Homeಕರ್ನಾಟಕಸಾರಿಗೆ ನಿಗಮಗಳು 15% ದರ ಏರಿಕೆಗೆ ಮನವಿ ಮಾಡಿವೆ: ಸಚಿವ ರಾಮಲಿಂಗ ರೆಡ್ಡಿ

ಸಾರಿಗೆ ನಿಗಮಗಳು 15% ದರ ಏರಿಕೆಗೆ ಮನವಿ ಮಾಡಿವೆ: ಸಚಿವ ರಾಮಲಿಂಗ ರೆಡ್ಡಿ

- Advertisement -
- Advertisement -

ರಾಜ್ಯದ ನಾಲ್ಕು ಬಸ್ ನಿಗಮಗಳು 15%ದಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಕೋರಿವೆ, ಈ ಪ್ರಸ್ತಾವನೆ ಕುರಿತು ಸರ್ಕಾರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ಹೇಳಿದ್ದಾರೆ. ಸಾರಿಗೆ ನಿಗಮಗಳು ಸುಮಾರು ಆರು ತಿಂಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾವನೆಯನ್ನು ಕಳುಹಿಸಿತ್ತು ಎಂದು ಸಚಿವರು ತಿಳಿಸಿದ್ದಾರೆ. ಕೆಎಸ್‌ಆರ್‌ಟಿಸಿ 15% ದರ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ), ಮತ್ತು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಅಧಿಕಾರಿಗಳು, ನಿಗಮಗಳಿಗೆ ಉಂಟಾದ ನಷ್ಟವನ್ನು ಸರಿದೂಗಿಸಲು ದರ ಪರಿಷ್ಕರಣೆಯ ಅಗತ್ಯವನ್ನು ಒತ್ತಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ನಡುವೆ, ಬಾಕಿ ಇರುವ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 31 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಆರ್‌ಟಿಸಿ ಯೂನಿಯನ್‌ಗಳ ಸದಸ್ಯರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಅದಾಗ್ಯೂ, ‘ನಾಲ್ಕು ಸಾರಿಗೆ ನಿಗಮಗಳಲ್ಲಿ ಹಣದ ಕೊರತೆಯಿದ್ದು, ಬಾಕಿ ವೇತನ ಸಂಗ್ರಹಕ್ಕೆ ಇದು ಒಂದು ಕಾರಣ’ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೆಎಸ್‌ಆರ್‌ಟಿಸಿ 15% ದರ

KSRTC ದರಗಳನ್ನು ಕೊನೆಯದಾಗಿ 2020 ರಲ್ಲಿ ಪರಿಷ್ಕರಿಸಲಾಗಿತ್ತು

“BMTC ದರಗಳನ್ನು 2014 ರಲ್ಲಿ ಪರಿಷ್ಕರಿಸಲಾಯಿತು. KSRTC, KKRTC, ಮತ್ತು NWKRTC ಯ ದರಗಳನ್ನು 2020 ಕ್ಕೆ ಪರಿಷ್ಕರಿಸಲಾಯಿತು. ಅಂದಿನಿಂದ ಸರ್ಕಾರವು ದರಗಳನ್ನು ಹೆಚ್ಚಿಸಿಲ್ಲ” ಎಂದು ಬಸ್ ನಿಗಮಗಳ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾಗಿ TNIE ಹೇಳಿದ್ದಾರೆ. ಇಂಧನ, ಬಿಡಿಭಾಗಗಳು ಮತ್ತು ಟೈರ್‌ಗಳ ಬೆಲೆಗಳು ಹೆಚ್ಚಾಗಿದ್ದು, ನಿಗಮದ ಹೆಚ್ಚಿನ ಆದಾಯವು ಉದ್ಯೋಗಿಗಳ ಸಂಬಳಕ್ಕೆ ಹೋಗುತ್ತದೆ ಎಂದು ಅವರು ಹೇಳಿದ್ದಾರೆ.

“ಆದಾಯದ 45% ಕ್ಕಿಂತ ಹೆಚ್ಚು ಡೀಸೆಲ್‌ಗೆ ಖರ್ಚು ಮಾಡಲಾಗಿದೆ. ಕೆಎಸ್‌ಆರ್‌ಟಿಸಿಯಲ್ಲಿ ಕಳೆದ ಬಾರಿ ಬಸ್ ದರ ಪರಿಷ್ಕರಣೆಯಾದಾಗ ಡೀಸೆಲ್ ದರ ಲೀಟರ್‌ಗೆ 61 ರೂ. ಆಗಿತ್ತು. ಆದರೆ, ಪ್ರಯಾಣ ದರಗಳು ಹಾಗೆಯೇ ಉಳಿದಿವೆ, ಆದರೆ ಡೀಸೆಲ್ ಬೆಲೆ ಈಗ ಲೀಟರ್‌ಗೆ 90 ರೂ. ಆಗಿದೆ” ಎಂದು ಅವರು ಹೇಳಿದ್ದಾರೆ.

2020 ರಲ್ಲಿ ಬಸ್ ದರವನ್ನು ಪರಿಷ್ಕರಿಸಿದಾಗ, ಕೆಎಸ್ಆರ್ಟಿಸಿ ಇಂಧನಕ್ಕಾಗಿ ದಿನಕ್ಕೆ ಸುಮಾರು 3 ಕೋಟಿ ರೂ. ವ್ಯಯಿಸುತ್ತಿತ್ತು. ಆದರೆ, ಇಂಧನ ಬೆಲೆ ಏರಿಕೆಯಿಂದಾಗಿ ನಿಗಮಗಳು ಈಗ ದಿನಕ್ಕೆ 5 ಕೋಟಿ ರೂ. ಖರ್ಚು ಮಾಡುತ್ತಿವೆ. ನಾಲ್ಕೂ ಬಸ್ ನಿಗಮಗಳ ಉದ್ದೇಶ ಜನರ ಸೇವೆಯೇ ಹೊರತು ಹೊರೆಯಾಗಬಾರದು. ಆದಾಗ್ಯೂ, ಹೆಚ್ಚುತ್ತಿರುವ ಕಾರ್ಯಾಚರಣೆಯ ವೆಚ್ಚದಿಂದಾಗಿ ಅವರು ಪ್ರಯಾಣ ದರ ಏರಿಕೆ ಮಾಡಲೇ ಬೇಕಾದ ಸ್ಥಿತಿಯಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕನ ‘ಕೇರಳ ಮಿನಿ ಪಾಕಿಸ್ತಾನ’ ಹೇಳಿಕೆ ಖಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ಬಿಜೆಪಿ ನಾಯಕನ ‘ಕೇರಳ ಮಿನಿ ಪಾಕಿಸ್ತಾನ’ ಹೇಳಿಕೆ ಖಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...