Homeಮುಖಪುಟಕುಂಭಮೇಳವನ್ನು ಶ್ಲಾಘಿಸಿ, ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟವರನ್ನು ಮರೆತ ಮೋದಿ: ವಿಪಕ್ಷಗಳಿಂದ ಪ್ರತಿಭಟನೆ

ಕುಂಭಮೇಳವನ್ನು ಶ್ಲಾಘಿಸಿ, ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟವರನ್ನು ಮರೆತ ಮೋದಿ: ವಿಪಕ್ಷಗಳಿಂದ ಪ್ರತಿಭಟನೆ

- Advertisement -
- Advertisement -

ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭ ಮೇಳವನ್ನು ಮಂಗಳವಾರ ಸದನದಲ್ಲಿ ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ಇಷ್ಟೊಂದು ದೊಡ್ಡ ಸಭೆಯನ್ನು ಆಯೋಜಿಸಿ ಭಾರತದ ಸಾಮೂಹಿಕ ಶಕ್ತಿಯನ್ನು ಪ್ರಶ್ನಿಸಿದವರಿಗೆ ಇದು ಸೂಕ್ತ ಉತ್ತರವನ್ನು ನೀಡಿದೆ ಎಂದು ಹೇಳಿದ್ದಾರೆ. ಕುಂಭಮೇಳವನ್ನು ಶ್ಲಾಘಿಸಿ

ಲೋಕಸಭೆಯಲ್ಲಿ ಅವರ ಹೇಳಿಕೆಯು ವಿರೋಧ ಪಕ್ಷಗಳಿಂದ ತೀವ್ರ ಪ್ರತಿಭಟನೆಗೆ ಕಾರಣವಾಯಿತು. ಕುಂಭಮೇಳದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಅದೇ ಕಾರ್ಯಕ್ರಮದ ಸಮಯದಲ್ಲಿ ಕಾಲ್ತುಳಿತಕ್ಕೆ ಒಳಪಟ್ಟು ಸಾವನ್ನಪ್ಪಿದ ಜೀವಗಳ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ವಿಪಕ್ಷಗಳು ಪ್ರಶ್ನಿಸಿವೆ. ಕುಂಭಮೇಳವನ್ನು ಶ್ಲಾಘಿಸಿ

ಲೋಕಸಭೆಯಲ್ಲಿ ಮಾತನಾಡಿದ ಮೋದಿ, ಮಹಾ ಕುಂಭದಲ್ಲಿ ನಡೆದ ಬೃಹತ್ ಏಕತೆಯ ಪ್ರದರ್ಶನವು ಭಾರತದ ಶಕ್ತಿಯಾಗಿದೆ ಎಂದು ಹೇಳಿದ್ದಾರೆ. ಅದರಲ್ಲೂ ವಿಶೇಷವಾಗಿ ಜಗತ್ತು ಅಸ್ತವ್ಯಸ್ತವಾಗಿರುವ ಈ ಸಮಯದಲ್ಲಿ ಈ ಕಾರ್ಯಕ್ರಮ ಭಾರತದ ಶಕ್ತಿಯನ್ನು ಪ್ರದರ್ಶಿಸಿದೆ ಎಂದು ಹೇಳಿದ್ದಾರೆ. “ಇತಿಹಾಸದಾದ್ಯಂತ, ಮುಂದಿನ ಪೀಳಿಗೆಗೆ ಉದಾಹರಣೆಗಳಾಗುವ ನಿರ್ಣಾಯಕ ಕ್ಷಣಗಳಿವೆ” ಎಂದು ಅವರು ಹೇಳಿದ್ದಾರೆ.

“ನಮ್ಮ ರಾಷ್ಟ್ರವು ಸಹ ಹೊಸ ದಿಕ್ಕನ್ನು ನೀಡಿದ ಮತ್ತು ತನ್ನ ಜನರನ್ನು ಜಾಗೃತಗೊಳಿಸಿದ ಅಂತಹ ಕ್ಷಣಗಳಿಗೆ ಸಾಕ್ಷಿಯಾಗಿದೆ… ಅದೇ ರೀತಿ, ನಮ್ಮ ಸ್ವಾತಂತ್ರ್ಯ ಹೋರಾಟವು ಹಲವಾರು ತಿರುವುಗಳಿಂದ ಗುರುತಿಸಲ್ಪಟ್ಟಿದೆ – 1857 ರ ದಂಗೆ, ವೀರ್ ಭಗತ್ ಸಿಂಗ್ ಅವರ ಹುತಾತ್ಮತೆ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ‘ದೆಹಲಿ ಚಲೋ’ ಎಂಬ ಘೋಷಣೆ ಮತ್ತು ಮಹಾತ್ಮ ಗಾಂಧಿಯವರ ದಂಡಿ ಮೆರವಣಿಗೆ” ಎಂದು ಮೋದಿ ಹೇಳಿದ್ದಾರೆ.

“ಜನರು ತಮ್ಮ ಅಹಂಕಾರವನ್ನು ಬದಿಗಿಟ್ಟು ‘ನಾನು’ ಅಲ್ಲ ‘ನಾವು’ ಎಂಬ ಭಾವನೆಯೊಂದಿಗೆ ಪ್ರಯಾಗ್‌ರಾಜ್‌ನಲ್ಲಿ ಒಟ್ಟುಗೂಡಿದರು. ಮಹಾ ಕುಂಭವು ದೊಡ್ಡವರು ಮತ್ತು ಸಣ್ಣವರು ಎಂಬ ಭೇದವಿಲ್ಲ ಎಂಬುದನ್ನು ಪ್ರದರ್ಶಿಸಿತು” ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಮಹಾಕುಂಭದಲ್ಲಿ ವಿವಿಐಪಿಗಳಿಗೆ ಪ್ರತ್ಯೇಕ ಮತ್ತು ಸಾಮಾನ್ಯ ಜನರಿಗೆ ಪ್ರತ್ಯೇಕ ಸ್ಥಳಗಳನ್ನು ಗುರುತಿಸಲಾಗಿತ್ತು ಎಂದು ವರದಿಯಾಗಿದೆ.

ತಮ್ಮ ಇತ್ತೀಚಿನ ಮಾರಿಷಸ್ ಭೇಟಿಯನ್ನು ನೆನಪಿಸಿಕೊಂಡ ಮೋದಿ, ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ಗಂಗಾ ತಲಾಬ್‌ನಲ್ಲಿ ಅರ್ಪಿಸಿದ ಕ್ಷಣ ಭಕ್ತಿ, ನಂಬಿಕೆ ಮತ್ತು ಈ ಆಚರಣೆಯ ವಾತಾವರಣವು ನಿಜವಾಗಿಯೂ ಅದ್ಭುತವಾಗಿತ್ತು ಎಂದು ಹೇಳಿದ್ದಾರೆ.

ನಂತರ, ಮಹಾ ಕುಂಭದ ಕುರಿತು ಚರ್ಚೆ ನಡೆಸಲು ಕೋರಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮಾತನ್ನು ಸ್ಪೀಕರ್ ಓಂ ಬಿರ್ಲಾ ನಿರಾಕರಿಸಿದರು. ಇದರ ನಂತರ ವಿರೋಧ ಪಕ್ಷಗಳ ಪೀಠವು ಪ್ರತಿಭಟನೆ ನಡೆಸಿದೆ. ವಿರೋಧ ಪಕ್ಷದ ಸಂಸದರು ಸದನದ ಬಾವಿಗೆ ಧಾವಿಸಿ ಪ್ರಧಾನಿಗೆ ಯಾವ ನಿಯಮದ ಅಡಿಯಲ್ಲಿ ಮಾತನಾಡಲು ಅವಕಾಶವಿದೆ ಎಂದು ಕೇಳಿದ್ದಾರೆ.

ಪ್ರಧಾನಿ ಮತ್ತು ಸಚಿವರು ಸದನದಲ್ಲಿ ಹೇಳಿಕೆ ನೀಡಲು ಅನುಮತಿಸುವ ಕಾರ್ಯವಿಧಾನ ಮತ್ತು ವ್ಯವಹಾರ ನಡವಳಿಕೆ ನಿಯಮಗಳ ನಿಯಮ 372 ಅನ್ನು ಈ ವೇಳೆ ಬಿರ್ಲಾ ಉಲ್ಲೇಖಿಸಿದ್ದು, ಆದರೆ ಹೇಳಿಕೆಯ ನಂತರ ಯಾವುದೇ ಪ್ರಶ್ನೆಗಳನ್ನು ಕೇಳಲು ಅವಕಾಶವಿಲ್ಲ ಎಂದು ಹೇಳಿದ್ದಾರೆ. ವಿರೋಧ ಪಕ್ಷದ ಸಂಸದರು ಘೋಷಣೆಗಳನ್ನು ಮುಂದುವರೆಸಿದ್ದರಿಂದ ಸದನವನ್ನು ನಂತರ 30 ನಿಮಿಷಗಳ ಕಾಲ ಮುಂದೂಡಲಾಯಿತು.

ಮಹಾ ಕುಂಭ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ಗೌರವ ಸಲ್ಲಿಸಲಿಲ್ಲ ಎಂದು ರಾಹುಲ್ ಹೇಳಿದ್ದಾರೆ. “ಪ್ರಧಾನಿಯವರು ಹೇಳಿದ್ದನ್ನು ನಾನು ಬೆಂಬಲಿಸಲು ಬಯಸಿದ್ದೆ. ಕುಂಭ ನಮ್ಮ ಇತಿಹಾಸ ಮತ್ತು ಸಂಸ್ಕೃತಿ. ಕುಂಭದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ಸಂತಾಪ ಸೂಚಿಸಲಿಲ್ಲ ಎಂಬುದು ನಮ್ಮ ಏಕೈಕ ದೂರು” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ

ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....