Homeಮುಖಪುಟಕುನಾಲ್ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಬ್ಯಾಂಕರ್‌ಗೆ ಸಮನ್ಸ್‌ ನೀಡಿದ ಮುಂಬೈ ಪೊಲೀಸರು!

ಕುನಾಲ್ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಬ್ಯಾಂಕರ್‌ಗೆ ಸಮನ್ಸ್‌ ನೀಡಿದ ಮುಂಬೈ ಪೊಲೀಸರು!

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವಿರುದ್ಧ ಹೇಳಿಕೆ ನೀಡಿದ್ದ ಹಾಸ್ಯನಟ ಕುನಾಲ್ ಕಾಮ್ರಾ ಅವರ ವಿವಾದಾತ್ಮಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನವಿ ಮುಂಬೈ ಮೂಲದ ಬ್ಯಾಂಕರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರನ್ನು ಸಾಕ್ಷಿಯಾಗಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಇದಕ್ಕೆ ಕುನಾಲ್ ಅವರು ಪ್ರತಿಕ್ರಿಯಿಸಿ ತನ್ನಿಂದಾದ ತೊಂದರೆಗೆ ಬ್ಯಾಂಕರ್ ಬಳಿ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಅದಾಗ್ಯೂ, ನಂತರ ಪೊಲೀಸರು ಬ್ಯಾಂಕರ್‌ಗೆ ಕರೆ ಮಾಡಿ ಅವರ ಉಪಸ್ಥಿತಿ ತಕ್ಷಣವೆ ಅಗತ್ಯವಿಲ್ಲ ಎಂದು ಹೇಳಿದ್ದಾಗಿ ವರದಿಯಾಗಿದೆ. ಪೊಲೀಸರ ಕಾರಣಕ್ಕೆ ಬ್ಯಾಂಕರ್ ತನ್ನ ಪ್ರವಾಸವನ್ನು ರದ್ದು ಮಾಡಿದ್ದಾರೆ ಎಂಬ ಸುದ್ದಿಗೆ ಕುನಾಲ್‌ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ್ದು, ಅವರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದ್ದು, “ಭಾರತದಲ್ಲಿ ನೀವು ಎಲ್ಲಿ ಬೇಕಾದರೂ ನಿಮ್ಮ ಮುಂದಿನ ಪ್ರವಾಸವನ್ನು ನಿಗದಿಪಡಿಸಿ” ಎಂದು ಅವರು ಅದರ ಖರ್ಚು ತಾನು ಭರಿಸುವುದಾಗಿ ಪ್ರಸ್ತಾಪಿಸಿದ್ದಾರೆ.

ಪೊಲೀಸ್ ಸಮನ್ಸ್ ಕಾರಣಕ್ಕೆ ಬ್ಯಾಂಕರ್ ತಮ್ಮ ಪ್ರವಾಸವನ್ನು ಕಡಿತಗೊಳಿಸಬೇಕಾಯಿತು ಎಂದು ಹೇಳುವ ಮಾಧ್ಯಮ ವರದಿಯನ್ನು ಕುನಾಲ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಕುನಾಲ್ ಕಮ್ರಾ ಅವರ ಕಾರ್ಯಕ್ರಮಕ್ಕೆ ಹಾಜರಾದ ಪ್ರೇಕ್ಷಕರರಿಗೆ ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಮನ್ಸ್ ನೀಡಲಾಗಿದೆ ಎಂಬ ವರದಿಗಳನ್ನು ಪೊಲೀಸರು ಮಂಗಳವಾರದಂದು ನಿರಾಕರಿಸಿದ್ದರು.

ಮಾರ್ಚ್ 29 ರಂದು ಬುಕ್‌ಮೈಶೋ ಅಪ್ಲಿಕೇಶನ್ ಮೂಲಕ ಕುನಾಲ್ ಅವರ ಕಾರ್ಯಕ್ರಮಕ್ಕೆ ಟಿಕೆಟ್ ಬುಕ್ ಮಾಡಿದ್ದ ಬ್ಯಾಂಕರ್‌ಗೆ ಅವರ ಮೊಬೈಲ್ ಫೋನ್‌ನಲ್ಲಿ ಸಮನ್ಸ್ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ಮಾರ್ಚ್ 28 ರಂದು ನೀಡಿದ ದೂರಿನ ಮೇರೆಗೆ ಖಾರ್ ಪೊಲೀಸ್ ಠಾಣೆಯಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಕ್ಕಾಗಿ ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಲು ಬಯಸಿದ್ದರಿಂದ ಬ್ಯಾಂಕರ್‌ಗೆ ಹಾಜರಿರುವಂತೆ ತಿಳಿಸಲಾಗಿತ್ತು ಎಂದು ಅಧಿಕಾರಿ ಹೇಳಿದ್ದಾರೆ.

ಅವರಿಗೆ ನೋಟಿಸ್ ಕಳುಹಿಸುವ ಮೊದಲು, ತನಿಖಾಧಿಕಾರಿ ಬ್ಯಾಂಕರ್‌ಗೆ ಕರೆ ಮಾಡಿ ಖಾರ್ ಪೊಲೀಸ್ ಠಾಣೆಗೆ ಭೇಟಿ ನೀಡುವಂತೆ ಕೇಳಿಕೊಂಡಿದ್ದರು ಎಂದು ಅಧಿಕಾರಿ ಹೇಳಿದ್ದರು ಎಂದು ವರದಿಯಾಗಿದೆ. ಆದರೆ ನಂತರ, ಪ್ರಕರಣದಲ್ಲಿನ ಕೆಲವು ಬೆಳವಣಿಗೆಗಳ ನಂತರ, ಪೊಲೀಸರು ಮತ್ತೆ ಬ್ಯಾಂಕರ್‌ಗೆ ಕರೆ ಮಾಡಿ ಅವರ ತಕ್ಷಣದ ಹಾಜರಾತಿ ಅಗತ್ಯವಿಲ್ಲ ಎಂದು ಹೇಳಿದ್ದರು. ಅದಾಗ್ಯೂ, ಅವರ ಹೇಳಿಕೆ ಅಗತ್ಯವಿದ್ದಾಗ ಅವರನ್ನು ಕರೆಯಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ, ಪೊಲೀಸ್ ಸಮನ್ಸ್‌ನಿಂದಾಗಿ ಬ್ಯಾಂಕರ್ ತನ್ನ ಪ್ರವಾಸವನ್ನು ರದ್ದುಗೊಳಿಸಬೇಕಾಯಿತು ಎಂಬ ಮಾಧ್ಯಮ ವರದಿಗಳಿಗೆ ಕುನಾಲ್ ಪ್ರತಿಕ್ರಿಯಿಸಿದ್ದು, “ನನ್ನ ಕಾರ್ಯಕ್ರಮಕ್ಕೆ ಹಾಜರಾದ ಕಾರಣಕ್ಕೆ ನಿಮಗೆ ಉಂಟಾದ ಅನಾನುಕೂಲತೆಗೆ ನಾನು ತುಂಬಾ ವಿಷಾದಿಸುತ್ತೇನೆ. ದಯವಿಟ್ಟು ನನಗೆ ಇಮೇಲ್ ಮಾಡಿ. ನೀವು ಭಾರತದಲ್ಲಿ ಎಲ್ಲಿ ಬೇಕಾದರೂ ನಿಮ್ಮ ಮುಂದಿನ ರಜೆಯನ್ನು ನಿಗದಿಪಡಿಸಬಹುದು” ಎಂದು ಕಮ್ರಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ತನ್ನ ಪ್ರವಾಸ ಮುಗಿಸಿ ಏಪ್ರಿಲ್ 6 ರಂದು ಹಿಂತಿರುಗಬೇಕಿದ್ದ ವ್ಯಕ್ತಿ ಪೊಲೀಸರ ಕಾರಣಕ್ಕೆ ಅದನ್ನು ಅರ್ಧದಲ್ಲೆ ಮೊಟಕುಗೊಳಿಸಿ ಸೋಮವಾರ ಮುಂಬೈಗೆ ಹಿಂತಿರುಗಬೇಕಾಯಿತು ಎಂದು ವರದಿಗಳು ಹೇಳಿವೆ.

ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕುಬಾಲ್ ಪ್ರದರ್ಶಿಸಿದ ವಿಡಂಬನಾತ್ಮಕ ಹಾಡಿನಿಂದಾಗಿ ಪ್ರಕರಣ ಭುಗಿಲೆದ್ದಿತ್ತು. ಈ ಹಾಡಿನಲ್ಲಿ ಕುನಾಲ್ ಅವರು ಉಪ ಮುಖ್ಯಮಂತ್ರಿ ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ ಅವರನ್ನು ಗುರಿ ಮಾಡಿ ದೇಶದ್ರೋಹಿ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ಶಿವಸೇನೆ ಕಾರ್ಯಕ್ರಮವನ್ನು ರೆಕಾರ್ಡ್ ಮಾಡಿದ ಸ್ಟುಡಿಯೋವನ್ನು ಧ್ವಂಸಗೊಳಿಸಿದ್ದರು. ಮಾರ್ಚ್ 28 ರಂದು ಮದ್ರಾಸ್ ಹೈಕೋರ್ಟ್ ಕುನಾಲ್‌ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...