ಸಾರಿಗೆ ನೌಕರರ ಮುಷ್ಕರ: ಪಟ್ಟು ಬಿಡದ ಸರ್ಕಾರ, ರೋಡಿಗಿಳಿದ ಖಾಸಗಿ ಬಸ್‌ಗಳು
PC: IndianExpress

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಬ್ಯಾನರ್ ಅಡಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯುಕೆಆರ್‌ಟಿಸಿ), ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಕೆಆರ್‌ಟಿಸಿ) ಕಾರ್ಮಿಕರು ರಸ್ತೆ ಸಾರಿಗೆ ನಿಗಮದ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದಾರೆ. ಮುಖ್ಯವಾಗಿ ಆರನೇ ವೇತನ ಆಯೋಗದ ಪ್ರಕಾರ ವೇತನ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರವನ್ನು ಕೋರಿ ಅನಿರ್ದಿಷ್ಟ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಈಗಾಗಲೇ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ, ಮುಷ್ಕರ ಕೈ ಬಿಡದಿದ್ದರೆ ಸರ್ಕಾದಿಂದ ಕಟ್ಟುನಿಟ್ಟಿನ ಕ್ರಮ ಖಚಿತ. ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಸಾರಿಗೆ ನೌಕರರಿಗೆ ಎಚ್ಚರಿಕೆ ನೀಡಿದ್ದಾರೆ

ಎನೇ ಆದರೂ ಸಾರಿಗೆ ನೌಕರರ ಮುಖ್ಯ ಬೇಡಿಕೆಯಾದ ಆರನೇ ವೇತನ ಆಯೋಗದ ಶಿಫಾರಸ್ಸು ಜಾರಿ ಮಾಡುವುದಿಲ್ಲ. ನೌಕರರು ಕೆಲಸಕ್ಕೆ ಬರಲೇ ಬೇಕು. ಸಾರ್ವಜನಿಕರಿಗೆ ತೊಂದರೆ ನೀಡಬಾರದು. ಖಾಸಗಿ ಬಸ್‌ಗಳ ವ್ಯವಸ್ಥೆ ಹೆಚ್ಚು ಮಾಡುತ್ತೇವೆ ಎಂದು ಸರ್ಕಾರ ತಿಳಿಸಿದೆ. ನಾಳೆಯೊಳಗೆ ಸಂಪೂರ್ಣ ಎಲ್ಲಾ ಖಾಸಗಿ ವಾಹನಗಳನ್ನು ಬಳಸಿಕೊಳ್ಳುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ‘ಮುಷ್ಕರ ಕೈಬಿಡದಿದ್ದರೆ ಕಠಿಣ ಕ್ರಮ’ – ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಎಚ್ಚರಿಕೆ

ಸಾರಿಗೆ ನೌಕರರ ಪ್ರತಿಭಟನೆಗೆ ಸೆಡ್ಡು ಹೊಡೆದಿರುವ ಸರ್ಕಾರ ಖಾಸಗಿ ಬಸ್‌ಗಳನ್ನು ಸರ್ಕಾರಿ ಬಸ್‌ ನಿಲ್ದಾಣಗಳಿಗೆ ಬಿಟ್ಟಿದೆ. ಬೆಂಗಳೂರಿನ ಮೆಜೆಸ್ಟಿಕ್ ಬಸ್‌ ನಿಲ್ದಾಣಗಳಲ್ಲಿ ಖಾಸಗಿ ಬಸ್‌ಗಳು ಓಡಾಡುತ್ತಿವೆ. ಆದರೂ ಜನರ ಪರದಾಟ ತಪ್ಪಿಲ್ಲ. ಖಾಸಗಿ ಬಸ್‌ಗಳು ಸರ್ಕಾರಿ ಬಸ್‌ ದರವನ್ನು ತಗೆದುಕೊಳ್ಳುವಂತೆ ತಿಳಿಸಿದ್ದರೂ ಕೂಡ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಮುಷ್ಕರದ ಲಾಭ ಪಡೆಯುತ್ತಿರುವ ಆಟೋ ಚಾಲಕರು ಗ್ರಾಹಕರ ಬಳಿ ಮನಸ್ಸಿಗೆ ಬಂದಷ್ಟು ಹಣ ಕೇಳುತ್ತಿದ್ದಾರೆ. ಮೆಜೆಸ್ಟಿಕ್ , ಕೆಡಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳು ಖಾಲಿ ಖಾಲಿ ಯಾಗಿದ್ದು, ಕೆಲವು ಖಾಸಗಿ ಬಸ್‌ಗಳನ್ನು ಮಾತ್ರ ಕಾಣಬಹುದಾಗಿದೆ. ಮುಷ್ಕರ ಹೀಗೆ ಮುಮದುವರೆದರೇ ಮತ್ತಷ್ಟು ಖಾಸಗಿ ಬಸ್‌ಗಳನ್ನು ಸಂಚಾರಕ್ಕೆ ಬಿಡುವುದಾಗಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

 


 

ಇದನ್ನೂ ಓದಿ: ‘ಕೊರೊನಾ ನಾಟಕ’- ಜಾರಕಿಹೊಳಿ ವಿರುದ್ದ ಕಮಿಷನರ್‌ಗೆ ಪತ್ರ ಬರೆದ ವಕೀಲ ಜಗದೀಶ್‌

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

1 COMMENT

LEAVE A REPLY

Please enter your comment!
Please enter your name here