Homeಅಂತರಾಷ್ಟ್ರೀಯ‘ಎಂದೆಂದಿಗೂ ನೀ ಕನ್ನಡವಾಗಿರು’; ಕೆನಡಾದ ಸಂಸತ್ತಿನಲ್ಲಿ ಮೊಳಗಿದ ರಾಷ್ಟ್ರಕವಿ ಕುವೆಂಪು ಗೀತೆ!

‘ಎಂದೆಂದಿಗೂ ನೀ ಕನ್ನಡವಾಗಿರು’; ಕೆನಡಾದ ಸಂಸತ್ತಿನಲ್ಲಿ ಮೊಳಗಿದ ರಾಷ್ಟ್ರಕವಿ ಕುವೆಂಪು ಗೀತೆ!

- Advertisement -
- Advertisement -

‘ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು’ ಎಂಬ ರಾಷ್ಟ್ರಕವಿ ಕುವೆಂಪು ಅವರ ಗೀತೆಯನ್ನು ಕೆನಡಾದ ಸಂಸತ್ತಿನಲ್ಲಿ ಮೊಳಗಿಸಲಾಗಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಂದ್ರ ಆರ್ಯ ಅವರು ಕೆನಡಾದಲ್ಲಿ ಸಂಸತ್‌ ಸದಸ್ಯರಾಗಿದ್ದು, ಅವರು ಗುರುವಾರ ಸಂಸತ್ತಿನಲ್ಲಿ ತಮ್ಮ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದಾರೆ.

ಹೌಸ್ ಆಫ್ ಕಾಮನ್ಸ್‌ನಲ್ಲಿ ನೇಪಿಯನ್ ಚುನಾವಣಾ ಜಿಲ್ಲೆಯನ್ನು ಪ್ರತಿನಿಧಿಸುವ ಆರ್ಯ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. “ನಾನು ಕೆನಡಾದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ (ಮೊದಲ ಭಾಷೆ) ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗೆ ಜಗತ್ತಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು” ಎಂದು ಅವರು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟ್ವೀಟ್‌ ಮಾಡಿದ ವಿಡಿಯೊದಲ್ಲಿ ಅವರು, “ಮಾನ್ಯ ಸಭಾಪತಿ ಕೆನಡಾ ಸಂಸತ್ತಿನಲ್ಲಿ ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಾಡದ ಸಂಸತ್‌ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು ಸುಮಾರು ಐದು ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ” ಎಂದು ಅವರು ಹೇಳಿದ್ದಾರೆ.

“ಕೆನಡಾ ದೇಶದ ಕನ್ನಡಿಗರು 2018 ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ‘ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ರಾಷ್ಟ್ರ ಕವಿ ಕುವೆಂಪು ಬರೆದಿರುವ ಮತ್ತು ನಟಸಾರ್ವಭೌಮ ಡಾ. ರಾಜ್‌ಕುಮಾರ್‌ ಹಾಡಿರುವ ಭಾವಗೀತೆಯ ಕೆಲವು ಪದಗಳೊಂದಿಗೆ ನನ್ನ ಹೇಳಿಕೆಯನ್ನು ಮುಗಿಸುತ್ತಿದ್ದೇನೆ. ‘ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು’. ಧನ್ಯವಾದಗಳು ಸಭಾಪತಿಗಳೇ” ಎಂದು ಅವರು ತಮ್ಮ ಮಾತನ್ನು ಮುಗಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಭಾಷೆಯ ಕಲ್ಪನೆ ಮತ್ತು ಕನ್ನಡದ ಅಸ್ಮಿತೆ

ಕರ್ನಾಟಕದ ತುಮಕೂರು ಜಿಲ್ಲೆಯವರಾದ ಆರ್ಯ ಅವರು 2019 ರ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಲಿಬರಲ್ ಪಾರ್ಟಿಯಿಂದ ಮರು ಆಯ್ಕೆಯಾಗಿದ್ದಾರೆ. ಅವರು ರಾಮನಗರದಿಂದ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಮತ್ತು ಕರ್ನಾಟಕದ ಧಾರವಾಡದಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಅವರು ರಾಜಕೀಯ ಪ್ರವೇಶಿಸುವ ಮೊದಲು ಅವರು ಉನ್ನತ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಒಟ್ಟಾವಾ ಕ್ಯಾಥೋಲಿಕ್ ಸ್ಕೂಲ್ ಬೋರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ಅವರ ಪತ್ನಿ ಸಂಗೀತಾ ಅವರೊಂದಿಗೆ ಅವರು ನೇಪಿಯನ್‌ನಲ್ಲಿ ವಾಸಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...