Homeಕರ್ನಾಟಕಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುಮಾರಸ್ವಾಮಿ, ಬೊಮ್ಮಾಯಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುಮಾರಸ್ವಾಮಿ, ಬೊಮ್ಮಾಯಿ

- Advertisement -
- Advertisement -

ಸಂಸದರಾಗಿ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್‌.ಡಿ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಇಬ್ಬರು ನಾಯಕರೂ ಇಂದು (ಜೂನ್ 15) ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕುಮಾರಸ್ವಾಮಿ, ಲೋಕಸಭೆಯ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಸಂಸದರಾಗಿದ್ದಾರೆ. ಹಾಗಾಗಿ, ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದ ಬಸವರಾಜ ಬೊಮ್ಮಾಯಿ, ಲೋಕಸಭೆ ಚುನಾವಣೆಯಲ್ಲಿ ಗೆದ್ದು ಹಾವೇರಿ ಕ್ಷೇತ್ರದ ಸಂಸದರಾಗಿದ್ದಾರೆ. ಈ ಹಿನ್ನೆಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ : ಕೃಷಿ ಇಲಾಖೆಯ ರಾಯಭಾರಿಯಾಗಿ ದರ್ಶನ್‌ಗೆ ಮುಂದುವರಿಸಲ್ಲ: ಸಚಿವ ಎಂ.ಬಿ.ಪಾಟೀಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

0
ಗುಂಟೂರು ಜಿಲ್ಲೆಯ ಸೀತಾನಗರಂನಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕಚೇರಿಯನ್ನು ಆಂಧ್ರ ಪ್ರದೇಶ ರಾಜಧಾನಿ ಪ್ರದೇಶಾಭಿವೃದ್ದಿ ಪ್ರಾಧಿಕಾರ (ಎಪಿಸಿಆರ್‌ಡಿಎ) ಹಾಗೂ ಮಂಗಳಗಿರಿ ತಾಡೆಪಲ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಟಿಎಂಸಿ) ಅಧಿಕಾರಿಗಳು ಶನಿವಾರ ಮುಂಜಾನೆ...