Homeಮುಖಪುಟಠಾಣೆಗೆ ಹಾಜರಾಗಲು ಸಮಯಾವಕಾಶ ಕೋರಿದ ಕುನಾಲ್ ಕಮ್ರಾ; ಮನವಿ ತಿರಸ್ಕರಿಸಿದ ಮುಂಬೈ ಪೊಲೀಸರು

ಠಾಣೆಗೆ ಹಾಜರಾಗಲು ಸಮಯಾವಕಾಶ ಕೋರಿದ ಕುನಾಲ್ ಕಮ್ರಾ; ಮನವಿ ತಿರಸ್ಕರಿಸಿದ ಮುಂಬೈ ಪೊಲೀಸರು

- Advertisement -
- Advertisement -

ಇತ್ತೀಚೆಗೆ ವಿವಾದಕ್ಕೆ ಸಿಲುಕಿರುವ ಸ್ಟಾಂಡ್‌ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರು ಅಧಿಕಾರಿಗಳ ಮುಂದೆ ಹಾಜರಾಗಲು ಒಂದು ವಾರದ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ, ಅವರ ಮನವಿಯನ್ನು ಮುಂಬೈ ಪೊಲೀಸರು ತಿರಸ್ಕರಿಸಿದ್ದಾರೆ.

ಕಮ್ರಾ ಅವರ ವಕೀಲರು ಮುಂಬೈನ ಖಾರ್ ಪೊಲೀಸ್ ಠಾಣೆಗೆ ವೈಯಕ್ತಿಕವಾಗಿ ಮೇಲ್ಮನವಿ ಹಾಗೂ ಉತ್ತರ ಸಲ್ಲಿಸಿದರು. ಆದರೂ, ಪೊಲೀಸರು ಅವರ ವಿನಂತಿಯನ್ನು ತಿರಸ್ಕರಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 35 ರ ಅಡಿಯಲ್ಲಿ ಖಾರ್ ಪೊಲೀಸರು ಇಂದು ಕುನಾಲ್ ಕಮ್ರಾ ಅವರಿಗೆ ಎರಡನೇ ಸಮನ್ಸ್ ಜಾರಿ ಮಾಡಲಿದ್ದಾರೆ.

ಇದಕ್ಕೂ ಮೊದಲು, ಮುಂಬೈ ಪೊಲೀಸರು ಮಂಗಳವಾರ ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಸ್ಟ್ಯಾಂಡ್-ಅಪ್ ಕಲಾವಿದರಿಗೆ ಸಮನ್ಸ್ ಕಳುಹಿಸಿದ್ದರು.

ಸ್ಟ್ಯಾಂಡ್-ಅಪ್ ಹಾಸ್ಯ ಕಾರ್ಯಕ್ರಮದ ಸಂದರ್ಭದಲ್ಲಿ ಕಮ್ರಾ ಅವರ ಹೇಳಿಕೆಗಳಿಗಾಗಿ ಎಂಐಡಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಿದರು. ನಂತರ. ಅದನ್ನು ಹೆಚ್ಚಿನ ತನಿಖೆಗಾಗಿ ಖಾರ್ ಪೊಲೀಸರಿಗೆ ವರ್ಗಾಯಿಸಲಾಯಿತು.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿರಿಸಿಕೊಂಡು ಕಮ್ರಾ ತಮ್ಮ ವಿವಾದಾತ್ಮಕ ‘ಗದ್ದರ್’ (ದೇಶದ್ರೋಹಿ) ಜೋಕ್‌ನೊಂದಿಗೆ ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದರು.

ಸ್ಟ್ಯಾಂಡ್-ಅಪ್ ಪ್ರದರ್ಶನದಲ್ಲಿ ಕಮ್ರಾ ಅವರ ಹೇಳಿಕೆಯನ್ನು ಹಲವಾರು ರಾಜಕೀಯ ನಾಯಕರು ಖಂಡಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಆದರೂ, ಮಂಗಳವಾರ ಕಮ್ರಾ ಅವರು ಮುಂಬೈನ ದಿ ಹ್ಯಾಬಿಟ್ಯಾಟ್ ಕಾಮಿಡಿ ಕ್ಲಬ್ ಅನ್ನು ಧ್ವಂಸ ಮಾಡಿದ್ದಕ್ಕಾಗಿ ಶಿವಸೇನಾ ಕಾರ್ಯಕರ್ತರನ್ನು ಅಪಹಾಸ್ಯ ಮಾಡಲು ಹೊಸ ವೀಡಿಯೊವನ್ನು ಹಂಚಿಕೊಂಡರು, ಅಲ್ಲಿ ಅವರು ಈ ಹಿಂದೆ ಪ್ರದರ್ಶನ ನೀಡಿದ್ದರು.

ಉಪಮುಖ್ಯಮಂತ್ರಿ ಅಜಿತ್ ಪವಾರ್ ಮಾತನಾಡಿ, “ನಮ್ಮ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸರ್ಕಾರದ ಪರವಾಗಿ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ನಮ್ಮ ಮುಖ್ಯಮಂತ್ರಿ ಹೇಳಿದ್ದಾರೆ” ಎಂದರು.

ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರು ಏಕನಾಥ್ ಶಿಂಧೆ ವಿರುದ್ಧ ಮಾಡಿದ ಆಪಾದಿತ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, “ನಾವು ಹಾಸ್ಯ ಮತ್ತು ವಿಡಂಬನೆಯನ್ನು ಪ್ರಶಂಸಿಸುತ್ತೇವೆ. ನಾವು ರಾಜಕೀಯ ವಿಡಂಬನೆಯನ್ನು ಸ್ವೀಕರಿಸುತ್ತೇವೆ. ಆದರೆ, ಅದು ದಬ್ಬಾಳಿಕೆಗೆ ಕಾರಣವಾದರೆ ನಾವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸ್ವೀಕರಿಸುವುದಿಲ್ಲ” ಎಂದು ಹೇಳಿದರು.

“ಈ ಕಲಾವಿದ ಪ್ರಧಾನಿ, ಮುಖ್ಯ ನ್ಯಾಯಾಧೀಶರ ವಿರುದ್ಧ ಹೇಳಿಕೆಗಳನ್ನು ನೀಡುತ್ತಾರೆ; ಅವರು ವಿವಾದ ಸೃಷ್ಟಿಸುವ ಮೂಲಕ ಖ್ಯಾತಿ ಗಳಿಸಲು ಬಯಸುತ್ತಾರೆ. ಅವರು ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ಕಳಪೆ ಗುಣಮಟ್ಟದ ಹಾಸ್ಯ ಪ್ರದರ್ಶಿಸಿದರು” ಎಂದು ಮುಖ್ಯಮಂತ್ರಿ ಹೇಳಿದರು.

ಸ್ಕ್ರ್ಯಾಪಿಂಗ್ ನೀತಿಯಿಂದ ವಾಹನ ಬಿಡಿಭಾಗಗಳ ಬೆಲೆ ಶೇ.30 ರಷ್ಟು ಕಡಿಮೆಯಾಗುತ್ತದೆ: ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...