Homeಕರ್ನಾಟಕಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

ಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

- Advertisement -
- Advertisement -

ಜಿಎಸ್‌ಟಿಗೆ 4 ವರ್ಷವಾಗಿದ್ದಕ್ಕೆ ಒಕ್ಕೂಟ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಒಕ್ಕೂಟ ಸರ್ಕಾರ ಸಂಭ್ರಮಿಸಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಎಸ್‌‌ಟಿಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಒಕ್ಕೂಟ ಸರ್ಕಾರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯಕ್ಕೆ 9 ಸಾವಿರ ಕೋಟಿ ರೂ. ಗಳಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ ಕರ್ನಾಟಕವೂ ಸಂಭ್ರಮಿಸುತ್ತಿತ್ತು. ಕೋವಿಡ್‌ ಕಾಲದಲ್ಲಿ ಆದಾಯವಿಲ್ಲದೇ ನಲುಗಿರುವ ರಾಜ್ಯಕ್ಕೆ ಪರಿಹಾರದ ಸಿಕ್ಕಿದ್ದಿದ್ದರೆ ಅನುಕೂಲವಾಗುತ್ತಿತ್ತು. ಆದರೆ, ಪರಿಹಾರ ನೀಡದ ಒಕ್ಕೂಟ ಸರ್ಕಾರ ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆಶಿ ಅಸಮಾಧಾನ

ರಾಜ್ಯಗಳ ಅದಾಯವನ್ನು ಒಕ್ಕೂಟ ಸರ್ಕಾರಕ್ಕೆ ತಿರುಗಿಸಿಕೊಳ್ಳುವುದು, ಅನುದಾನಕ್ಕಾಗಿ ರಾಜ್ಯಗಳು ಒಕ್ಕೂಟ ಸರ್ಕಾರದ ಮುಂದೆ ಗುಲಾಮರಂತೆ ನಿಲ್ಲುವಂತೆ ಮಾಡುವುದು ಜಿಎಸ್‌ಟಿಯ ಉದ್ದೇಶ. ಇಂಥ ಗುಲಾಮಗಿರಿಯನ್ನು ಕಾಂಗ್ರೆಸ್‌ ರೂಪಿಸಿತು, ಬಿಜೆಪಿ ಜಾರಿಗೆ ತಂದಿತು. ಈಗ ರಾಜ್ಯಗಳು ಪರಿಹಾರಕ್ಕಾಗಿ ಬೇಡುವಂತಾಗಿದೆ. ಪೆಟ್ರೋಲಿಯಂ ಅನ್ನು ಜಿಎಸ್‌ಟಿಗೆ ಸೇರಿಸದಂತೆ ಹೋರಾಡುವಂತಾಗಿದೆ ಎಂದು ಅವರು ಹೇಳಿದ್ದಾರೆ.

“ಜಿಎಸ್‌ಟಿ ರಾಜ್ಯಗಳ ಅನುದಾನ ಕಸಿಯಿತು. ಆದಕ್ಕೆ ಪರಿಹಾರವಾಗಿ ಸಾಮಾನ್ಯರ ಬದುಕನ್ನೇನಾದರೂ ಹಸನಾಗಿಸಿತೇ? ನವ ಉದ್ಯಮಿಗಳನ್ನು ಪ್ರೋತ್ಸಾಹಿಸಿದೆಯೇ? ಅದ್ಯಾವುದೂ ಆಗಿಲ್ಲ. ವ್ಯಾಪರಿಗಳ ಪರಿಸ್ಥಿತಿ ಹಿಂದಿಗಿಂತಲೂ ಈಗ ಏನಾದರೂ ಉತ್ತಮವಾಗಿದೆಯೇ? ಆದರೆ, ಪರಿಸ್ಥಿತಿ ಮಾತ್ರ ಭಿನ್ನವಾಗಿದೆ. ಇಂಥ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸಂಭ್ರಮಿಸುವುದೇನಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಈ ಒಕ್ಕೂಟದಲ್ಲಿ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನು ಹರಣ ಮಾಡಿದ್ದಕ್ಕೆ ದ್ಯೋತಕವಾಗಿ ಜಿಎಸ್‌ಟಿ ವ್ಯವಸ್ಥೆ ದೈತ್ಯವಾಗಿ ನಿಂತಿದೆ. ರಾಜ್ಯಗಳನ್ನು ಶೋಷಿಸಿ ಒಕ್ಕೂಟ ಸರ್ಕಾರವನ್ನು ಪೋಷಿಸಿದ ಅರ್ಥವ್ಯವಸ್ಥೆಯಾಗಿ ಜಿಎಸ್‌ಟಿ ಕಾಣಿಸುತ್ತಿದೆ. ಇಂಥ ಜಿಎಸ್‌ಟಿಯಿಂದ ರಾಜ್ಯಗಳು ಸಂಭ್ರಮಿಸುವುದು ಏನೂ ಇಲ್ಲ. ಇದು ಕಾಂಗ್ರೆಸ್‌–ಬಿಜೆಪಿಯ ಯಜಮಾನಿಕೆ ಸಂಕೇತ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ದೇವರೆ ಶಿಕ್ಷೆ ಕೊಡುವ ಕಾಲ‌ ಬರುತ್ತದೆ’: ಯಡಿಯೂರಪ್ಪ ವಿರುದ್ದ ರೇವಣ್ಣ ಕಿಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...