Homeಕರೋನಾ ತಲ್ಲಣಕುಂಭಮೇಳದಲ್ಲಿ ನಕಲಿ ಕೊರೊನಾ ಟೆಸ್ಟ್ ಹಗರಣ: ಇಬ್ಬರು ಅಧಿಕಾರಿಗಳ ಅಮಾನತು

ಕುಂಭಮೇಳದಲ್ಲಿ ನಕಲಿ ಕೊರೊನಾ ಟೆಸ್ಟ್ ಹಗರಣ: ಇಬ್ಬರು ಅಧಿಕಾರಿಗಳ ಅಮಾನತು

- Advertisement -
- Advertisement -

ಹರಿದ್ವಾರದಲ್ಲಿ ನಡೆದ ಕುಂಭ ಮೇಳದ ವೇಳೆ ನಕಲಿ ಕೋವಿಡ್ ಪರೀಕ್ಷಾ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಉತ್ತರಾಖಂಡದಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಕುಂಭ ಮೇಳದ ಅಧಿಕಾರಿ (ವೈದ್ಯಕೀಯ ಮತ್ತು ಆರೋಗ್ಯ) ಡಾ. ಅರ್ಜುನ್ ಸಿಂಗ್ ಸೆಂಗಾರ್ ಮತ್ತು ಉಸ್ತುವಾರಿ ಅಧಿಕಾರಿ (ವೈದ್ಯಕೀಯ ಮತ್ತು ಆರೋಗ್ಯ) ಡಾ. ಎನ್.ಕೆ. ತ್ಯಾಗಿ ಅವರನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರ ಆದೇಶದ ಮೇರೆಗೆ ಗುರುವಾರ ರಾತ್ರಿ ಅಮಾನತುಗೊಳಿಸಲಾಗಿದೆ.

ಕುಂಭಮೇಳದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ ಎಂಬ ವರದಿಗಳು ಹೊರಬಿದ್ದ ನಂತರ ಹರಿದ್ವಾರ್ ಜಿಲ್ಲಾಡಳಿತ, ಹಗರಣದ ಕುರಿತು ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚನೆ ಮಾಡಲಾಗಿತ್ತು. ಈ ಸಮಿತಿಯ ಶಿಫಾರಸ್ಸನ್ನು ಆಧರಿಸಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

“ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಮತ್ತು ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ. ಹಗರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: ಕುಂಭಮೇಳ: ನಕಲಿ ಕೊರೊನಾ ಪರೀಕ್ಷೆ ನಡೆಸಿದ್ದ ಪ್ರಯೋಗಾಲಯಗಳ ವಿರುದ್ಧ ಪ್ರಕರಣ

“ಹರಿದ್ವಾರದ ಕುಂಭ ಮೇಳದ ಸಮಯದಲ್ಲಿ ನಕಲಿ ಕೊರೊನಾ ರ್‍ಯಾಪಿಡ್ ಪರೀಕ್ಷೆಗಳನ್ನು ನಡೆಸಿದ್ದ ಕಂಪನಿಗಳ ಜೊತೆಗೆ ಅಧಿಕಾರಿಗಳು ಕೈಜೋಡಿಸಿರುವುದನ್ನು ತನಿಖಾ ಸಮಿತಿಯು ಕಂಡುಕೊಂಡಿದೆ. ಅಜಾಗರೂಕತೆ ತೋರಿದ ಮತ್ತು ರಾಜ್ಯಕ್ಕೆ ಹಣಕಾಸಿನ ನಷ್ಟವನ್ನು ಉಂಟುಮಾಡಿದ್ದಕ್ಕಾಗಿ ಇವರ ವಿರುದ್ಧ ಶಿಸ್ತು ಕ್ರಮಕ್ಕೆ ಸಮಿತಿ ಶಿಫಾರಸು ಮಾಡಿತ್ತು” ಎಂದು ಮಾಹಿತಿ ನೀಡಿದ್ದಾರೆ.

ಹರಿದ್ವಾರದ ಮುಖ್ಯ ಅಭಿವೃದ್ಧಿ ಅಧಿಕಾರಿಯ ನೇತೃತ್ವದ ತನಿಖಾ ಸಮಿತಿಯು ತನ್ನ ವರದಿಯನ್ನು ಆಗಸ್ಟ್ 16 ರಂದು ಸರ್ಕಾರಕ್ಕೆ ಸಲ್ಲಿಸಿತ್ತು. ಹರಿದ್ವಾರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸೆಂಥಿಲ್ ಆವೊದೈ ಕೃಷ್ಣ ರಾಜ್ ಎಸ್ ಅವರಿಗೆ ನಕಲಿ ಪರೀಕ್ಷಾ ಹಗರಣದಲ್ಲಿ ಭಾಗಿಯಾಗಿರುವ ಕಂಪನಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಏಪ್ರಿಲ್ 1 ರಿಂದ 30 ರವರೆಗೆ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳಗಳಲ್ಲಿ ಒಂದಾದ ಕುಂಭ ಮೇಳದಲ್ಲಿ ಕೊರೊನಾ ಪರೀಕ್ಷೆಗಳನ್ನು ನಡೆಸಲು ಮುಖ್ಯವಾಗಿ ದೆಹಲಿ ಮತ್ತು ಹರಿಯಾಣ ಮೂಲದ ಖಾಸಗಿ ಪ್ರಯೋಗಾಲಯಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಈ ಖಾಸಗಿ ಪ್ರಯೋಗಾಲಯಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಉತ್ತರಾಖಂಡ ಸರ್ಕಾರ ಹರಿದ್ವಾರ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿತ್ತು.


ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿಗೆ ಹಲ್ಲೆ ನಡೆಸಿದ ಸ್ವಪಕ್ಷದ ಮುಖಂಡ

0
ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಕೃಷ್ಣಕುಮಾರ್ ಅವರ ಕಣ್ಣಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಪಕ್ಷದ ಸ್ಥಳೀಯ ನಾಯಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೃಷ್ಣಕುಮಾರ್ ಇತ್ತೀಚೆಗೆ...