Homeಮುಖಪುಟಸಮನ್ಸ್ ಚರ್ಚೆ ನಡುವೆ 'ಸಹಯೋಗ್' ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ ಸಮನ್ಸ್ ಜಾರಿ ಮಾಡಿರುವುದು ಪ್ರಸ್ತುತ ದೊಡ್ಡ ಮಟ್ಟದಲ್ಲಿ ಚರ್ಚೆಯಲ್ಲಿದೆ.

ಫೆಬ್ರವರಿ 5, 2026ರಂದು ವಿಚಾರಣೆಗೆ ಹಾಜರಾಗುವಂತೆ ಕುನಾಲ್ ಕಾಮ್ರಾ ಅವರಿಗೆ ಸೂಚಿಸಲಾಗಿತ್ತು. ಹಾಗಾಗಿ, ಕಾಮ್ರಾ ಅವರು ವಿಚಾರಣೆಗೆ ಹಾಜರಾಗಲು ಮುಂಬೈಗೆ ಬಂದಿದ್ದರು. ಆದರೆ, ಸಮಿತಿಯೇ ವಿಚಾರಣೆಯನ್ನು ಮುಂದೂಡಿದೆ ಎನ್ನಲಾಗಿದೆ.

ಮಾಧ್ಯಮಗಳಲ್ಲಿ ಕಾಮ್ರಾ ಅವರೇ ಸಮಯ ಕೇಳಿದ್ದಾರೆ ಎಂದು ಸಮಿತಿಯವರು ಹೇಳಿರುವುದಾಗಿ ವರದಿಯಾಗಿದೆ. ಇದನ್ನು ಕಾಮ್ರಾ ತಳ್ಳಿ ಹಾಕಿದ್ದು, ಸಮಿತಿಯೇ ವಿಚಾರಣೆಯನ್ನು ಫೆಬ್ರವರಿ 17, 2026ಕ್ಕೆ ಮುಂದೂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ಪ್ರಕರಣ?

ಈ ಪ್ರಕರಣವು 2025ರ ಆರಂಭದಲ್ಲಿ ಕಾಮ್ರಾ ಅವರು ಮಾಡಿದ ‘ನಯಾ ಭಾರತ್’ ಎಂಬ ಸ್ಟ್ಯಾಂಡ್-ಅಪ್ ಕಾಮಿಡಿ ಶೋಗೆ ಸಂಬಂಧಿಸಿದೆ. ಈ ಶೋನಲ್ಲಿ ಏಕನಾಥ್ ಶಿಂದೆ ಅವರನ್ನು ಕಾಮ್ರಾ “ದ್ರೋಹಿ” (Traitor) ಎಂದು ಕರೆದಿದ್ದರು ಮತ್ತು ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಶಿವಸೇನೆಯಲ್ಲಿ ಬಂಡಾಯವೆದ್ದು ಸರ್ಕಾರ ರಚಿಸಿದ್ದನ್ನು ಟೀಕಿಸುವ ಭರದಲ್ಲಿ ಕಾಮ್ರಾ ಈ ಪದ ಬಳಸಿದ್ದರು. ಇದು ಮುಖ್ಯಮಂತ್ರಿಗಳ ಘನತೆಗೆ ಧಕ್ಕೆ ತಂದಿದೆ ಎಂದು ಶಿವಸೇನೆ (ಶಿಂದೆ ಬಣ) ಕಾರ್ಯಕರ್ತರು ದೂರು ನೀಡಿದ್ದರು.

ದೂರು ಆಧರಿಸಿ ಮುಂಬೈನ ಖಾರ್ ಠಾಣೆ ಪೊಲೀಸರು ಕಾಮ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದೇ ಕಾರಣಕ್ಕೆ ಮಹಾರಾಷ್ಟ್ರ ವಿಧಾನಸಭೆಯ ಹಕ್ಕುಚ್ಯುತಿ ಸಮಿತಿ ಕೂಡ ಕಾಮ್ರಾ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಪೊಲೀಸರು ಈ ಹಿಂದೆ ಮೂರು ಬಾರಿ ಕಾಮ್ರಾಗೆ ಸಮನ್ಸ್ ನೀಡಿದ್ದರು.

ತಾನೊಬ್ಬ ಹಾಸ್ಯ ಕಲಾವಿದನಾಗಿ ವಿಡಂಬನೆ ಮಾಡಿದ್ದೇನೆ ಹೊರತು, ಅದು ಹಕ್ಕುಚ್ಯುತಿಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಕಾಮ್ರಾ ವಾದಿಸಿದ್ದಾರೆ. ಎಫ್‌ಐಆರ್ ವಿಚಾರವಾಗಿ ಬಾಂಬೆ ಹೈಕೋರ್ಟ್ ಈಗಾಗಲೇ ಕಾಮ್ರಾಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.

ಸಹಯೋಗ್ ವಿರುದ್ದ ಮತ್ತೆ ಕೋರ್ಟ್ ಮೆಟ್ಟಿಲೇರಿದ ಕಾಮ್ರಾ

ಇದೀಗ, ಕೇಂದ್ರ ಸರ್ಕಾರದ ‘ಸಹಯೋಗ್’ ಪೋರ್ಟಲ್ ಮತ್ತು 2025ರ ಐಟಿ (ಮಾಹಿತಿ ತಂತ್ರಜ್ಞಾನ) ನಿಯಮಗಳ ತಿದ್ದುಪಡಿಯನ್ನು ಪ್ರಶ್ನಿಸಿ ಕಾಮ್ರಾ ಬಾಂಬೆ ಹೈಕೋರ್ಟ್‌ಗೆ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ.

ಪೋರ್ಟಲ್ ಯಾವುದೇ ಮುನ್ಸೂಚನೆ ಇಲ್ಲದೆ ಸಾಮಾಜಿಕ ಜಾಲತಾಣಗಳ ವಿಷಯಗಳನ್ನು (Content) ತೆಗೆದುಹಾಕಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ, ಇದು ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತದೆ ಎಂದು ಅವರು ವಾದಿಸಿದ್ದಾರೆ.

ಈ ಹಿಂದೆ ಸರ್ಕಾರವು ತರಲು ಉದ್ದೇಶಿಸಿದ್ದ ‘ಫ್ಯಾಕ್ಟ್ ಚೆಕ್ ಯುನಿಟ್’ ವಿರುದ್ಧ ಕಾಮ್ರಾ ಹೂಡಿದ್ದ ದಾವೆಯಲ್ಲಿ ಹೈಕೋರ್ಟ್ ಆ ನಿಯಮವನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡು ಈಗಿನ ಪೋರ್ಟಲ್ ವಿರುದ್ಧವೂ ಅವರು ಹೋರಾಟ ನಡೆಸುತ್ತಿದ್ದಾರೆ.

ಓಲಾ ಎಲೆಕ್ಟ್ರಿಕ್ ಜೊತೆಗಿನ ವಿವಾದ

ಕಳೆದ ವರ್ಷದಿಂದ ಓಲಾ ಕಂಪನಿಯ ಸಿಇಒ ಭವಿಶ್ ಅಗರ್ವಾಲ್ ಮತ್ತು ಕುನಾಲ್ ಕಾಮ್ರಾ ನಡುವೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಸಂಘರ್ಷ ನಡೆಯುತ್ತಿದೆ.

ಓಲಾ ಸ್ಕೂಟರ್‌ಗಳ ಸರ್ವಿಸ್ ಸಮಸ್ಯೆಗಳ ಬಗ್ಗೆ ಕಾಮ್ರಾ ಸರಣಿ ಪೋಸ್ಟ್‌ಗಳನ್ನು ಹಾಕಿದ್ದರು. ಇದು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು (ಸಿಸಿಪಿಎ) ಓಲಾ ಕಂಪನಿಗೆ ನೋಟಿಸ್ ನೀಡಲು ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...