Homeಕರ್ನಾಟಕತಮ್ಮ ಶರತ್ತು ಒಪ್ಪಿಕೊಳ್ಳುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದ ಎಚ್‌ಡಿಕೆ

ತಮ್ಮ ಶರತ್ತು ಒಪ್ಪಿಕೊಳ್ಳುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದ ಎಚ್‌ಡಿಕೆ

- Advertisement -
- Advertisement -

ಬುಧವಾರ ಮತದಾನ ನಡೆದ ದಿನದಂದು 10 ಎಕ್ಸಿಟ್ ಪೋಲ್‌ಗಳು ಹೊರಬಿದ್ದಿದ್ದವು ಈ ಪೈಕಿ ಬಹುತೇಕ ಸಮೀಕ್ಷೆಯಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುತ್ತೆ ಎಂದು ಭವಿಷ್ಯ ಹೊರ ಬಿದ್ದಿದೆ. ಕೆಲವು ಮತಗಟ್ಟೆ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಬಹುದು ಎಂದು ಅಂದಾಜಿಸಿದೆ. ಬಿಜೆಪಿ ಪಕ್ಷ ಈಗಾಗಲೇ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಗಾಗಿ ಕಸರತ್ತು ಶುರು ಮಾಡಿದೆ. ಇದರ ನಡುವೆ ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ಅವರು, ”ತಮ್ಮ ಷರತ್ತನ್ನು ಒಪ್ಪಿಕೊಳ್ಳುವ ಯಾವುದೇ ಪಕ್ಷಕ್ಕೆ ಬೆಂಬಲ ನೀಡುತ್ತೇವೆ” ಎಂದು ಹೇಳಿದ್ದಾರೆ.

ಮತ ಎಣಿಕೆ ನಾಳೆ (ಮೇ 13) ಇರುವುದರಿಂದ ವಿಶ್ರಾಂತಿಗಾಗಿ ಸಿಂಗಾಪುರಕ್ಕೆ ತೆರಳುವ ಮೊದಲು ಹೆಚ್​ಡಿ ಕುಮಾರಸ್ವಾಮಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಸಂದರ್ಶನ ನೀಡಿದ್ದಾರೆ. ”ಎಕ್ಸಿಟ್ ಪೋಲ್​ಗಳಲ್ಲಿ ಹಲವು ಸಮೀಕ್ಷೆಗಳು ಜೆಡಿಎಸ್ ಪಾರ್ಟಿಗೆ ಬಹಳ ಕಡಿಮೆ ಸೀಟ್​ಗಳು ಸಿಗುತ್ತವೆ ಎಂದು ತಿಳಿಸಿವೆ. ಆದರೆ ನನಗೆ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಹೋಗುತ್ತೇನೆ ಎಂದು ಹೆಚ್​ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಈ ಮೂಲಕ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಮೈತ್ರಿ ಸರ್ಕಾರಕ್ಕೆ ಸಿದ್ಧರಾಗಿದ್ದಾರೆ ಎನ್ನುವ ಸಂದೇಶ ರವಾನಿಸಿದ್ದಾರೆ. ಕುಮಾರಸ್ವಾಮಿ ಈಗಾಗಲೇ 2006ರಲ್ಲಿ ಬಿಜೆಪಿ ಹಾಗೂ 2018ರಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿಯಾಗಿದ್ದರು. ಹೀಗಾಗಿ ಷರತ್ತುಗಳನ್ನು ಒಪ್ಪಿಕೊಂಡರೆ ಮಾತ್ರ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರಗಳ ಅಡಿಯಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾದಾಗ, ಒಮ್ಮೆ ಬಿಜೆಪಿ (2006) ಮತ್ತು ನಂತರ ಕಾಂಗ್ರೆಸ್ (2018) ನೊಂದಿಗೆ ಕುಮಾರಸ್ವಾಮಿ ಅವರು ಎದುರಿಸಿದ ಬಿಕ್ಕಟ್ಟುಗಳಿಂದಾಗಿ ಕುಮಾರಸ್ವಾಮಿ ಅವರು ಈ ಬಾರಿ ನಿಟ್ಟ ನಿಲುವನ್ನು ಹೊಂದಿದ್ದಾರೆ. ಹೀಗಾಗಿ ಈ ಬಾರಿ ಮೈತ್ರಿಗೆ ಸಹಿ ಹಾಕುವ ಮೊದಲು ಅವರ ಕೆಲವು ಷರತ್ತುಗಳನ್ನು ಪೂರೈಸಲಾಗುತ್ತದೆಯೇ ಎಂದು ಖಚಿತಪಡಿಸಿಕೊಂಡ ನಂತರವೇ ಆ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದು ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಮುಖ್ಯಮಂತ್ರಿಯಾಗಿ ಹೆಚ್​ಡಿ ಕುಮಾರಸ್ವಾಮಿ ಅವರು ಸರ್ಕಾರವನ್ನು ನಡೆಸಲು ಅವರಿಗೆ ಸ್ವತಂತ್ರ ನೀಡಬೇಕು ಎಂದು ಹೇಳಿದ ಅವರು, ”ಯಾರ ಅಪ್ಪಣೆಯೂ ತೆಗೆದುಕೊಳ್ಳುವಂತಿರಬಾರದು. ಹಾಗೂ ಯಾರು ಹಿಡಿತಸಾಧಿಸಬಾರದು ಎಂಬುವುದು ಕುಮಾರಸ್ವಾಮಿಯವರ ಷರತ್ತು. ನಿರ್ದಿಷ್ಟವಾಗಿ ಹೇಳುವುದಾದರೆ, ಜೆಡಿಎಸ್ ಶಾಸಕರು ಜಲಸಂಪನ್ಮೂಲ, ವಿದ್ಯುತ್ ಮತ್ತು ಸಾರ್ವಜನಿಕ ಕೆಲಸಗಳಂತಹ ಖಾತೆಗಳನ್ನು ಪಡೆಯಬೇಕೆಂದು ಕುಮಾರಸ್ವಾಮಿ ಬಯಸುತ್ತಾರೆ. ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಜಾರಿಗೆ ತರಲು ಸಮ್ಮಿಶ್ರ ಪಕ್ಷದ ಪಾಲುದಾರರು ಅವಕಾಶ ನೀಡಬೇಕು” ಎಂದು ಹೆಚ್​ಡಿ ಕುಮಾರಸ್ವಾಮಿ ತಮ್ಮ ಷರತ್ತುಗಳ ಬಗ್ಗೆ ವಿವರಿಸಿದ್ದಾರೆ.

ಇದನ್ನೂ ಓದಿ: ಸಿಟಿ ರವಿ ಸೋಲಿಸಲು ಕಾಂಗ್ರೆಸ್‌ಗೆ ಮತ ಹಾಕಿ: ಕೈ ಅಭ್ಯರ್ಥಿ ಪರ ಜೆಡಿಎಸ್ ಮುಖಂಡನ ಪ್ರಚಾರ

ಕುಮಾರಸ್ವಾಮಿ ಅವರಿಗೆ 2018ರಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿದಾಗ ರಚನೆಯಾದ ಸಮ್ಮಿಶ್ರ ಸಮನ್ವಯ ಸಮಿತಿ ಬೇಕಿಲ್ಲವಂತೆ. ಹಾಗೂ ತಮ್ಮ ಸಮ್ಮಿಶ್ರ ಪಾಲುದಾರ ಪಕ್ಷವು ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಂದ ದೂರವಿರಬೇಕು. ಯಾವುದೇ ಸಿದ್ಧಾಂತಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಚರ್ಚೆಯಿಲ್ಲದೆ ಮಾಡಬಾರದು ಎಂದು ಕುಮಾರಸ್ವಾಮಿ ತಮ್ಮ ಷರತ್ತುಗಳನ್ನು ತಿಳಿಸಿದ್ದಾರೆ.

ಜೆಡಿಎಸ್ ಮೂಲಗಳ ಪ್ರಕಾರ, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ನಾಯಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡರು ಸಮ್ಮಿಶ್ರ ರಚನೆಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಒಂದೆರೆಡು ಬಾರಿ ಜನಾದೇಶ ಮುರಿದು ಬೀಳಲಿದೆ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದಿದ್ದರು.

”2023ರ ಚುನಾವಣೆಯ ನಂತರ ಕೇಸರಿ ಪಕ್ಷವು ತನ್ನ ಬಳಿಗೆ ಬರಬೇಕಾಗುತ್ತದೆ ಎಂದು ಕುಮಾರಸ್ವಾಮಿ ಬಿಜೆಪಿಗೆ 2022ರ ಡಿಸೆಂಬರ್‌ನಲ್ಲಿಯೇ ಎಚ್ಚರಿಕೆ ನೀಡಿದ್ದರು.

ಮಾರ್ಚ್‌ನಲ್ಲಿ, ಕುಮಾರಸ್ವಾಮಿ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಹೈಕಮಾಂಡ್‌ಗಳಿಂದ ಪ್ರಸ್ತಾವನೆಯನ್ನು ಸ್ವೀಕರಿಸಿದ್ದರಂತೆ. ಇದನ್ನು ದೇವೇಗೌಡರು ಸಹ ದೃಢಪಡಿಸಿದ್ದಾರೆ. ಕರ್ನಾಟಕವು 2018, 2008 ಮತ್ತು 2004 ರಲ್ಲಿ ಜನಾದೇಶ ಯಾವ ಪಕ್ಷಕ್ಕೂ ಬಹುಮತ ಇರಲಿಲ್ಲ, ಇದರ ಪರಿಣಾಮವಾಗಿ ಸಮ್ಮಿಶ್ರ ಸರ್ಕಾರಕ್ಕೆ ಕಾರಣವಾಯಿತು. ಈ ಬಾರಿಯ ಚುನಾವಣಾ ಫಲಿತಾಂಶಕ್ಕಾಗಿ ಮೂರು ಪಕ್ಷಗಳು ಕಾತುರರಾಗಿ ಕುಳಿತಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಸ್ವತಂತ್ರವಾಗಿ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದಾರೆ. ಆದರೆ ಜೆಡಿಎಸ್ ಮಾತ್ರ ಸಮ್ಮಶ್ರ ಸರ್ಕಾರ ರಚಿಸಲು ಎರಡೂ ಪಕ್ಷಗಳಿಗೆ ಶರತ್ತುಬದ್ಧ ಆಹ್ವಾನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...