Homeಅಂತರಾಷ್ಟ್ರೀಯಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ ಕುಲಭೂಷಣ್ ಜಾಧವ್: ಪಾಕ್

ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ ಕುಲಭೂಷಣ್ ಜಾಧವ್: ಪಾಕ್

- Advertisement -
- Advertisement -

ಗೂಢಚರ್ಯೆ ಆರೋಪದ ಮೇಲೆ ಪಾಕಿಸ್ತಾನದ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಶಿಕ್ಷೆಯ ವಿರುದ್ಧ ಮರಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.

ಮಾರ್ಚ್ 2016 ರಲ್ಲಿ ಬಲೂಚಿಸ್ತಾನದಲ್ಲಿ ಗೂಢಚರ್ಯೆ ನಡೆಸಿದ ಆರೋಪದ ಮೇಲೆ ಆತನನ್ನು ಬಂಧಿಸಲಾಯಿತು ಮತ್ತು ಒಂದು ವರ್ಷದ ನಂತರ ಮಿಲಿಟರಿ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿತು.

“ಮೊದಲ ಸುತ್ತಿನಲ್ಲಿ, ಅವರು ತಮ್ಮ ತಾಯಿ ಮತ್ತು ಹೆಂಡತಿಯನ್ನು ಭೇಟಿಯಾದರು ಮತ್ತು ಈಗ ನಾವು ಅವರ ತಂದೆ ಮತ್ತು ಹೆಂಡತಿಯನ್ನು ಭೇಟಿಯಾಗಲು ಅವಕಾಶ ನೀಡಿದ್ದೇವೆ” ಎಂದು ಪಾಕಿಸ್ತಾನದ ಹೆಚ್ಚುವರಿ ಅಟಾರ್ನಿ ಜನರಲ್ ಅಹ್ಮದ್ ಇರ್ಫಾನ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪಾಕಿಸ್ತಾನ ವಿದೇಶಾಂಗ ಕಚೇರಿಯಲ್ಲಿ ದಕ್ಷಿಣ ಏಷ್ಯಾದ ಮಹಾನಿರ್ದೇಶಕರು ಮತ್ತು ಸಾರ್ಕ್‌ನ ಜಾಹಿದ್ ಹಫೀಜ್ ಚೌಧರಿಯವರೊಂದಿಗೆ ಇರ್ಫಾನ್ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿ, ಪಾಕಿಸ್ತಾನವು ಈ ವರ್ಷದ ಮೇ ತಿಂಗಳಲ್ಲಿ 2020ರ ಅಂತರರಾಷ್ಟ್ರೀಯ ನ್ಯಾಯ ವಿಮರ್ಶೆ ಮತ್ತು ಪುನರ್ವಿಮರ್ಶೆ ಸುಗ್ರೀವಾಜ್ಞೆಯನ್ನು ಜಾರಿಗೆ ತಂದಿದೆ ಎಂದಿದ್ದಾರೆ. ಇದು ಒಂದು ನಿರ್ದಿಷ್ಟ ಅವಧಿಯೊಳಗೆ ಪರಿಶೀಲನಾ ಅರ್ಜಿಗಳನ್ನು ಅನುಮತಿಸುತ್ತದೆ ಎಂದು ತಿಳಿಸಿದ್ದಾರೆ.

ಆದರೆ ಜಾಧವ್ ಅವರಿಗೆ ನೀಡಲಾದ ಮರಣದಂಡನೆ ಶಿಕ್ಷೆ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಜುಲೈನಲ್ಲಿ, ಜಾಧವ್‌ಗೆ ಕಾನ್ಸುಲರ್ ಪ್ರವೇಶವನ್ನು ಒದಗಿಸಲು ಮತ್ತು ಅವರ ಮರಣದಂಡನೆಯನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನಕ್ಕೆ ಅಂತರರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ಆದೇಶಿಸಿತ್ತು.

ಪಾಕಿಸ್ತಾನದ ಹೆಚ್ಚುವರಿ ಅಟಾರ್ನಿ ಜನರಲ್ ಅಹ್ಮದ್ ಇರ್ಫಾನ್ ಅವರು ಕಳೆದ ಜೂನ್ 17 ರಂದು ಕುಲಭೂಷಣ್ ಜಾಧವ್ ಅವರಿಗೆ ತಮ್ಮ ಶಿಕ್ಷೆ ಮತ್ತು ಅಪರಾಧದ ಮರು ಪರಿಶೀಲನೆಗಾಗಿ ಅರ್ಜಿ ಸಲ್ಲಿಸುವಂತೆ ಆಹ್ವಾನಿಸಿದ್ದಾರೆ. ಆದರೆ, ಜಾಧವ್ ಅರ್ಜಿ ಸಲ್ಲಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪಾಕಿಸ್ತಾನ ಸರ್ಕಾರ ಬಾಕಿ ಇರುವ ಕರುಣೆ ಮನವಿಗಳನ್ನು ಪರಿಶೀಲಿಸಲು ಆದ್ಯತೆ ನೀಡಿದೆ ಎಂದು ಪಾಕಿಸ್ತಾನದ ಮಾಧ್ಯಮವನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌: ಎರಡು ಪ್ರಕರಣಗಳನ್ನು ದಾಖಲಿಸಿದ ಸಿಬಿಐ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...