Homeಮುಖಪುಟಬಿಜೆಪಿ ಲೆಟರ್‌ ಹೆಡ್‌ನಲ್ಲಿ ಕುಮಾರಸ್ವಾಮಿ ಸಹಿ: ಮತ್ತೆ ಮುನ್ನಲೆಗೆ ಬಂದ ಮೈತ್ರಿ ಚರ್ಚೆ

ಬಿಜೆಪಿ ಲೆಟರ್‌ ಹೆಡ್‌ನಲ್ಲಿ ಕುಮಾರಸ್ವಾಮಿ ಸಹಿ: ಮತ್ತೆ ಮುನ್ನಲೆಗೆ ಬಂದ ಮೈತ್ರಿ ಚರ್ಚೆ

- Advertisement -
- Advertisement -

ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ INDIA ಸಭೆಯಲ್ಲಿ ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಹಾಗಾಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಬಿಜೆಪಿ ಲೆಟರ್‌ಹೆಡ್‌ನಲ್ಲಿ ನೀಡಿದ ದೂರಿಗೆ ಮಾಜಿ ಸಿಎಂ ಕುಮಾರಸ್ವಾಮಿಯವರು ಸಹ ಸಹಿ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಿ ಟಿ ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸುನೀಲ್ ಕುಮಾರ್, ರಮೇಶ್ ಜಾರಕಿಹೊಳಿ ಹಾಗೂ ಜೆಡಿಎಸ್ ವತಿಯಿಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಎಚ್​ ಡಿ ರೇವಣ್ಣ ಸೇರಿದಂತೆ ಜೆಡಿಎಸ್​ ಶಾಸಕರು ಸಹ ಬಿಜೆಪಿ ಜತೆಗೂಡಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಅಥವಾ ಹೊರಗಿನಿಂದ ಬೆಂಬಲ ಕುರಿತ ಚರ್ಚೆ ರಾಜಕೀಯ ವಲಯದಲ್ಲಿ ಪ್ರಾರಂಭವಾಗಿರುವ ಬಿನ್ನಲೇ ಬಿಜೆಪಿ ಹೋರಾಟಕ್ಕೆ ಬೆಂಬಲ ನೀಡುತ್ತಿರುವುದು, ಅಧಿಕೃತ ಲೆಟರ್‌ಹೆಡ್‌ಗೆ ಸಹಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಚುನಾವಣೆ ಮುಗಿದು ಎರಡು ತಿಂಗಳು ಪೂರೈಸಿದರೂ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡರೆ ಅಥವಾ ಪಕ್ಷವನ್ನು ವಿಲೀನ ಮಾಡಿದರೆ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ವಿಪಕ್ಷ ನಾಯಕ ಸ್ಥಾನ ನೀಡಬಹುದು ಎನ್ನುವ ಮಾತುಗಳ ನಡುವೆ ಇಂದಿನ ನಡೆ ಜರುಗಿದೆ.

ಇನ್ನು ಸದನದ ಒಳಗಡೆ ಹಾಗೂ ಹೊರಗೆ ಉಭಯ ಪಕ್ಷಗಳು ಒಗ್ಗಟ್ಟಾಗಿದ್ದು, ಕಾಂಗ್ರೆಸ್ ವಿರುದ್ಧ ಜಂಟಿಯಾಗಿ ಹೋರಾಟಕ್ಕಿಳಿದಿದೆ. ಮೈತ್ರಿಯ ಸುದ್ದಿ ಬೆನ್ನಲ್ಲೇ ಇಬ್ಬರ ಹೊಂದಾಣಿಕೆ ಹೋರಾಟ ಚರ್ಚೆಗೆ ಗ್ರಾಸವಾಗಿದೆ.

ಕುಮಾರಸ್ವಾಮಿಯವರು ಎನ್‌ಡಿಎ ಸಭೆಗೆ ತಮ್ಮನ್ನು ಕರೆದಿಲ್ಲ ಮತ್ತು ತಾವು ಬಿಜೆಪಿಯೊಂದಿಗೆ ಪಕ್ಷ ವಿಲೀನ ಮಾಡುತ್ತಿಲ್ಲ ಎಂದು ಹೇಳಿದ್ದರು. ಆದರೆ ಈಗಿನ ನಡೆ ಬಗ್ಗೆ ಮತ್ತೆ ಚರ್ಚೆಗಳು ನಡೆಯುತ್ತಿವೆ.

ಇದನ್ನೂ ಓದಿ; ಈ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ: ಬೆತ್ತಲೆ ಮೆರವಣಿಗೆ ಘಟನೆ ಕುರಿತು ಮಣಿಪುರ ಸಿಎಂ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ

0
ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯು ಎರಡು ಭಾರತೀಯ ಮಸಾಲೆ ಬ್ರಾಂಡ್‌ಗಳಾದ ಎವರೆಸ್ಟ್ ಮತ್ತು ಎಂಡಿಎಂಹೆಚ್‌ಗಳ ಆಮದು, ಬಳಕೆ ಮತ್ತು ಮಾರಾಟವನ್ನು ನಿಷೇಧಿಸಿದೆ. ಅಲ್ಲದೆ ಈ ಮಸಾಲೆಗಳಲ್ಲಿನ ಎಥಿಲೀನ್ ಆಕ್ಸೈಡ್...