ರೆಸ್‌ನ ಗೀತಾ ಶಿವರಾಜಕುಮಾರ್ ಅವರಿಗಿಂತ ನಾನು ಪ್ರಬಲನಾಗಿದ್ದೇನೆ. ಪ್ರಧಾನಿ ನರೆಂದ್ರ ಮೋದಿ ಅವರ ಪರವಾಗಿ ಚುನಾವಣೆಗೆ ನಿಲ್ಲುತ್ತಿದ್ದೇನೆ. ಬಿಜೆಪಿ ಮತ್ತೊಂದು ಕಾಂಗ್ರೆಸ್ ಪಕ್ಷ ಆಗಬಾರದೆಂದು ತಡೆಯಲು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಬುಧವಾರ ಸಂಜೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಿತ್ತು. ಲೋಕಸಭೆ ಚುನಾವಣೆಗೆ ಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಬಿಜೆಪಿ ನಾಯಕ ಕೆ.ಎಸ್‌ ಈಶ್ವರಪ್ಪ ಸಿಡಿದೆದ್ದಿದ್ದರು. ನನ್ನ ಮಗನಿಗೆ ಟಿಕೆಟ್ ತಪ್ಪಿಸಿದ್ದು ಯಡಿಯೂರಪ್ಪ ಎಂದು ಹೇಳಿದ್ದರು.

ಯಡಿಯೂರಪ್ಪ ಅವರು ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿಗೆ ಪಟ್ಟು ಹಿಡಿದು ಟಿಕೆಟ್ ಕೊಡಿಸಿದ್ದಾರೆ. ಆದರೆ, ನನ್ನ ಮಗ ಕಾಂತೇಶ್‌ಗೆ ಅನ್ಯಾಯ ಮಾಡಿದ್ರು, ರಾಜ್ಯದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಲುಕಿದೆ. ಕುಟುಂಬದ ಕೈಯಿಂದ ಪಕ್ಷ ರಕ್ಷಿಸಬೇಕಿದೆ. ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ ಬಿಟ್ಟು ಬೇರೆ ಲಿಂಗಾಯತ ನಾಯಕರು ರಾಜ್ಯದಲ್ಲಿ ಇಲ್ವಾ? ಪಕ್ಷದ ಚುನಾವಣಾ ಸಮಿತಿಯ ಸಭೆಯಲ್ಲಿ ಹಾವೇರಿ ಟಿಕೆಟ್ ಕಾಂತೇಶ್‌ಗೆ ಕೊಡಿ ಎಂದು ಸ್ವತಃ ಬೊಮ್ಮಾಯಿ ಅವರೇ ಹೇಳಿದ್ದರು. ಆದರೂ, ಯಡಿಯೂರಪ್ಪ ಹಠ ಹಿಡಿದು ಅವರಿಗೆ ಯಾಕೆ ಟಿಕೆಟ್ ಕೊಡಿಸಿದ್ದು ಯಾಕೆ? ಎಂದು ಈಶ್ವರಪ್ಪ ಪ್ರಶ್ನಿಸಿದ್ದರು.

ನಾನು 40 ವರ್ಷಗಳಿಂದ ಈ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ನನಗೆ ಮಾತ್ರವಲ್ಲದೆ, ಪ್ರತಾಪ್ ಸಿಂಹ, ಸಿ.ಟಿ ರವಿ, ನಳಿನ್ ಕುಮಾರ್ ಕಟೀಲ್, ಸದಾನಂದಗೌಡರಂತಹ ಪಕ್ಷದ ನಾಯಕರಿಗೆ ಅನ್ಯಾಯವಾಗಿದೆ. ಬಿಎಸ್‌ವೈ ಪಕ್ಷದ ಕತ್ತು ಹಿಸುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಲೋಕಸಭೆ ಚುನಾವಣೆಗೆ 72 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿಯಲ್ಲಿ ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಈ ಬಾರಿ 9 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ. ಈ ಪೈಕಿ ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್, ಸದಾನಂದಗೌಡ ಸೇರಿದಂತೆ ಪ್ರಮುಖರು ಇದ್ದಾರೆ. ಇನ್ನು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಸಿ.ಟಿ ರವಿ ಮತ್ತು ಹಾವೇರಿ-ಗದಗ ಕ್ಷೇತ್ರದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ನಿರಾಸೆಯಾಗಿದೆ.

ಗಮನಾರ್ಹವಾಗಿ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹ ಬದಲಿಗೆ ಮೈಸೂರು ರಾಜ ಕುಟುಂಬದ ಉತ್ತರಾಧಿಕಾರಿ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರದಿಂದ ಕಣಕ್ಕಿಳಿಸಲಾಗಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌| ಬಿಜೆಪಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ವಿಶೇಷ ತನಿಖೆ ನಡೆಸಿ: ಖರ್ಗೆ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...