Homeಕರೋನಾ ತಲ್ಲಣಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

ಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

- Advertisement -
- Advertisement -

ಬೆಂಗಳೂರಿನ ಕುನಾಲ್ ಗಾರ್ನಾ ಎಂಬ 21 ವರ್ಷದ ಉದ್ಯಮಿ ಎರಡು ಬಾರಿ ಪ್ಲಾಸ್ಮಾ ದಾನ ಮಾಡಿ ನಾಲ್ಕು ಜೀವಗಳು ಉಳಿಯಲು ಕಾರಣವಾಗಿದ್ದು, ಅವರಿಗೆ ಜನರಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.

ಮಾರ್ಚ್‌ನಲ್ಲಿ ಕುನಾಲ್ ತನ್ನ ಅಧ್ಯಯನ ಮುಗಿಸಿದ ನಂತರ ಯುಕೆಯಿಂದ ಹಿಂದಿರುಗಿದಾಗ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಣಮುಖರಾದ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಆದರೆ ಸಾಂಕ್ರಾಮಿಕ ರೋಗ ಹರಡುತ್ತಿದ್ದ ಮೊದಲ ಕೆಲವು ತಿಂಗಳುಗಳಲ್ಲಿ, ಪ್ಲಾಸ್ಮಾ ದಾನ ಪ್ರಕ್ರಿಯೆಯು ಪ್ರಾರಂಭವಾಗಲಿಲ್ಲ. ಅದೂ ಅಲ್ಲದೆ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಕಡಿಮೆಯಿತ್ತು. ಪ್ರಕರಣಗಳು ಹೆಚ್ಚಿದಂತೆ ಜೂನ್‌ನಲ್ಲಿ, ಎಚ್‌ಸಿಜಿ ಆಸ್ಪತ್ರೆಯಿಂದ, ಪ್ಲಾಸ್ಮಾ ದಾನ ಮಾಡಲು ಅವರ ಒಪ್ಪಿಗೆಯನ್ನು ಕೇಳಲಾಗಿತ್ತು. ಅವರು ತಕ್ಷಣ ಒಪ್ಪಿದ್ದರು.

ಜೂನ್ 15 ರಂದು ಮೊದಲ ಬಾರಿಗೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದ್ದರು. ನಂತರ ಆಸ್ಪತ್ರೆಯ ಅಧಿಕಾರಿಗಳಿಗೆ ತಮ್ಮ ಪ್ಲಾಸ್ಮಾವನ್ನು ಹೆಚ್ಚು ಬಾರಿ ದಾನ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದ್ದರು.

“ಕೆಲವು ವರ್ಷಗಳ ಹಿಂದೆ ನಾನು ಪ್ಲೇಟ್‌ಲೆಟ್‌ಗಳನ್ನು ದಾನ ಮಾಡಿದ್ದೇನೆ. ನಾನು ಸಾಮಾನ್ಯವಾಗಿ ರಕ್ತದಾನ ಮಾಡುತ್ತಿದ್ದೆ. ಆದ್ದರಿಂದ, ನಾನು ಪ್ಲಾಸ್ಮಾ ದಾನಕ್ಕೂ ಒಪ್ಪಿದ್ದೆ. ಆರಂಭದಲ್ಲಿ, ನನ್ನ ಪೋಷಕರು ಸ್ವಲ್ಪ ಭಯಭೀತರಾಗಿದ್ದರು. ಆದರೆ ಇದು ರೋಗಿಗಳ ಜೀವ ಉಳಿಸಲು ಸಹಾಯ ಮಾಡುತ್ತದೆ ಎಂದು ಅವರಿಗೆ ಹೇಳಿದ ನಂತರ ಒಪ್ಪಿದರು. ನನ್ನ ಬಳಿ ಬಿ-ಪಾಸಿಟಿವ್ ಪ್ಲಾಸ್ಮಾ ಇದೆ. ನಾನು ಅದನ್ನು ಮೊದಲ ಬಾರಿಗೆ ದಾನ ಮಾಡಿದಾಗ ನನಗೆ ಏನೂ ತೊಂದರೆಯಾಗಲಿಲ್ಲ. ಇದು ನೋವುರಹಿತವಾಗಿರುತ್ತದೆ, ಜೊತೆಗೆ ಕೇವಲ ಒಂದು ಗಂಟೆ ಸಮಯವನಷ್ಟೇ ತೆಗೆದುಕೊಳ್ಳುತ್ತದೆ” ಎಂದು ಕುನಾಲ್ ದಿ ನ್ಯೂ ಸಂಡೇ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ನಾನು ಹೆಚ್ಚು ಪ್ಲಾಸ್ಮಾ ದಾನಕ್ಕೆ  ಸಿದ್ಧನಾಗಿದ್ದೇನೆ ಎಂದು ಎಚ್‌ಸಿಜಿ ವೈದ್ಯರಿಗೆ ಹೇಳಿದೆ. ಎರಡು ಪ್ಲಾಸ್ಮಾ ದಾನಗಳ ನಡುವಿನ ಅಂತರವು ಕನಿಷ್ಠ 15 ದಿನಗಳಿರಬೇಕು ಎಂದು ಅವರು ತಿಳಿಸಿದ್ದಾರೆ.

ಜುಲೈನಲ್ಲಿ, ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವಾಸ್ಕುಲರ್ ಸೈನ್ಸಸ್‌ನ ಹಿರಿಯ ಹೃದ್ರೋಗ ತಜ್ಞ ಡಾ.ನಟೇಶ್ ಬಿ ಎಚ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತು. ಆದರೆ ವೇಗವಾಗಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಹಾಗಾಗಿ ಅವರನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಯಿತು. ಅವರಿಗೆ ವೆಂಟಿಲೇಟರ್ ಮತ್ತು ರೆಮ್ಡೆಸಿವಿರ್ ಔಷಧಿಯನ್ನು ನೀಡಲಾಗಿದ್ದರೂ, ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿತು. ನಂತರ ಪ್ಲಾಸ್ಮಾ ಚಿಕಿತ್ಸೆಯನ್ನು ಪರಿಗಣಿಸಲಾಯಿತು. ಜುಲೈ ಅಂತ್ಯದಲ್ಲಿ, ಕುನಾಲ್ ಮತ್ತೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದರು. ಅದನ್ನು ಡಾ.ನಾಟೇಶ್ ಅವರಿಗೆ ನೀಡಲಾಯಿತು.

ಅವರು ಮೂರು ದಿನಗಳಲ್ಲಿ ಚೇತರಿಸಿಕೊಂಡರು. ಐಸಿಯುನಲ್ಲಿ ಐದು ದಿನಗಳನ್ನು ಕಳೆದ ನಂತರ ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಯಿತು.

‘ನನ್ನ ಪ್ಲಾಸ್ಮಾವನ್ನು ಯಾರಿಗೆ ನೀಡಲಾಗಿದೆ ಎಂಬುದರ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ವೈದ್ಯರು ನನ್ನೊಂದಿಗೆ ವೀಡಿಯೊ-ಕಾನ್ಫರೆನ್ಸ್ ಮೂಲಕ ಸಂಪರ್ಕ ಮಾಡಿ ನನಗೆ ಧನ್ಯವಾದಗಳನ್ನು ತಿಳಿಸಿದರು. ನನ್ನ ಪ್ಲಾಸ್ಮಾ ನಾಲ್ಕುಕ್ಕೂ ಹೆಚ್ಚು ಜೀವಗಳನ್ನು ಉಳಿಸಲು ಸಹಾಯ ಮಾಡಿದೆ ಎಂದು ತಿಳಿಸಲಾಯಿತು’ ಎಂದು ಅವರು ಹೇಳಿದರು.

“ನಿರ್ಣಾಯಕ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆಯು ಮುಖ್ಯವಾಗಿದೆ. ರೋಗ ನಿಯಂತ್ರಿಸಲು ನಮಗೆ ಹೆಚ್ಚಿನ ದಾನಿಗಳು ಬೇಕು” ಡಾ. ನಟೇಶ್ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...