Homeಚಳವಳಿಕಾರ್ಮಿಕ ಹೋರಾಟ | ಮೇ 20ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ನಿರ್ಧಾರ

ಕಾರ್ಮಿಕ ಹೋರಾಟ | ಮೇ 20ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ನಿರ್ಧಾರ

- Advertisement -
- Advertisement -

ಕೇಂದ್ರ ಕಾರ್ಮಿಕ ಸಂಘಗಳು, ಸ್ವತಂತ್ರ ವಲಯ ಒಕ್ಕೂಟಗಳು ಮತ್ತು ಸಂಘಗಳ ವೇದಿಕೆಯು ಮೇ 20 ರಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ. ಉದ್ದೇಶಿತ ಮುಷ್ಕರಕ್ಕೂ ಮೊದಲು ದೇಶಾದ್ಯಂತ ಎರಡು ತಿಂಗಳ ಕಾಲದ ಪ್ರಚಾರ ಅಭಿಯಾನವನ್ನು ನಡೆಸಲು ದೇಶದ ಕಾರ್ಮಿಕರಿಗೆ ಕರೆ ನೀಡಿದೆ. ಮಾರ್ಚ್ 18ರ ಗುರುವಾರ ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಮಿಕರ ರಾಷ್ಟ್ರೀಯ ಸಮಾವೇಶದಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಗಿತ್ತು. ಕಾರ್ಮಿಕ ಹೋರಾಟ

ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದು ಮಾಡಬೇಕು, ಭಾರತೀಯ ಕಾರ್ಮಿಕ ಸಮ್ಮೇಳನ(ಐಎಲ್‍ಸಿ)ವನ್ನು ಆಯೋಜಿಸಬೇಕು ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳ ಮತ್ತು ಸಾರ್ವಜನಿಕ ಸೇವೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು ಎಂದು ದೆಹಲಿಯ ಸಮಾವೇಶ ಆಗ್ರಹಿಸಿದೆ. ದೇಶದ ಹೆಚ್ಚಿನ ಎಲ್ಲಾ ವಲಯದ ಕಾರ್ಮಿಕ ಮುಖಂಡರು ಮತ್ತು ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು. ಕಾರ್ಮಿಕ ಹೋರಾಟ

ಬಿಜೆಪಿ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಜನ ವಿರೋಧಿ ನೀತಿಗಳ ವಿರುದ್ಧದ ಪ್ರತಿರೋಧದಲ್ಲಿ ಒಗ್ಗಟ್ಟಿನ ಪ್ರದರ್ಶನಕ್ಕಾಗಿ ನವದೆಹಲಿಯ ಪ್ಯಾರೆಲಾಲ್ ಭವನದಲ್ಲಿ ಎಲ್ಲಾ ರಾಜ್ಯಗಳ ಎಲ್ಲಾ ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಮತ್ತು ವಲಯ ಒಕ್ಕೂಟಗಳ ಪ್ರತಿನಿಧಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದರು.

ಕಾರ್ಮಿಕ ಸಂಘಟನೆಗಳು ಸತತವಾಗಿ ಎತ್ತುತ್ತಿರುವ ಬೇಡಿಕೆಗಳಿಗೆ ಒಂದು ದಶಕಕ್ಕೂ ಹೆಚ್ಚು ಕಾಲ ಉದ್ದೇಶಪೂರ್ವಕವಾಗಿ ಕಿವಿಗೊಡದಿರುವ ಕೇಂದ್ರ ಸರಕಾರದ ನಡೆಗೆ ಖಂಡಿಸಿದ ಕಾರ್ಮಿಕ ಸಂಘಟನೆಗಳು, ಸರಕಾರದ ಇಂತಹ ನೀತಿಗಳ ವಿರುದ್ಧ ಸಾಮೂಹಿಕವಾಗಿ ತಿರಸ್ಕಾರ ವ್ಯಕ್ತಪಡಿಸಿದವು. ಜೊತೆಗೆ ಮೇ 20, 2025 ರಂದು ಒಂದು ದಿನದ ರಾಷ್ಟ್ರೀಯ ಮುಷ್ಕರಕ್ಕಾಗಿ ಕರೆ ನೀಡಲಾಗಿದೆ ಎಂದು ಸಭೆಯ ನಂತರ ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ನೀಡಿದ ಹೇಳಿಕೆಯಲ್ಲಿ ತಿಳಿಸಿವೆ.

ಸರ್ಕಾರದ ಸವಾಲನ್ನು ಸ್ವೀಕರಿಸಲು ದುಡಿಯುವ ಜನರು ಸಿದ್ಧರಾಗಬೇಕು ಎಂದು ಕರೆ ನೀಡಿರುವ ಸಮಾವೇಶವು, ಮೇ 20 ಕಾರ್ಮಿಕರು ಮತ್ತು ರೈತರ ರಾಷ್ಟ್ರವ್ಯಾಪಿ ನಿರ್ಣಾಯಕ ಹೋರಾಟಗಳ ಸರಣಿಗೆ ಚಾಲನೆ ನೀಡುವ ವೇದಿಕೆಯಾಗಲಿದೆ, ಶೋಷಣೆ, ಆಳವಾಗುತ್ತಿರುವ ಆದಾಯ ಅಸಮಾನತೆ, ಸಾಂವಿಧಾನಿಕ ಹಕ್ಕುಗಳ ನಿರಾಕರಣೆ ಮತ್ತು ಭಾರತದ ಜನರ ಮೇಲೆ ಆಗುತ್ತಿರುವ ಒಟ್ಟಾರೆ ಅನ್ಯಾಯವನ್ನು ಹೊಸ ಶಕ್ತಿಯಿಂದ ಎದುರಿಸಲಾಗುವುದು ಎಂದು ಸಾರಿದೆ.

ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವ ತನ್ನ ಬಹುದಿನಗಳ ಆಗ್ರಹವನ್ನು ಪುನರುಚ್ಚರಿಸುವುದರ ಜೊತೆಗೆ, ತನ್ನ 17 ಅಂಶಗಳ ಆಗ್ರಹಗಳ ಪಟ್ಟಿಯನ್ನು ಕಾರ್ಮಿಕರ ರಾಷ್ಟ್ರೀಯ ಸಮಾವೇಶದ ಘೋಷಣೆಯು ಪುನರುಚ್ಚರಿಸಿದೆ. ಅಲ್ಲದೆ ನವ ಉದಾರವಾದದ ವಿನಾಶಕಾರಿ ನೀತಿಗಳಿಗೆ ಪರ್ಯಾಯವನ್ನು ಸಹ ಸೂಚಿಸಿದ ಸಮಾವೇಶವು ಧರ್ಮ, ಪ್ರದೇಶ, ಜಾತಿ, ಸಂಸ್ಕೃತಿ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ಕಾರ್ಮಿಕರನ್ನು ವಿಭಜಿಸುವ ಎನ್‍ಡಿಎ ಸರ್ಕಾರದ ಎಲ್ಲಾ ಕೆಟ್ಟ ಪ್ರಯತ್ನಗಳನ್ನು ವಿಫಲಗೊಳಿಸುವುದಾಗಿಯೂ ಸಾರಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೇಸರಿ ಬಟ್ಟೆಯಲ್ಲಿ ಕಡತ ಸಾಗಣೆ ಆರೋಪ: ಉಪವಾಸ ನಿರತ ಸರ್ಕಾರಿ ಮುಸ್ಲಿಂ ಸಿಬ್ಬಂದಿ ಬೆನ್ನಟ್ಟಿ ಮಾರಾಣಾಂತಿಕ ಹಲ್ಲೆ; ವೀಡಿಯೋ ವೈರಲ್

ಕೇಸರಿ ಬಟ್ಟೆಯಲ್ಲಿ ಕಡತ ಸಾಗಣೆ ಆರೋಪ: ಉಪವಾಸ ನಿರತ ಸರ್ಕಾರಿ ಮುಸ್ಲಿಂ ಸಿಬ್ಬಂದಿ ಬೆನ್ನಟ್ಟಿ ಮಾರಾಣಾಂತಿಕ ಹಲ್ಲೆ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...