Homeಕರ್ನಾಟಕಬಿಜೆಪಿಯಿಂದ ಉಚ್ಛಾಟನೆ: ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಂದ ಕೆಎಸ್ ಈಶ್ವರಪ್ಪ

ಬಿಜೆಪಿಯಿಂದ ಉಚ್ಛಾಟನೆ: ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಂದ ಕೆಎಸ್ ಈಶ್ವರಪ್ಪ

- Advertisement -
- Advertisement -

ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ, ಶಿವಮೊಗ್ಗ ಕ್ಷೇತ್ರದ ಬಿಜೆಪಿಯ ಬಂಡಾಯ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.

ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೊರಡಿಸಿದ ಆದೇಶದಲ್ಲಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಮದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ, ಆದ್ದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪುವಂತೆ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಈಶ್ವರಪ್ಪ ಬಂಡಾಯವೆದ್ದು ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಯಡಿಯೂರಪ್ಪ ಹಿರಿಯ ಪುತ್ರ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸುವುದಾಗಿ ಈ ಮೊದಲು ಈಶ್ವರಪ್ಪ ಶಪಥ ಮಾಡಿದ್ದರು. ಈಶ್ವರಪ್ಪ ಅವರ ಮನವೊಲಿಕೆಗೆ ಸಂಘಪರಿವಾರ ಮತ್ತು ಬಿಜೆಪಿ ನಾಯಕರು ಪ್ರಯತ್ನಿಸಿದ್ದರು. ಆದರೆ ಈಶ್ವರಪ್ಪ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರಾಕರಿಸಿದ್ದರು.

ಚುನಾವಣಾ ಆಯೋಗ ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಅವರಿಗೆ ಚುನಾವಣೆ ಚಿಹ್ನೆ ನೀಡಿದ್ದು, ”ಕೈ ಕಟ್ಟಿಕೊಂಡ ರೈತ ಮತ್ತು ಎರಡು ಕಬ್ಬುಗಳು” ಇರುವ ಚಿಹ್ನೆಯನ್ನು ನೀಡಿತ್ತು.

ಈಶ್ವರಪ್ಪ ಪ್ರತಿಕ್ರಿಯೆ: ಬಿಜೆಪಿಯಿಂದ ತಮ್ಮನ್ನು ಉಚ್ಚಾಟಿಸಿರುವುದಕ್ಕೆ ಹೆದರುವುದಿಲ್ಲ, ಆದರೆ ಉಚ್ಚಾಟನೆಯ ಆದೇಶ ನನಗೆ ಇನ್ನೂ ತಲುಪಿಲ್ಲ. ಉಚ್ಛಾಟನೆ ಬಗ್ಗೆ ಮಾಹಿತಿ ಮಾಧ್ಯಮಗಳಿಂದ ಗೊತ್ತಾಗಿದೆ. ನಾನು  ಚುನಾವಣೆಗೆ ಸ್ಪರ್ಧಿಸುವುದು ಶತಃಸಿದ್ಧ. ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆ, ಅದರಂತೆ ನಾಮಪತ್ರ ಹಿಂತೆಗೆದುಕೊಳ್ಳದೆ ಕಣದಲ್ಲಿಯೇ ಉಳಿದಿದ್ದೇನೆ. ನಾಳೆಯಿಂದ ಇನ್ನಷ್ಟು ಬಿರುಸಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಬೆನ್ನಲ್ಲೇ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪ್ಪ, ಮಕ್ಕಳು ಆರಂಭದಿಂದ ಸುಳ್ಳು ಹೇಳುತ್ತಾ, ಷಡ್ಯಂತ್ರ ಮಾಡುತ್ತಾ ಬಂದಿದ್ದಾರೆ. ಅವರು ಯಾವ ಮುಖ ಇಟ್ಟುಕೊಂಡು ಉತ್ತರ ನೀಡುತ್ತಾರೆ. ಅವರು ಪ್ರತಿಕ್ರಿಯೆ ನೀಡಲಿ, ನಂತರ ನಾನು ಅವರಿಗೆ ಉತ್ತರ ನೀಡುತ್ತೇನೆ ಎಂದು ವಾಗ್ದಾಳಿ ಮಾಡಿದ್ದಾರೆ.

ಬಿಎಸ್ ಯಡಿಯೂರಪ್ಪ ಕುಟುಂಬ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದೆ, ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಎಂದಿದ್ದರು, ಬಳಿಕ ನಾಮಪತ್ರ ಹಾಕುವುದಿಲ್ಲ ಎಂದಿದ್ದರು. ಇಂದು ನಾಮಪತ್ರ ವಾಪಸ್​​ಗೆ ಕೊನೆಯ ದಿನ. ಇಂದು ನಾನು ಕಣದಲ್ಲಿದ್ದೇನೆ ಎಂದು ಹೇಳಿದ್ದಾರೆ.

ಈಶ್ವರಪ್ಪ ಮತ್ತು ಯಡಿಯೂರಪ್ಪನವರ ನಡುವೆ ಭಿನ್ನಮತ ಇಂದು ನಿನ್ನೆಯದಲ್ಲ. ಇಬ್ಬರು ನಾಯಕರು ತಮ್ಮ ರಾಜಕೀಯ ವೃತ್ತಿ ಜೀವನದಲ್ಲಿ  ಹಲವು ಬಾರಿ ಮುನುಸಿಕೊಂಡಿದ್ದರು, ಆ ಬಳಿಕ ಒಂದಾಗಿದ್ದರು. ಈಶ್ವರಪ್ಪ ಮತ್ತು ಯಡಿಯೂರಪ್ಪನವರ ನಡುವೆ ಭಿನ್ನಮತ ಉಂಟಾದಾಗ ಸಂಘಪರಿವಾರ ಮಧ್ಯಸ್ಥಿಕೆ ವಹಿಸಿ ಸಮಾಧಾನ ಪಡಿಸುತ್ತಿತ್ತು. ಆದರೆ ಈ ಬಾರಿ ಯಾವುದೂ ಫಲ ಕೊಡಲಿಲ್ಲ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...