ಕೇಂದ್ರ ಸಚಿವ ಹಾಗೂ ರಾಜ್ಯ ಜೆಡಿಎಸ್ ಮುಖ್ಯಸ್ಥ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ‘ಜನಾಂಗೀಯ’ ಹೇಳಿಕೆ ನೀಡಿದ್ದ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಶನಿವಾರ ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸುಳಿವು ನೀಡಿದ್ದಾರೆ. ಕುಮಾರಸ್ವಾಮಿ ವಿರುದ್ಧ
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಕುಮಾರ್, “ಜಮೀರ್ ಹೇಳಿದ್ದು ತಪ್ಪು. ಪಕ್ಷದ ರಾಜ್ಯ ಘಟಕದ ಮುಖ್ಯಸ್ಥನಾಗಿ ನಾನು ಇದನ್ನು ಹೇಳುತ್ತಿದ್ದೇನೆ. ಅವರ ತಪ್ಪುಗಳನ್ನು ತಿದ್ದಿಕೊಳ್ಳಲು ಹೇಳಿದ್ದೆ. ಅವರು ಕ್ಷಮೆಯಾಚಿಸಿದ್ದಾರೆ” ಎಂದು ಹೇಳಿದ್ದಾರೆ. ಕುಮಾರಸ್ವಾಮಿ ವಿರುದ್ಧ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಚನ್ನಪಟ್ಟಣ ಉಪಚುನಾವಣೆಗೆ ಮುಂಚಿತವಾಗಿ ಜಮೀರ್ ಖಾನ್ ಅವರು ಕುಮಾರಸ್ವಾಮಿ ಅವರನ್ನು “ಕಾಳಾ” ಮತ್ತು “ಕಾಲಿಯಾ” (ಕಪ್ಪು ಚರ್ಮದ ವ್ಯಕ್ತಿ) ಎಂದು ಸಂಬೋಧಿಸಿದ್ದರು. ಮುಸ್ಲಿಂ ಸಮುದಾಯದಿಂದ ಹಣ ಸಂಗ್ರಹಿಸಿ ಗೌಡರ ಕುಟುಂಬವನ್ನು ಖರೀದಿಸುವುದಾಗಿಯೂ ಹೇಳಿದ್ದರು.
ಕುಮಾರಸ್ವಾಮಿ ವಿರುದ್ಧ ಜಮೀರ್ ದಾಳಿ ನಡೆಸಿರುವುದು ವೈಯಕ್ತಿಕ ವಿಚಾರ. ಆದರೆ ಜಮೀರ್ ಬಣ್ಣ ಮತ್ತು ದೇವೇಗೌಡರ ಕುಟುಂಬವನ್ನು ಖರೀದಿಸುವ ಬಗ್ಗೆ ಮಾತನಾಡಬಾರದಿತ್ತು. ಜಮೀರ್ ಹೇಳಿಕೆ ತಪ್ಪು ಎಂದು ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಜಮೀರ್ ಆ ಮಟ್ಟಿಗೆ ಹೋಗಬಾರದಿತ್ತು ಎಂದು ಹೇಳಿದ್ದಾರೆ.
ಅವರ ತಪ್ಪುಗಳನ್ನು ಸರಿಪಡಿಸಿಕೊಳ್ಳುವಂತೆ ವೈಯಕ್ತಿಕವಾಗಿ ಸಲಹೆ ನೀಡಿದ್ದು, ಕ್ಷಮೆಯಾಚಿಸಿದ್ದಾರೆ. ಆದರೆ ಅವರ ವಿರುದ್ಧ ಯಾವ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ನಾವು ಅವರನ್ನು ಸರಿಪಡಿಸಲಿದ್ದೇವೆ ಎಂದು ಶಿವಕುಮಾರ್ ಹೇಳಿದ್ದಾರೆ. ಜಮೀರ್ ಅವರು ಹೇಳಿಕೊಳ್ಳುವಂತೆ, ಪ್ರೀತಿಯಿಂದ ಕೂಡ ಅಂತಹ ಟೀಕೆಗಳನ್ನು ಮಾಡಬಾರದಿತ್ತು ಎಂದು ಶಿವಕುಮಾರ್ ಪ್ರತಿಪಾದಿಸಿದ್ದಾರೆ.
ಇದೇ ವೇಳೆ, ಶಿವಕುಮಾರ್ ಅವರ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ಜಮೀರ್ ಅವರು ಈ ಹಿಂದೆ ಜೆಡಿಎಸ್‌ನಲ್ಲಿದ್ದಾಗ ಇಬ್ಬರೂ ತುಂಬಾ ಆತ್ಮೀಯರಾಗಿದ್ದರು. ಹಾಗಾಗಿ ಅವರು ಕುಮಾರಸ್ವಾಮಿ ಅವರನ್ನು ಪ್ರೀತಿಯಿಂದ ಸಂಬೋಧಿಸಿರಬಹುದು ಎಂದು ಹೇಳಿದ್ದಾರೆ.
ಜಮೀರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಉಪಾಧ್ಯಕ್ಷ ಎ.ಆರ್.ಎಂ. ಹುಸೇನ್ ಶುಕ್ರವಾರ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದರು. “ಚನ್ನಪಟ್ಟಣ ಉಪಚುನಾವಣೆ ವೇಳೆ ಝಮೀರ್ ನೀಡಿದ ಹೇಳಿಕೆ ಪಕ್ಷಕ್ಕೆ ದಕ್ಕೆ ತಂದಿರುವುದು ಸ್ಪಷ್ಟವಾಗಿದೆ. ಪಕ್ಷದ ಹಿನ್ನಡೆಗೆ ಜಮೀರ್ ಬೆಲೆ ತೆರಬೇಕಾಗುತ್ತದೆ. ಅವರು ರಾಜಕೀಯ ಪ್ರಬುದ್ಧತೆಯನ್ನು ಕಳೆದುಕೊಂಡಿರುವುದರಿಂದ, ಪಕ್ಷವು ಅವರನ್ನು ಮುಖ್ಯವಾಹಿನಿಯ ನಾಯಕ ಎಂದು ಬಿಂಬಿಸಬಾರದು” ಎಂದು ಹುಸೇನ್ ಹೇಳಿದ್ದಾರೆ.
ಇದೇ ವೇಳೆ ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದ ಮೇಲೆ ಜಮೀರ್ ಹೇಳಿಕೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೀಶ್ವರ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಯೋಗೇಶ್ವರ್, ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ, ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಣಕ್ಕಿಳಿದಿದ್ದಾರೆ.
ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ
2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ


