Homeಮುಖಪುಟಕೆ.ಟಿ ಗಟ್ಟಿಯವರು ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ: ಬುಲ್ ಬುಲ್ ವಿವಾದಕ್ಕೆ ಲೇಖಕರ ಪತ್ನಿಯ ಸ್ಪಷ್ಟನೆ

ಕೆ.ಟಿ ಗಟ್ಟಿಯವರು ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ: ಬುಲ್ ಬುಲ್ ವಿವಾದಕ್ಕೆ ಲೇಖಕರ ಪತ್ನಿಯ ಸ್ಪಷ್ಟನೆ

- Advertisement -
- Advertisement -

8ನೇ ತರಗತಿ ಕನ್ನಡ ದ್ವಿತೀಯ ಭಾಷ ಪಠ್ಯದಲ್ಲಿ ಸಾವರ್ಕರ್ ಕುರಿತು ಬುಲ್ ಬುಲ್ ಹಕ್ಕಿಯ ಉತ್ಪ್ರೇಕ್ಷಿತ ಪಠ್ಯ ಸೇರಿಸಿದ್ದಕ್ಕೆ ಬಂದ ವ್ಯಾಪಕ ಟೀಕೆಯ ಕುರಿತು ಲೇಖಕ ಕೆ.ಟಿ ಗಟ್ಟಿಯವರು ಪತ್ನಿ ಯಶೋದಾ ಅಮ್ಮೆಂಬಳರವರು ಪ್ರತಿಕ್ರಿಯಿಸಿದ್ದು, ತಮ್ಮ ಪತಿ ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ ಎಂದಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ವಿವಾದವೇಳುವವರೆಗೆ ನಮಗೆ ಕಾಲವನ್ನು ಗೆದ್ದವರು ಲೇಖನವನ್ನು ಪಠ್ಯಪುಸ್ತಕದಲ್ಲಿ ಸೇರಿಸಿರುವ ಬಗ್ಗೆ ಮಾಹಿತಿ ಇರಲಿಲ್ಲ. ಬುಲ್ ಬುಲ್ ಕಲ್ಪನಾ ಚಿತ್ರದ ವಿವಾದದ ಬಗ್ಗೆ ಹೇಳುವುದಾದರೆ, ಅದು ಒಂದು ರೂಪಕವಲ್ಲದೆ ಬೇರೇನೂ ಅಲ್ಲ ಎಂಬುದು ಸ್ಪಷ್ಟ” ಎಂದು ತಿಳಿಸಿದ್ದಾರೆ.

8ನೇ ತರಗತಿಯ ‘ತಿಳಿ ಕನ್ನಡ’ ಪಠ್ಯಪುಸ್ತಕದಲ್ಲಿ ಲೇಖಕ ಕೆ ಟಿ ಗಟ್ಟಿಯವರು ಬರೆದಿರುವ ವಿ ಡಿ ಸಾವರ್ಕರ್ ಕುರಿತ ‘ಕಾಲವನ್ನು ಗೆದ್ದವರು’ ಎನ್ನುವ ಪ್ರವಾಸ ಕಥನವು ವಿವಾದದ ವಸ್ತುವಾಗಿದೆ. ಅದರಲ್ಲಿ ಲೇಖಕರು ಸಾವರ್ಕರ್‌ರನ್ನು ಇರಿಸಲಾಗಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಬಗ್ಗೆ “ಕೋಣೆಯೊಳಗಿನ ಹಿಂಬದಿ ಗೋಡೆಯ ಎತ್ತರದಲ್ಲಿ ಆಕಾಶ ಕೂಡ ಕಾಣಿಸದ ಕಿಂಡಿ. ಸಾವರ್ಕರ್ ಕೋಣೆಯಲ್ಲಿ ಆ ಕಿಂಡಿ ಕೂಡ ಇಲ್ಲ. ಆದರೂ ಎಲ್ಲಿಂದಲೋ ಬುಲ್‌ಬುಲ್ ಹಕ್ಕಿಗಳು ಹಾರಿ ಸೆಲ್‌ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದರು”. ಎಂದು ಬರೆಯಲಾಗಿದೆ. ಇದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಇಷ್ಟೊಂದು ಉತ್ಪ್ರೇಕ್ಷಿತ ಪಠ್ಯವನ್ನು ಮಕ್ಕಳು ಕಲಿಯಬೇಕೆ ಎಂದು ಹಲವರು ಪ್ರಶ್ನಿಸಿದ್ದರು. ಅಲ್ಲದೆ ಬುಲ್‌ಬುಲ್ ಹಕ್ಕಿಯ ಮೇಲೆ ಕುಳಿತು ಭಾರತಕ್ಕೆ ಬಂದಿದ್ದರು ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳು ಹರಿದಾಡುತ್ತಿವೆ.

ಕೆ.ಟಿ.ಗಟ್ಟಿಯವರು, ಅನಾರೋಗ್ಯದ ಕಾರಣ, ಯಾವುದೇ ಸ್ಪಷ್ಟನೆ ನೀಡುವ ಸ್ಥಿತಿಯಲ್ಲಿಲ್ಲ. ಅವರ ಪರವಾಗಿ ನಾನು ಉತ್ತರಿಸುವಂತಿಲ್ಲ; ಸಂಬಂಧಪಟ್ಟ ಕೆಲವು ವಿವರಗಳನ್ನು ಇಲ್ಲಿ ಹಂಚಿಕೊಳ್ಳಬಲ್ಲೆ ಎಂದಿರುವ ಅವರ ಪತ್ನಿ, “ಸಾವರ್ಕರ್ ಬಗೆಗಿನ ಗಟ್ಟಿಯವರ ಈ ಲೇಖನವನ್ನು ಸಾಂದರ್ಭಿಕವಾಗಿ ಪರಿಗಣಿಸಬೇಕು. ಕನ್ನಡ ಸಾಹಿತ್ಯ ಪರಿಷತ್ತು ಪ್ರಾಯೋಜಿಸಿದ ಈ ಪ್ರವಾಸದ ಉದ್ದೇಶವು, ಅಂಡಮಾನ್‌ನ ಸಾಮಾಜಿಕ ಜನಜೀವನ ಹಾಗೂ ರಾಜಕೀಯ ಚರಿತ್ರೆಯ ವಿಸ್ತೃತ ನೋಟವನ್ನು ಕಲೆ ಹಾಕುವುದೇ ಆಗಿತ್ತು. ಇದಕ್ಕಾಗಿ ಅವರು ಸ್ಥಳೀಯರನ್ನು ಸಂದರ್ಶಿಸುತ್ತಾ, ಸ್ಥಳೀಯ ಸಾಮಾಜಿಕ, ಸಾಂಸ್ಕೃತಿಕ ಸಮಾರಂಭಗಳಲ್ಲಿ ಹಾಜರಿರುತ್ತಾ, ಪುಸ್ತಕಗಳನ್ನೋದುತ್ತಾ ಸಾಕಷ್ಟು ಸಮಯ ಕಳೆದಿದ್ದರು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ಈ ಕೃತಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರರ ಪಾತ್ರದ ಬಗೆಗಾಗಲೀ, ಅವರ ವಿಚಾರಧಾರೆಯ ಬಗೆಗಾಗಲೀ ಯಾವುದೇ ಮಾತು ಇಲ್ಲಿ ಬಂದಿಲ್ಲ. ಗಟ್ಟಿಯವರ ಇನ್ನಾವುದೇ ಬರಹಗಳಲ್ಲಿ ಸಾವರ್ಕರರ ಬಗೆಗೆ ಉಲ್ಲೇಖ ಇಲ್ಲ. ಈ ಲೇಖನದ ಮೂವತ್ತು ಶೇಕಡಾ ಭಾಗ, ಮತ್ತೂರು ಕೃಷ್ಣಮೂರ್ತಿಯವರ “ಸ್ವಾತಂತ್ರ್ಯವೀರ ಸಾವರ್ಕರ್” (1966) ಕೃತಿಯಿಂದ ಉಧ್ಧೃತವಾಗಿದೆ. ಸಾವರ್ಕರರ ಆತ್ಮಚರಿತ್ರೆಯೂ ಆಕರಗ್ರಂಥಗಳ ಪಟ್ಟಿಯಲ್ಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬುಲ್ ಬುಲ್ ಸವಾರಿಯು ಬಗ್ಗೆ ಬರೆದಿರುವ ವಾಕ್ಯಗಳಲ್ಲಿ, ಮುದ್ರಣ ದೋಷ ಅಥವಾ ಲೇಖಕರ ನಿರ್ಲಕ್ಷ್ಯದಿಂದ, ಸಂದರ್ಭ/ಉಲ್ಲೇಖವು ಬಿಟ್ಟುಹೋಗಿರುವುದು ಎಲ್ಲಾ ರೀತಿಯ ಗೊಂದಲಗಳಿಗೆ ಎಡೆಮಾಡಿದೆ. ಸಾವರ್ಕರರ ಬುಲ್ ಬುಲ್ ಸವಾರಿಯು, ಅವರು ಇತರ ಮೂಲಗಳಿಂದ ಗ್ರಹಿಸಿದ್ದೇ, ಇಲ್ಲಾ ಅವರ ಕಲ್ಪನೆಯೇ ಎಂಬ ಬಗ್ಗೆ ಖಂಡಿತವಾಗಿ ಹೇಳಲಾಗದಿದ್ದರೂ, ಬುಲ್ ಬುಲ್ ಐತಿಹ್ಯವು ಲೇಖಕನ ಸೃಷ್ಟಿಯಲ್ಲ ಎಂಬುದನ್ನು ನಿಸ್ಸಂದೇಹವಾಗಿ ಹೇಳಬಹುದು ಎಂದು ಅವರು ಹೇಳಿದ್ದಾರೆ.

ಗಟ್ಟಿಯವರ ಸಾಹಿತ್ಯದ ಪರಿಚಯವಿರುವವರಿಗೆ, ಬುಲ್ ಬುಲ್ ರೂಪಕವು ಸಾವರ್ಕರರನ್ನು ವೈಭವೀಕರಿಸುವ ಉದ್ದೇಶದಿಂದ, ಅವರ ವಿಚಾರಧಾರೆಯ ಬಗ್ಗೆ ಅಭಿಮಾನವುಳ್ಳ ಲೇಖಕ ರಚಿಸಿರಬೇಕು ಎಂಬ ಭಾವನೆ ಬರಲಾರದು. ಅವರ ವಿಚಾರಧಾರೆಯ ಪರಿಚಯ ಇರುವವರಿಗೆ ಈ ಬಗ್ಗೆ ಸ್ಪಷ್ಟೀಕರಣ ನೀಡುವ ಅಗತ್ಯವಿರಲಾರದು. ಅವರ ಸಾಹಿತ್ಯದ ಪರಿಚಯ ಇಲ್ಲದವರು, ಅವರ “ನಮ್ಮೊಳಗಿನ ಆಕಾಶ” ಸಂಕಲನದ, “ಧರ್ಮ ಮತ್ತು ವ್ಯಕ್ತಿ ಸ್ವಾತಂತ್ರ್ಯ” ಅಥವಾ ಅವರ ಇತರ ಸಾಹಿತ್ಯ ಕೃತಿಗಳನ್ನು ಓದಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...