Homeಕರ್ನಾಟಕಕುಮಾರಸ್ವಾಮಿ ಹೇಳಿದ್ದೇ ಸರಿ..: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸುಳಿವು ನೀಡಿದ ಬಿಎಸ್‌ವೈ

ಕುಮಾರಸ್ವಾಮಿ ಹೇಳಿದ್ದೇ ಸರಿ..: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸುಳಿವು ನೀಡಿದ ಬಿಎಸ್‌ವೈ

- Advertisement -
- Advertisement -

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಾರೆ ಎನ್ನುವ ಮಾತುಗಳಿಗೆ ಪುಷ್ಟಿ ನೀಡುವಂತೆ ಇದೀಗ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಸರ್ಕಾರದ ವಿರುದ್ಧ ಗ್ಯಾರಂಟಿ ಜಾರಿ ವಿಚಾರವಾಗಿ ಪ್ರತಿಭಟನೆ ಮಾಡುತ್ತಿದೆ. ಈ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ”ಮುಂಬರುವ ದಿನಗಳಲ್ಲಿ ಬಿಜೆಪಿ ಜೆಡಿಎಸ್ ಒಟ್ಟಿಗೆ ಸೇರಿ ಹೋರಾಟ ಮಾಡುತ್ತೇವೆ. ಸಿಎಂ ಕಛೇರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕುಮಾರಸ್ವಾಮಿ ಹೇಳಿರುವುದು ನಿಜ” ಎಂದು ಹೇಳಿದ್ದಾರೆ.

ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಮುಂದಿನ ದಿನಗಳಲ್ಲಿ ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋರಾಡುತ್ತೇವೆ ಎಂದು ಹೇಳುವ ಮೂಲಕ  ಬಿಎಸ್ ಯಡಿಯೂರಪ್ಪ ಅವರು ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ಗಂಭೀರ ಚಿಂತನೆ ನಡೆಸಿ ಒಂದು ಹಂತಕ್ಕೆ ಬಂದಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಮುಂದಾಗುವ ಸಾಧಕ ಮತ್ತು ಬಾಧಕಗಳ ಬಗ್ಗೆ ಬಿಜೆಪಿ ನಾಯಕರು ಈಗಾಗಲೇ ಚರ್ಚೆ ನಡೆಸಿ ಕೊನೆಗೆ ದಳಪತಿಗಳ ಜತೆ ಮೈತ್ರಿಗೆ ಒಲವು ತೋರಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಕಟ್ಟಿಹಾಕಲು ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಈಗಾಗಲೇ ಸಾಧಕ ಬಾಧಕಗಳ ಬಗ್ಗೆ ಎರಡೂ ಪಕ್ಷಗಳಲ್ಲಿ ಚರ್ಚೆ ಆಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ಮತಗಳು ಕ್ರೂಢೀಕರಣವಾದರೆ ಕಾಂಗ್ರೆಸ್ ಮಣಿಸಲು ಸುಲಭ ಎಂದು ಎರಡೂ ಪಕ್ಷಗಳ ನಾಯಕರ ಲೆಕ್ಕಾಚಾರವಾಗಿದೆ. 20ರಿಂದ 22 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಸಲು ಚಿಂತನೆ ನಡೆಸಿದೆ. ಇನ್ನುಳಿದಂತೆ 6ರಿಂದ 8 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವ ಮಾತುಕತೆಗಳು ನಡೆದಿವೆ ಎನ್ನಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...