Homeಕರ್ನಾಟಕದೇವನೂರರ 'ಕುಸುಮಬಾಲೆ ವಾಚಿಕಾಭಿನಯ': ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

ದೇವನೂರರ ‘ಕುಸುಮಬಾಲೆ ವಾಚಿಕಾಭಿನಯ’: ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

'ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ 'ಕುಸುಮಬಾಲೆ' ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. "ಸಂಬಂಜ ಅನ್ನೋದು ದೊಡ್ಡದು ಕಣ" ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರು ಮಹಾದೇವರವರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃತಿ ‘ಕುಸುಮಬಾಲೆ’ ರಂಗಕೃತಿಯ ವಾಚಿಕಾಭಿನಯವು ಇಂದು ಸಂಜೆ 6.30ರಿಂದ ರಂಗಾಯಣದ ವೆಬ್‌ಸೈಟ್ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ.

ಇಂದು ಮಧ್ಯಾಹ್ನ ಮೈಸೂರಿನ ರಂಗಾಯಣ ಆವರಣದಲ್ಲಿ ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.  ರಂಗಾಯಣದ ವಿನ್ಯಾಸ ಕಲಾವಿದರಾದ ಎಚ್.ಕೆ.ದ್ವಾರಕಾನಾಥ್, ಕುಸುಮಬಾಲೆ ಕುರಿತಂತೆ ರಚಿಸಿದ್ದ ಚಿತ್ರಕಲೆಯನ್ನು ರಂಗಕರ್ಮಿಗಳಾದ ಬಿ.ವಿ.ರಾಜಾರಾಮ್ ಬಿಡುಗಡೆ ಮಾಡಿದರು.

‘ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಯಾವುದೇ ರಂಗಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಹಿಂದೆಯೇ ರಂಗಾಯಣದ ಕಲಾವಿದರು ಅಭಿಯಿಸಿದ್ದ, ಕನ್ನಡದ ಪ್ರಖ್ಯಾತ ಕಾದಂಬರಿಗಳಲ್ಲಿ ಒಂದಾದ ಕುಸುಮಬಾಲೆಯ ವಾಚಿಕಾಭಿನಯವನ್ನು ಪ್ರಸಾರ ಮಾಡಲು ಮುಂದಾಗಿದ್ದೇವೆ’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾನುಗೌರಿ.ಕಾಂಗೆ ತಿಳಿಸಿದರು.

‘ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ ‘ಕುಸುಮಬಾಲೆ’ ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. “ಸಂಬಂಜ ಅನ್ನೋದು ದೊಡ್ಡದು ಕಣ” ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ. ಹಾಗಾಗಿ ಈ ಕೃತಿಯು ವಿಮರ್ಶಾತೀತವಾದುದಾಗಿದ್ದು, ಇದರಲ್ಲಿ ಬಳಸಿರುವ ಕ್ಲಿಷ್ಟ ಭಾಷೆಯ ಕಾರಣ ಇದನ್ನು ಅಭಿನಯಿಸುವುದಕ್ಕೋ ಅಥವಾ ವಾಚಿಸುವ ಸಾಹಸಕ್ಕೋ ಯಾರೂ ಕೈ ಹಾಕಿಲ್ಲ. ಆದರೆ ನಾವು ಈ ಕಷ್ಟದ ಕೆಲಸವನ್ನು ಇಷ್ಟ ಪಟ್ಟು ಮಾಡುತ್ತಿದ್ದೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಹಿರೇಹಾಳು ಇಬ್ರಾಹಿಂ ಸಾಬರ ತೋಟದಲ್ಲಿ ಅರಳಿದ ರಂಗಭೂಮಿಯ ಹೂ ಪಿಂಜಾರ ಅಬ್ದುಲ್

ಕುಸುಮಬಾಲೆ-ರಂಗಕೃತಿಯ ವಾಚಿಕಾಭಿನಯ 9 ಎಪಿಸೋಡ್ ಗಳಲ್ಲಿ ಪ್ರತಿದಿನ ಪ್ರಸಾರವಾಗಲಿದ್ದು, ಇದು ರಂಗಾಯಣವು, ಕಲಾಸಕ್ತ ಜನರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪುವುದಕ್ಕೆ ಮಾಡಿರುವ ಮೊದಲ ಪ್ರಯತ್ನವಾಗಿದೆ. ಇದರ ನಂತರ ಕುವೆಂಪು ಅವರ ‘ಕಿಂದರಿಜೋಗಿ’, ಬಿ.ವಿ.ಕಾರಂತರ ರಂಗಗೀತೆಗಳ ಪ್ರಸ್ತುತಿಯಂತಹ ಹಲವು ಕಾರ್ಯಕ್ರಮಗಳನ್ನು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ರಂಗಾಯಣ ನಿರ್ದೇಶಕರು ಹೇಳಿದರು.

1992 ರಲ್ಲಿ ಬಸವಲಿಂಗಯ್ಯನವರು ನಿರ್ದೇಶಿಸಿ, ಕಾರಂತರು ಸಂಗೀತ ಸಂಯೋಜಿಸಿದ್ದ ಈ ನಾಟಕವು ನಾವು ಅಭಿನಯಿಸಿದ ಶ್ರೇಷ್ಟ ನಾಟಕಗಳಲ್ಲಿ ಒಂದು ಎಂದು ಹಿರಿಯ ಕಲಾವಿದರಾದ ಗೀತಾ ಮೊಂಟಡ್ಕ ಹೇಳಿದರು.

ಈ ವಾಚಿಕಾಭಿನಯದಲ್ಲಿ ಹಳೆಯದನ್ನು ನೆನೆಪಿಸಿಕೊಂಡು ಮತ್ತೆ ಈಗ ಪ್ರಸ್ತುತಪಡಿಸುತ್ತಿದ್ದೇವೆ. ನಾಟಕದಲ್ಲಿ ಅಭಿನಯಿಸಿದ್ದ ಕಲಾವಿದರೇ ಬಹುತೇಕ ಇದರಲ್ಲೂ ಇದ್ದೇವೆ. ಸಂಗೀತದಲ್ಲಿ ಬಿ.ವಿ.ಕಾರಂತರ ಶಿಷ್ಯರಾದ ಶ್ರೀನಿವಾಸ ಭಟ್ (ಚೀನಿ) ಇರಲಿದ್ದಾರೆ. ನಾವೇ ಹಾಡುತ್ತಾ ವಾಚಿಕಾಭಿನಯ ಮಾಡಲಿದ್ದೇವೆ ಎಂದು ಗೀತಾ ಮೊಂಟಡ್ಕ ಹೇಳಿದರು.

ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ತುಳು ರಂಗಭೂಮಿಯ ಸಾಕ್ಷಿಪ್ರಜ್ಞೆ ಅರವಿಂದ ಬೋಳಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...