Homeಮುಖಪುಟ'ವಿದ್ಯುತ್ ಕಳ್ಳ': ಕುಮಾರಸ್ವಾಮಿ ನಿವಾಸದ ಬಳಿ ಪೋಸ್ಟರ್‌ ಪತ್ತೆ

‘ವಿದ್ಯುತ್ ಕಳ್ಳ’: ಕುಮಾರಸ್ವಾಮಿ ನಿವಾಸದ ಬಳಿ ಪೋಸ್ಟರ್‌ ಪತ್ತೆ

- Advertisement -
- Advertisement -

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಿದ್ಯುತ್‌ ಕಳ್ಳತನದ ಆರೋಪದ ಬೆನ್ನಲ್ಲೇ ಇದೀಗ ವಿದ್ಯುತ್ ಕಳ್ಳ ಎಚ್.ಡಿ.ಕುಮಾರಸ್ವಾಮಿ ಎಂದು ಬರೆದು ಅಂಟಿಸಿರುವ ಪೋಸ್ಟರ್‌ ವ್ಯಾಪಕವಾಗಿ ವೈರಲ್‌ ಆಗಿದೆ.

ಎಚ್‌ಡಿಕೆ ನಿವಾಸದ ಬಳಿ ‘ಕರೆಂಟ್ ಕದ್ದರು ಎಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು’, ‘ವಿದ್ಯುತ್ ಕಳ್ಳ ಎಚ್.ಡಿ.ಕುಮಾರಸ್ವಾಮಿ’ ಎಂದು ಪೋಸ್ಟರ್‌ ಅಂಟಿಸಲಾಗಿದೆ. ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದಾರೆ. ಈ ಪೋಸ್ಟರ್‌ಗಳು ಸಾಮಾಜಿಕ ಮಾದ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಈಗಾಗಲೇ ವಿದ್ಯುತ್ ಕಳ್ಳತನ ಆರೋಪಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯು (ಬೆಸ್ಕಾಂ) ವಿದ್ಯುತ್ ಕಳ್ಳತನ ಪ್ರಕರಣ ದಾಖಲಿಸಿದೆ.

ಬೆಂಗಳೂರಿನ ಜೆ.ಪಿ ನಗರದಲ್ಲಿರುವ ಕುಮಾರಸ್ವಾಮಿಯವರ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಹೇಳಿದೆ.

ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ. ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ, ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್‌ಗಳಿವೆಯಲ್ಲವೇ? ಎಂದು ಹೇಳಿದೆ.

ರಾಜ್ಯದಲ್ಲಿ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ಬರ ಎದುರಿಸುತ್ತಿದ್ದೀರಾ? ಎಂದು ಟೀಕಿಸಿದೆ.

ವಿದ್ಯುತ್ ಕಳ್ಳತನ ಮಾಡಿದ್ದಾರೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇದು ಅಚಾತುರ್ಯದಿಂದ ಆದ ಘಟನೆ. ದಂಡ ಕಟ್ಟುತ್ತೇನೆ ಎಂದು ಹೇಳಿದ್ದರು. ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್‌ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಹೇಳಿಕೊಂಡಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ...

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...