Homeಕರೋನಾ ತಲ್ಲಣಕಾನೂನು ವಿದ್ಯಾರ್ಥಿಗಳ ಪರೀಕ್ಷಾ ದಿನಾಂಕದ ಗೊಂದಲ ನಿವಾರಿಸಿ - ಕೆವಿಎಸ್ ಆಗ್ರಹ

ಕಾನೂನು ವಿದ್ಯಾರ್ಥಿಗಳ ಪರೀಕ್ಷಾ ದಿನಾಂಕದ ಗೊಂದಲ ನಿವಾರಿಸಿ – ಕೆವಿಎಸ್ ಆಗ್ರಹ

ಕಾನೂನು ಸಚಿವ ಮಾಧುಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ‘ಸ್ವಲ್ಪ ದಿನಗಳ ಕಾಲ ತರಗತಿಗಳನ್ನು ನಡೆಸಿ ನಂತರ ಪರೀಕ್ಷೆಗಳನ್ನು ನಡೆಸಲಾಗುವುದು’ ಎಂದು ತಿಳಿಸಿದರೂ ಪರೀಕ್ಷಾ ದಿನಾಂಕದ  ಬಗ್ಗೆ ಯಾವುದೇ ನಿಖರವಾದ ಮಾಹಿತಿಯನ್ನು ನೀಡಿಲ್ಲ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಒಂದು ರೀತಿಯ ಆತಂಕ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದ ಸ್ಥಿತಿ ಬಂದಿದೆ. ಒಂದೊಂದು ಶಿಕ್ಷಣ ಸಂಸ್ಥೆಗಳು ಒಂದೊಂದು ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ವಿಶ್ವವಿದ್ಯಾಲಯಗಳು ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಬಿಟ್ಟು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ನಿರ್ಧರಿಸಿವೆ.

ಆದರೆ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮಾತ್ರ ಎಲ್ಲಾ ವರ್ಷದ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ. ಆದರೆ ಪರೀಕ್ಷೆ ವೇಳಾಪಟ್ಟಿ ಮಾತ್ರ ಪ್ರಕಟಿಸದೆ ವಿದ್ಯಾರ್ಥಿಗಳನ್ನು ಗೊಂದಲಕ್ಕೆ ನೂಕಿದೆ. ಜೂನ್‌-ಜುಲೈನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿದೆ. ಕಾನೂನು ವಿವಿ ನಿರ್ಲಕ್ಯದಿಂದಾಗಿ ಪರೀಕ್ಷೆಯ ಬಗ್ಗೆ ನಿಖರ ಮಾಹಿತಿ ಇಲ್ಲದೆ ವಿದ್ಯಾರ್ಥಿಗಳು ಪರದಾಡುವಂತಹ ಸ್ಥಿತಿ ಎದುರಾಗಿದೆ.

ಲಾಕ್‌ಡೌನ್‌ ನಂತರದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕೆಗಳು ಮತ್ತು ಪೂರಕ ಪರೀಕ್ಷೆಗಳು, ಪದವಿ ಪರೀಕ್ಷೆಗಳು ಮುಗಿದಿವೆ. ಆದರೆ, ಕಾನೂನು ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗಳು ಯಾವಾಗ ನಡೆಯುತ್ತವೇ ಎಂಬುದೇ ಗೊತ್ತಿಲ್ಲದೆ ಗೊಂದಲದಲ್ಲಿದ್ದಾರೆ. ಉನ್ನತ ವಿದ್ಯಾಭ್ಯಾಸ ಮತ್ತು ವೃತ್ತಿಗಾಗಿ ತೆರಳಬೇಕಿರುವ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳು ಪರೀಕ್ಷೆಯ ದಿನಾಂಕದಲ್ಲಿ ಯಾವುದೇ ಸ್ಪಷ್ಟತೆಯಿಲ್ಲದೆ ಸಂಕಟಕ್ಕೀಡಾಗಿದ್ದಾರೆ.

ಇದನ್ನೂ ಓದಿ: 59.7% ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ಶಾಲೆಗೆ ಹೋಗುತ್ತಾರೆ: NSO

ಕಾನೂನು ಸಚಿವ ಮಾಧುಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ‘ಸ್ವಲ್ಪ ದಿನಗಳ ಕಾಲ ತರಗತಿಗಳನ್ನು ನಡೆಸಿ ನಂತರ ಪರೀಕ್ಷೆಗಳನ್ನು ನಡೆಸಲಾಗುವುದು’ ಎಂದು ತಿಳಿಸಿದರೂ ಪರೀಕ್ಷಾ ದಿನಾಂಕದ  ಬಗ್ಗೆ ಯಾವುದೇ ನಿಖರವಾದ ಮಾಹಿತಿಯನ್ನು ನೀಡಿಲ್ಲ. ಸಚಿವರು ಪತ್ರಿಕಾಗೋಷ್ಠಿ ನಡೆಸಿ ಸುಮಾರು ಒಂದೂವರೆ ತಿಂಗಳುಗಳು ಕಳೆದರೂ ಈವರೆಗೆ ಕಾನೂನು ವಿಶ್ವವಿದ್ಯಾಲಯದಿಂದಾಗಲಿ, ಕಾನೂನು ಮಂತ್ರಿಗಳಿಂದಾಗಲಿ ಯಾವುದೇ ಸ್ಪಷ್ಟತೆ ಬಂದಿಲ್ಲ.

ಇತ್ತ ಪರೀಕ್ಷೆಗಳು ಮುಗಿಯದ ಕಾರಣ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಇದು ವಿದ್ಯಾರ್ಥಿಗಳ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ ಎಂದು ಬೇಸರಗೊಂಡಿದ್ದಾರೆ. ಇದಷ್ಟೇ ಅಲ್ಲದೇ ಸೆಪ್ಟೆಂಬರ್ ತಿಂಗಳಿನಲ್ಲಿಯೇ ಪರೀಕ್ಷಾ ಶುಲ್ಕವನ್ನು ಪಾವತಿಸಲಾಗಿದೆ.

ಪರೀಕ್ಷೆ ವೇಳಾಪಟ್ಟಿ ಬಗ್ಗೆ ವಿಚಾರಿಸಲು ವಿಶ್ವವಿದ್ಯಾಲಯವನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಆದರೆ ಅಲ್ಲಿಂದ ಯಾವುದೇ ಉತ್ತರ ಬರುತ್ತಿಲ್ಲ. ಕಾಲೇಜು ಆಡಳಿತ ಮಂಡಳಿ ಸಹ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗದೆ ಕೈಚೆಲ್ಲಿ ಕುಳಿತಿದ್ದಾರೆ ಎಂದು ಕಾನೂನು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಕೆಎಸ್‍ಎಲ್‍ಯು ಉಪಕುಲತಿಗಳಾದ ಪಿ.ಈಶ್ವರ್ ಭಟ್‍ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಈ ಕೂಡಲೇ ಸ್ಪಷ್ಟವಾದ ಮಾಹಿತಿಯನ್ನು ನೀಡಬೇಕು. ಜೊತೆಗೆ ಆದಷ್ಟು ಬೇಗ ಪರೀಕ್ಷಾ ವೇಳಾಪಟ್ಟಿಯನ್ನು ಅಂತಿಮಗೊಳಿಸಬೇಕಾಗಿ ಕೆವಿಎಸ್ (ಕರ್ನಾಟಕ ವಿದ್ಯಾರ್ಥಿ ಸಂಘಟನೆ) ಆಗ್ರಹಿಸಿದೆ.


ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...