Homeಕರ್ನಾಟಕತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

ತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

- Advertisement -
- Advertisement -

ಕುವೆಂಪು ಜನ್ಮದಿನದ ಅಂಗವಾಗಿ ತುಮಕೂರಿನಲ್ಲಿ ಡಾ.ಮುರುಳೀಧರ್ ನೇತೃತ್ವದಲ್ಲಿ ಆಯೋಜಿಸಿದ್ದ ಸಹಸ್ರ ಸಹಭೋಜನ ಕಾರ್ಯಕ್ರಮ ಎಲ್ಲ ಧರ್ಮದ, ಎಲ್ಲಾ ಜಾತಿಯ ಜನರ ಒಗ್ಗೂಡುವಿಕೆ, ವಿಚಾರ ವಿನಿಮಯ, ಪರಸ್ಪರ ಮಾತುಕತೆಗೆ ಸಹಪಂಕ್ತಿ ಊಟ ಮಾಡಿದ್ದಕ್ಕೆ ಸಾಕ್ಷಿಯಾಯಿತು. ಹಿಂದೂ, ಕ್ರೈಸ್ತ, ಮುಸ್ಲಿಂ ಹೀಗೆ ಎಲ್ಲಾ ಧರ್ಮೀಯರು ವಿಚಾರ ವಿನಿಮಯ ಮಾಡಿಕೊಂಡರು. ಒಂದೂವರೆ ಗಂಟೆ ನಡೆದ ಕಾರ್ಯಕ್ರಮದಲ್ಲಿ ಮುಂದೆಯೂ ಇದೇ ರೀತಿ ಕೂಡಿಬಾಳಬೇಕು ಎಂಬ ಪ್ರತಿಜ್ಞೆಯನ್ನು ಮಾಡಿದರು.

ಕಾರ್ಯಕ್ರಮಕ್ಕೂ ಮೊದಲು ಸಂವಿಧಾನದ ಪ್ರಸ್ತಾವನೆಯನ್ನು ಎಲ್ಲರಿಗೂ ಓದಿಸುವ ಮೂಲಕ ನಾವೆಲ್ಲ ಭಾರತೀಯರು, ಸರ್ವಧರ್ಮ ಸಮನ್ವಯದಿಂದ ಸೌಹಾರ್ದತೆಯಿಂದ ನೆಮ್ಮದಿಯಿಂದ ಪ್ರೀತಿಯಿಂದ ಗೌರವದಿಂದ ಬದುಕಬೇಕು ಎಂದು ಪ್ರತಿಜ್ಞಾ ವಿಧಿ ಬೋದಿಸಲಾಯಿತು. ಹಿರಿಯರಾದ ಕೆ.ದೊರೈರಾಜ್ ಅವರು ನಾವೆಲ್ಲರೂ ಎಂತಹದ್ದೇ ಸಂದರ್ಭ ಬಂದರೂ ಒಟ್ಟಾಗಿ ಹೋಗುತ್ತೇವೆ. ಸಮಾಜವನ್ನು ಒಡೆಯುವ ಶಕ್ತಿಗಳ ಹಿಂದೆ ಹೋಗುವುದಿಲ್ಲ. ಜಾತಿ, ಧರ್ಮಧ ಆಧಾರದ ಮೇಲೆ ತಾರತಮ್ಯ ಮಾಡದೆ ವಿಚ್ಛಿದ್ದಕಾರಿ ಶಕ್ತಿಗಳ ಮಾತಿಗೆ ಕಿವಿಗೊಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.

ಮೊದಲಿಗೆ ಪಾಧರ್ ಆದಂ ಮಾತನಾಡಿದರು. ಈವತ್ತಿನ ಸ್ಥಿತಿಗೆ ನಾವೆಲ್ಲರೂ ಕಾರಣರಾಗಿದ್ದೇವೆ. ನಾವು ಸೂಕ್ತ ನಿರ್ಣಯಗಳನ್ನುತೀರ್ಮಾನಗಳನ್ನು ತೆಗೆದುಕೊಳ್ಳದೆ, ನಮ್ಮ ನಮ್ಮಲ್ಲೇ ಜಗಳವಾಡಿದ್ದರಿಂದ ಇಂದು ಸಂಕಷ್ಟ ಎದುರಾಗಿದೆ. ಇನ್ನು ಮುಂದಾದರೂ ನಾವೆಲ್ಲ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ನಿವೃತ್ತ ಸೈನಿಕ ಇಂತಿಯಾಜ್ ಮಾತನಾಡಿ, ಸೈನಿಕ ತ್ಯಾಗಬಲಿದಾನಗಳನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದವರು ಅಧಿಕಾರದ ಗದ್ದುಗೆ ಏರುತ್ತಿದ್ದಂತೆಯೇ ನಮ್ಮನ್ನು ಮರೆತರು. ಪ್ರತಿಭಟನೆ ಮಾಡಿದೆವು. ನಮ್ಮ ಕೂಗು ಅವರಿಗೆ ಮುಟ್ಟಲಿಲ್ಲ. ನಾವು ಇಂದು ಅನುಭವಿಸುತ್ತಿರುವ ಸಂಕಟವನ್ನು ನಿವಾರಿಸಿಕೊಳ್ಳಲು ನಾವೇ ತೀರ್ಮಾನ ಮಾಡಬೇಕಾದ ಕಾಲ ಬಂದಿದೆ ಎಂದು ಹೇಳಿದರು.

ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಪ್ ಮಾತನಾಡಿ, ಕುವೆಂಪು ವಿಚಾರಗಳು ಮತ್ತು ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಉಳಿಸಬೇಕಾಗಿದೆ ಎಂದರು. ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಸತ್ತಂತಿಹರನು ಬಡಿದೆಚ್ಚರಿಸು, ಕಚ್ಚಾಡುವರನು ಕೂಡಿಸಿ ಒಲಿಸು, ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು, ಒಟ್ಟಿಗೆ ಬಾಳುವ ತೆರದಲಿ ಹರಸು ಎಂದು ಹೇಳಿ ಅದರ ವಿವರಣೆ ನೀಡಿದರು. ಜನ ಸತ್ತಂತಿದ್ದಾರೆ. ಅವರನ್ನು ಎಚ್ಚಿಸಬೇಕಾಗಿದೆ. ಮತ ನೀಡುವ ಸಮಯದಲ್ಲಿ ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಆಯೋಜಕ ಡಾ.ಮುರಳೀಧರ್ ಮಾತನಾಡಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಎಲ್ಲ ಧರ್ಮೀಯರು, ಜಾತಿಯ ಮುಖಂಡರು ಒಂದೇ ವೇದಿಕೆಗೆ ಬಂದಿರುವುದು ತುಂಬಾ ಸಂತೋಷದ ಸಂಗತಿ. ಇದು ಅಪರೂಪದ ಕಾರ್ಯಕ್ರಮ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು. ಎಲ್ಲರೂ ಒಟ್ಟಿಗೆ ಸೇರಿ ಊಟ ಮಾಡಿರುವುದು ಸಂತಸವನ್ನು ಉಂಟು ಮಾಡಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನಪರ ಚಿಂತಕ ಕೆ.ದೊರೈರಾಜು ಮಾತನಾಡಿ ಸಂವಿಧಾನವನ್ನು ಎಲ್ಲರೂ ಓದಬೇಕು. ಆ ಕುರಿತು ಸಣ್ಣಸಣ್ಣ ಗುಂಪುಗಳ ನಡುವೆ ಚರ್ಚೆ ಮಾಡಬೇಕು. ಕುವೆಂಪು ಮತ್ತು ಸಂವಿಧಾನದ ಆಶಯಗಳು ಒಂದೇ ಆಗಿವೆ. ಸರ್ವಜನಾಂಗದ ಶಾಂತಿಯ ತೋಟವಾಗಬೇಕು ನಮ್ಮ ಸಮಾಜ. ನಾವೆಲ್ಲರೂ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಸಮಾಜ ವಿಭಜಕ ಶಕ್ತಿಗಳ ಬಗ್ಗೆ ಎಚ್ಚರದೀಂದ ಇರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಇಬಿ ನಾಗರಾಜು ಉಪನ್ಯಾಸಕ ಜಯಶೀಲ, ನರಸಿಂಹಯ್ಯ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...