Homeಮುಖಪುಟಕರ್ನೂಲ್ ಬಸ್ ದುರಂತ: ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ 20 ಜನ

ಕರ್ನೂಲ್ ಬಸ್ ದುರಂತ: ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ 20 ಜನ

- Advertisement -
- Advertisement -

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿ 20 ಜನರು ಸಾವನ್ನಪ್ಪಿದ ಭೀಕರ ರಸ್ತೆ ಅಪಘಾತಕ್ಕೆ ಚಾಲಕನೇ ನಿರ್ಲಕ್ಷ್ಯವೇ ಕಾರಣ ಎಂದು ಮೋಲ್ನೋಟಕ್ಕೆ ಕಂಡುಬಂದಿದೆ.

ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ವಿ ಕಾವೇರಿ ಟ್ರಾವೆಲ್ಸ್‌ಗೆ ಸೇರಿದ 44 ಪ್ರಯಾಣಿಕರಿದ್ದ ಬಸ್, ತೆಲಂಗಾಣದ ಹೈದರಾಬಾದ್‌ನಿಂದ ಕರ್ನಾಟಕದ ಬೆಂಗಳೂರಿಗೆ ಹೋಗುತ್ತಿದ್ದಾಗ ಕರ್ನೂಲ್ ನಗರದ ಹೊರವಲಯದ ಬಳಿ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್) 44 ರಲ್ಲಿ ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಮಲ್ಟಿ ಆಕ್ಸಲ್ ಸ್ಲೀಪರ್ ಎಸಿ ವೋಲ್ವೋ ಬಸ್ 42 ಆಸನ ಸಾಮರ್ಥ್ಯವನ್ನು ಹೊಂದಿತ್ತು ಎಂದು ವರದಿಯಾಗಿದೆ.

ಇತ್ತೀಚಿನ ಬೆಳವಣಿಗೆಯಲ್ಲಿ, ಚಾಲಕನ ವಿರುದ್ಧ ಪೊಲೀಸರು ನಿರ್ಲಕ್ಷ್ಯದ ಪ್ರಕರಣ ದಾಖಲಿಸಿದ್ದಾರೆ. ಬಸ್‌ನ ಇಬ್ಬರು ಚಾಲಕರ ವಿರುದ್ಧ ಅತಿವೇಗದ ಪ್ರಕರಣ ದಾಖಲಿಸಲಾಗಿದೆ, ಅವರಲ್ಲಿ ಒಬ್ಬರು ತಮ್ಮ ಹೇಳಿಕೆ ಬದಲಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಪ್ರಮುಖ ಅಂಶಗಳು

ಪೊಲೀಸರು ಮತ್ತು ಬದುಕುಳಿದ ಪ್ರಯಾಣಿಕರ ಪ್ರಕಾರ, ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಬೆಂಕಿ ಕಾಣಿಸಿಕೊಂಡಿತು. “ದ್ವಿಚಕ್ರ ವಾಹನವು ಬಸ್ಸಿನ ಕೆಳಗೆ ಸಿಲುಕಿಕೊಂಡು ಇಂಧನ ಟ್ಯಾಂಕ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ತಕ್ಷಣ ಸ್ಫೋಟಗೊಂಡು ವಾಹನದಾದ್ಯಂತ ಬೆಂಕಿ ವೇಗವಾಗಿ ಹರಡಿತು” ಎಂದು ಪೊಲೀಸರು ಹೇಳಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಕಲ್ಲೂರ್ ಮಂಡಲದ ಚಿನ್ನೇಕೂರ್ ಗ್ರಾಮದ ಬಳಿ ಸಂಭವಿಸಿದ ಬಸ್ ಬೆಂಕಿಯಲ್ಲಿ ಬೈಕ್ ಸವಾರ ಸೇರಿದಂತೆ 20 ಜನರು ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಘಟನೆಯ ನಡುವೆ ಇನ್ನೂ 12 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆ ಬೆಳಗಿನ ಜಾವ ನಡೆದಾಗ, ಹೆಚ್ಚಿನ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು. ಕೆಲವು ಪ್ರಯಾಣಿಕರು ಹಠಾತ್ ಬೆಂಕಿಯಿಂದ ಎಚ್ಚರಗೊಂಡು ಕಿಟಕಿಗಳನ್ನು ಮುರಿದು ಹೊರಗೆ ಹಾರುವಲ್ಲಿ ಯಶಸ್ವಿಯಾದರು, ಇತರರು ಒಳಗೆ ಸಿಲುಕಿಕೊಂಡರು ಮತ್ತು ಕೆಲವೇ ನಿಮಿಷಗಳಲ್ಲಿ ಇಡೀ ಬಸ್ ಅನ್ನು ಆವರಿಸಿದ್ದರಿಂದ ಗುರುತಿಸಲಾಗದಷ್ಟು ಸುಟ್ಟುಹೋದರು.

ಬದುಕುಳಿದವರಲ್ಲಿ ಒಬ್ಬರಾದ ಎನ್ ರಮೇಶ್ ಸಲ್ಲಿಸಿದ ದೂರಿನ ಆಧಾರದ ಮೇಲೆ ಬಸ್‌ನ ಇಬ್ಬರು ಚಾಲಕರ ವಿರುದ್ಧ ನಿರ್ಲಕ್ಷ್ಯ ಮತ್ತು ಅತಿವೇಗದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಾಲಕರು ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆಗೆ ಕಾರಣ ಎಂದು ಆರೋಪಿಸಿದ್ದಾರೆ. ವಾಹನವು ಅತಿವೇಗದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದು ಸುಮಾರು 200 ಮೀಟರ್‌ಗಳಷ್ಟು ಎಳೆದುಕೊಂಡು ಹೋಗಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ರಮೇಶ್‌ಗೆ ತಿಳಿಸಿದ್ದಾರೆ.

ಓರ್ವ ಚಾಲಕ ಪೊಲೀಸ್ ವಶಕ್ಕೆ; ಮತ್ತೊಬ್ಬ ಪರಾರಿ

ಹಲವಾರು ಪ್ರಯಾಣಿಕರನ್ನು ರಕ್ಷಿಸಿದ್ದಕ್ಕಾಗಿ ಕೆಲವರು ವೀರ ಎಂದು ಬಿಂಬಿಸಲ್ಪಟ್ಟ ಇಬ್ಬರು ಬಸ್ ಚಾಲಕರಲ್ಲಿ ಒಬ್ಬರು ತಮ್ಮ ಹೇಳಿಕೆಗಳನ್ನು ಬದಲಾಯಿಸುತ್ತಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಘಟನೆಯ ಸಮಯದಲ್ಲಿ ಬಸ್‌ನ ಎರಡನೇ ಚಾಲಕ ಶಿವ ನಾರಾಯಣ (30) ಸ್ಟೇರಿಂಗ್ ಹಿಂದೆ ಇರಲಿಲ್ಲ. ಆದರೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಘಟನೆಯ ನಂತರ, ಬಸ್ ಚಲಾಯಿಸುತ್ತಿದ್ದ ಲಕ್ಷ್ಮಯ್ಯ ಎಂಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಶಿವ ನಾರಾಯಣ ಈ ಹಿಂದೆ ಭಾರೀ ಮಳೆಯ ನಡುವೆ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಇದರಿಂದಾಗಿ ರಸ್ತೆಯ ಗೋಚರತೆ ಕಡಿಮೆಯಾಗಿತ್ತು ಎಂದು ಹೇಳಿದ್ದರು. ಆದರೆ, ನಂತರ ಹೇಳಿಕೆಯನ್ನು ಬದಲಾಯಿಸಿ ಮೋಟಾರ್‌ ಬೈಕ್ ಸವಾರ ಹಿಂದಿನ ಬಂದು ಅಪಘಾತ ಮಾಡಿದ್ದರಿಂದ ರಸ್ತೆಯಲ್ಲಿ ಬಿದ್ದಿದ್ದರು, ಚಾಲಕ ಲಕ್ಷ್ಮಯ್ಯ ಅರಿವಿಲ್ಲದೆ ಅವರ ಮೇಲೆ ಬಸ್ ಚಲಾಯಿಸಿದ್ದರಿಂದ ಬೆಂಕಿ ಹಚ್ಚಿಕೊಂಡಿದೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಅಪಾಯಕಾರಿ ಚಾಲನೆ ಮತ್ತು ಅನಧಿಕೃತ ಪಾರ್ಕಿಂಗ್ ಸೇರಿದಂತೆ ಸಂಚಾರ ಉಲ್ಲಂಘನೆ ಆರೋಪದ ಮೇಲೆ ತೆಲಂಗಾಣ ಪೊಲೀಸರು ಐಷಾರಾಮಿ ಬಸ್‌ಗೆ ಹಲವಾರು ಚಲನ್‌ಗಳನ್ನು ವಿಧಿಸಿದ್ದಾರೆ ಎಂದು ಬೆಳಕಿಗೆ ಬಂದಿದೆ. ವಾಹನವು ಅಖಿಲ ಭಾರತ ಪರವಾನಗಿ ಮತ್ತು ಮಾನ್ಯ ಫಿಟ್‌ನೆಸ್ ಪ್ರಮಾಣಪತ್ರವನ್ನು ಹೊಂದಿತ್ತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಕಿಗಾಹುತಿ : 20ಕ್ಕಿಂತ ಹೆಚ್ಚು ಜನರು ಸಜೀವ ದಹನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...