Homeಕರ್ನಾಟಕಕ್ಷೀರಭಾಗ್ಯ ದಶಮಾನೋತ್ಸವ ಸಂಭ್ರಮ: ಯೋಜನೆಗೆ ಅಂತರಾಷ್ಟ್ರೀಯ ಮನ್ನಣೆ- ಸಿಎಂ ಸಿದ್ದರಾಮಯ್ಯ

ಕ್ಷೀರಭಾಗ್ಯ ದಶಮಾನೋತ್ಸವ ಸಂಭ್ರಮ: ಯೋಜನೆಗೆ ಅಂತರಾಷ್ಟ್ರೀಯ ಮನ್ನಣೆ- ಸಿಎಂ ಸಿದ್ದರಾಮಯ್ಯ

- Advertisement -
- Advertisement -

”ಕ್ಷೀರಭಾಗ್ಯ ಯೋಜನೆʼ ಜಾರಿಯಾಗಿ 10 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಒಕ್ಕೂಟದಿಂದ ಬುಧವಾರ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ರಾಜ್ಯಮಟ್ಟದ ಕ್ಷೀರಭಾಗ್ಯ ದಶಮಾನೋತ್ಸವ ಸಮಾರಂಭ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾದಿದ್ದರು.

ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ‘ಕ್ಷೀರಭಾಗ್ಯ’ ಯೋಜನೆಯನ್ನು ಜಾರಿಗೆ ತರಲಾಯಿತು. ಮಕ್ಕಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದು, ಕ್ಷೀರ ಭಾಗ್ಯ’ ಅಂತರ್‌ ರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಉತ್ಪಾದಕರ ಸಂಘಗಳ ಒಕ್ಕೂಟವು ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಮಾನಸಿಕವಾಗಿ ಮತ್ತು ದೌಹಿಕವಾಗಿ ಸದೃಢವಾಗಿದ್ದರೆಮಾತ್ರ ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಎಲ್ಲ ಜಾತಿಗಳು, ಎಲ್ಲ ಧರ್ಮಗಳ ಬಡವರು ಮತ್ತು ಮಧ್ಯಮ ವರ್ಗರದವರ ಮಕ್ಕಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು.

10 ವರ್ಷಗಳಿಂದ ಪ್ರತೀ ದಿನ ಲಕ್ಷಾಂತರ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗುವಂತೆ ಮಾಡಿದ್ದೇವೆ. ಹೀಗಾಗಿ ನಮ್ಮ ಹೆಮ್ಮೆಯ ಈ ಯೋಜನೆ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ” ಎಂದು ಹೇಳಿದರು.

ಈ ಸಂಬಂಧ ಟ್ವೀಟ್ ಮೂಲಕ ಸಂತಸ ವ್ಯಕ್ತಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‌ʼ”ಶಾಲಾ ವಿದ್ಯಾರ್ಥಿಗಳಿಗೆ ಬಿಸಿ ಹಾಲು ನೀಡುವ ಕ್ಷೀರಭಾಗ್ಯ ಯೋಜನೆಗೆ ಈಗ ದಶಮಾನೋತ್ಸವದ ಸಂಭ್ರಮ. ಈ ಸಡಗರವನ್ನು ಶಾಲೆಗಳಲ್ಲಿ ಖುಷಿಖುಷಿಯಾಗಿ ಹಾಲು ಕುಡಿಯುತ್ತಿರುವ ಮಕ್ಕಳ ಮುಖಗಳಲ್ಲಿ ನಾನು ಕಾಣುತ್ತಿದ್ದೇನೆ” ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

”ಒಂದನೇ ತರಗತಿಯಲ್ಲಿ ಬಿಸಿ ಹಾಲು ಕುಡಿಯಲಾರಂಭಿಸಿದ ಮಗುವೊಂದು ಈಗ ಹತ್ತನೇ ತರಗತಿಯ ಪ್ರೌಡ ವಿದ್ಯಾರ್ಥಿಯಾಗಿ ಕ್ಷೀರಭಾಗ್ಯ ಯೋಜನೆಯಿಂದ ತನ್ನ ದೇಹಕ್ಕೆ ಬಲ ಬಂತು, ಓದಲು ಹುಮ್ಮಸ್ಸು ಬಂತು ಎಂದೆಲ್ಲ ಹೇಳುತ್ತಿರುವುದನ್ನು ಕೇಳಿದಾಗ ಯೋಜನೆಯ ಉದ್ದೇಶ ಸಾರ್ಥಕವಾಯಿತು ಎಂದು ಅನಿಸುತ್ತದೆ” ಎಂದು ತಿಳಿಸಿದ್ದಾರೆ.

”ಅಪೌಷ್ಟಿಕತೆ ನಿವಾರಣೆಯ ಜೊತೆಗೆ ಕಲಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ 2013ರಲ್ಲಿ ನಮ್ಮ ಸರ್ಕಾರವು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿತ್ತು. ಕ್ಷೀರಭಾಗ್ಯ ಜಾರಿಗೊಂಡ ನಂತರದಿಂದ ಶಾಲಾ ಮಕ್ಕಳ ಪೌಷ್ಟಿಕ ಮಟ್ಟ ಸುಧಾರಣೆಯಾಗಿದೆ, ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಾಗಿದೆ ಮತ್ತು ರಾಜ್ಯದ ಹಾಲು ಉತ್ಪಾದಕ ಒಕ್ಕೂಟಗಳಿಗೂ ಬಲ ಬಂದಿದೆ ಎನ್ನುವುದನ್ನು ತಿಳಿಸಲು ಹೆಮ್ಮೆಯಾಗುತ್ತದೆʼ” ಎಂದು ಮುಖ್ಯಮಂತ್ರಿಗಳು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಗಾಂಧೀಜಿಯವರನ್ನು ಕೊಂದ ಮನಸ್ಥಿತಿಯವರೇ ಗೌರಿ ಲಂಕೇಶ್‌ರನ್ನು ಹತ್ಯೆ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳದಲ್ಲಿ ತೀವ್ರಗೊಳ್ಳಲಿರುವ ಮಳೆ; ಆರೇಂಜ್-ಯೆಲ್ಲೋ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

0
ಮುಂದಿನ ಕೆಲವು ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಗುರುವಾರ ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮೇ 18 ರಂದು ಪಾಲಕ್ಕಾಡ್ ಮತ್ತು ಮಲಪ್ಪುರಂ, ಮೇ 19 ರಂದು...