Homeಕರ್ನಾಟಕಮಹಿಳಾ ಮೀಸಲಾತಿ ಮಸೂದೆ: ದೇವೇಗೌಡರ ಕನಸು ನನಸಾಗುತ್ತಿದೆ ಎಂದ ಕುಮಾರಸ್ವಾಮಿ

ಮಹಿಳಾ ಮೀಸಲಾತಿ ಮಸೂದೆ: ದೇವೇಗೌಡರ ಕನಸು ನನಸಾಗುತ್ತಿದೆ ಎಂದ ಕುಮಾರಸ್ವಾಮಿ

- Advertisement -
- Advertisement -

ಲೋಕಸಭೆಯಲ್ಲಿ ಮಂಡನೆಯಾದ ಮಹಿಳಾ ಮೀಸಲಾತಿ ಮಸೂದೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದು, ಮಾಜಿ ಪ್ರಧಾನಿ ದೇವೇಗೌಡರ ಕನಸು ನನಸಾಗುತ್ತಿದೆ ಎಂದು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಚ್.ಡಿ.ದೇವೇಗೌಡರು ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಈ ಐತಿಹಾಸಿಕ ಮಸೂದೆ ಮಂಡಿಸಲಾಗಿತ್ತು. ಆದರೆ, ಕೆಲ ಮಿತ್ರಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಆ ಮಸೂದೆ ಅಂಗೀಕಾರವಾಗಿರಲಿಲ್ಲ ಎಂದು ತಿಳಿಸಿದ್ದಾರೆ.

1995ರಲ್ಲಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿ, ಅಧಿಕಾರ ನಡೆಸುವ ಹಕ್ಕು ಕಲ್ಪಿಸಿ ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದ್ದರು. ಈಗ ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಆಗುವುದು ಖಚಿತವಾಗಿದ್ದು, ಈ ಮೂಲಕ ಮಾಜಿ ಪ್ರಧಾನಿ ಕನಸು ನನಸಾಗುತ್ತಿದೆ. ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶಗಳನ್ನು ಕಲ್ಪಿಸುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಮತ್ತವರ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯ. ರಾಜಕೀಯಕ್ಕೆ ದೂರವಿಟ್ಟು ಈ ಮಸೂದೆಯನ್ನು ಎಲ್ಲಾ ಪಕ್ಷಗಳು ಬೆಂಬಲಿಸಬೇಕು ಎಂದು ಹೇಳಿದ್ದಾರೆ.

ಇನ್ನು ಕಾವೇರಿ ನೀರಿನ ವಿಷಯದಲ್ಲಿ ಕರ್ನಾಟಕಕ್ಕೆ ಹಿಂದಿನಿಂದಲೂ ಅನ್ಯಾಯವಾಗುತ್ತಿದೆ. ಇದರ ವಿರುದ್ಧ ರಾಜ್ಯ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಬೇಕಿದೆ.‌ ಇದಕ್ಕೆ ಎಲ್ಲಾ ಪಕ್ಷಗಳು ಕೈ ಜೋಡಿಸಬೇಕಿದೆ ಎಂದು  ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ನೀರಾವರಿ ವಿವಾದಕ್ಕೊಂದು ತಾರ್ತಿಕ ಅಂತ್ಯ ಸಿಗಬೇಕು. ನಮ್ಮ ನದಿಗೆ ನಮ್ಮ ಹಣದಿಂದ ಅಣೆಕಟ್ಟು ಕಟ್ಟಿಕೊಂಡು ಅವರಿಗೆ ನೀರು ಕೊಡಬೇಕಾಗಿದೆ. ವ್ಯರ್ಥವಾಗಿ ಹರಿದು ಹೋಗುವ ನೀರು ಹಿಡಿದಿಟ್ಟುಕೊಳ್ಳಲು ಅವರೂ ಬೇರೆ ಅಣೆಕಟ್ಟು ಕಟ್ಟಿಕೊಳ್ಳುವುದಿಲ್ಲ, ನಮಗೂ ಕಟ್ಟಿಕೊಳ್ಳಲು ಬಿಡುವುದಿಲ್ಲ ಎಂದು ತಮಿಳುನಾಡು ವಿರುದ್ಧ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನು ಓದಿ: ಚುನಾವಣೆಗೆ ಮೊದಲು ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆ: ಎಎಪಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...