Homeಕರ್ನಾಟಕಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

ಮಂಗಳೂರು| ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ : ಸಿಪಿಎಂ

- Advertisement -
ಮಂಗಳೂರು: ಕೋಮು ಹಿಂಸಾಚಾರದ ಘಟನೆಗಳ ಹಿನ್ನಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ತರುವಾಯ ಉಸ್ತುವಾರಿ ಸಚಿವರ ಸಮ್ಮುಖ ಗೃಹ ಸಚಿವ ಜಿ ಪರಮೇಶ್ವರ್ ಕರಾವಳಿ ಜಿಲ್ಲೆಯಲ್ಲಿ ಕೋಮುಶಕ್ತಿಗಳ ನಿಗ್ರಹಕ್ಕೆ ಸರಕಾರ ಕೈಗೊಳ್ಳುವ ಕ್ರಮಗಳ ಕುರಿತು ನೀಡಿರುವ ಹೇಳಿಕೆ ವಿಶ್ವಾಸಾರ್ಹತೆಯ ಕೊರತೆಯನ್ನು ಹೊಂದಿದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಹೇಳಿದೆ.
ನಕ್ಸಲ್ ನಿಗ್ರಹ ದಳದ ಮಾದರಿಯಲ್ಲಿ ‘ಕೋಮುವಾದಿ ವಿರೋಧಿ ಕಾರ್ಯ ಪಡೆ’ ಸ್ಥಾಪಿಸುವ ಕುರಿತು ಜಿ ಪರಮೇಶ್ವರ್ ಹೇಳಿಕೆ ಪ್ರಾಯೋಗಿಕವಾಗಿ ಸಾಧ್ಯಗೊಳ್ಳುವುದು ಕಷ್ಟ ಸಾಧ್ಯ. ಇದು ನಕಾರಾತ್ಮಕ ಫಲಿತಾಂಶಕ್ಕೂ ಕಾರಣವಾಗುವ ಸಾಧ್ಯತೆ ಇದೆ. ಕೋಮುವಾದ, ಕೋಮು ಶಕ್ತಿಗಳನ್ನು ನಿಗ್ರಹಿಸುವುದು ಪೊಲೀಸರಿಂದ ಮಾತ್ರ ಸಾಧ್ಯ ಆಗುವ ಸಂಗತಿ ಅಲ್ಲ. ಅದು ಬಹಳ ದೀರ್ಘಕಾಲದಿಂದ ಸಂಘಟನಾತ್ಮಕವಾಗಿ ಕಟ್ಟಿ ಬೆಳೆಸಿದ ಒಂದು ಸೈದ್ದಾಂತಿಕ ವ್ಯವಸ್ಥೆ‌. ಇದರ ವಿರುದ್ಧದ ಹೋರಾಟ ಅಂದರೆ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಕ್ಷೇತ್ರಗಳಲ್ಲಿ ಪರ್ಯಾಯ ಕಾರ್ಯಕ್ರಮಗಳನ್ನು ಇಟ್ಟು ಕೊಂಡು ದುಡಿಯುವುದು. ಕೋಮುವಾದಿ ಶಕ್ತಿಗಳ ಎದುರು ಸಣ್ಣ ಪುಟ್ಟ ಪ್ರತಿರೋಧಗಳಿಗೂ ಸಿದ್ದರಿಲ್ಲದ ಕಾಂಗ್ರೆಸ್ ಸರಕಾರ ಕೋಮುವಾದಿ ನಿಗ್ರಹ ಕಾರ್ಯಪಡೆ ಹೇಳಿಕೆಯನ್ನು ಕಾರ್ಯರೂಪಕ್ಕೆ ತರುವುದು ನಂಬಲು ಕಷ್ಟವಾಗುವ ಸಂಗತಿ. ಇದೇ ಗೃಹ ಸಚಿವರು ವರ್ಷದ ಹಿಂದೆ ರಚಿಸಿದ ಯಾಂಟಿ ಮೋರಲ್ ಪೊಲೀಸ್ ವಿಂಗ್ ಕಾರ್ಯಾಚರಣೆಗೆ ಇಳಿಯುವ ಮುನ್ನವೆ ಅಸ್ಥಿತ್ವ ಕಳೆದು ಕೊಂಡಿರುವ ಅನುಭವ ಇರುವಾಗ ಸಚಿವರ ಮಾತು ಜನತೆಯಲ್ಲಿ ವಿಶ್ವಾಸ ಮೂಡಿಸುತ್ತಿಲ್ಲ, ಕ್ರಿಮಿನಲ್ ಹಿನ್ನಲೆಯ ದ್ವೇಷ ಭಾಷಣಕಾರರು, ರೌಡಿಗಳ ಮೇಲೆ ಕ್ರಮ ಕೈಗೊಳ್ಳಲು ಸತತವಾಗಿ ಹಿಂಜರಿದ ಸರಕಾರ ಈಗ ಏಕಾಏಕಿ ದ್ವೇಷ ಭಾಷಣ ಮಾಡುವವರನ್ನು ಮುಲಾಜಿಲ್ಲದೆ ಹೆಡೆಮುರಿ ಕಟ್ಟುತ್ತೇವೆ ಎಂಬ ಮಾತು ಉತ್ತರ ಕುಮಾರನ ಪೌರುಷ ರೀತಿ ಕಾಣಿಸುತ್ತದೆ ಎಂದು ಸಿಪಿಐಎಂ ಹೇಳಿದೆ.
ಕೋಮುವಾದ ಅಳವಾಗಿ ಬೇರೂರಿರುವ ಕರಾವಳಿ ಜಿಲ್ಲೆಗಳ ಕುರಿತು ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ತಕ್ಷಣವೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ಪೊಲೀಸ್ ಇಲಾಖೆ ಮಾತ್ರ ವಲ್ಲದೆ, ಶಿಕ್ಷಣ, ವಿವಿ, ಸೇರಿದಂತೆ ಎಲ್ಲಾ ಇಲಖೆಗಳಿಗೆ ಪ್ರಜ್ಞಾಪೂರ್ವಕ ನೇಮಕಾತಿ, ವಿಶೇಷ ಕಾರ್ಯಕ್ರಮಗಳನ್ನು ಯೋಜಿಸಬೇಕಿತ್ತು. ಆ ಕುರಿತು ಸಿಪಿಐಎಂ ಪಕ್ಷ ಹಾಗೂ ವಿವಿಧ ಜನ ಚಳವಳಿಗಳು ರಾಜ್ಯ ಸರಕಾರದ ಗಮನ ಸೆಳೆದಿತ್ತು. ಆದರೆ, ಈ ಕುರಿತು ಸಣ್ಣ ಕ್ರಮಗಳನ್ನೂ ಕೈಗೊಳ್ಳದೆ ಆನೆ ನಡೆದದ್ದೆ ದಾರಿ ಎಂಬಂತೆ ವರ್ತಿಸಿದ ಕಾಂಗ್ರೆಸ್ ಸರಕಾರ ಹಾಗೂ ಅದರ ನಾಯಕತ್ವ ಈಗ ಖೆಡ್ಡಾಕ್ಕೆ ಉರುಳಿದೆ ಎಂದು ಸಿಪಿಐಎಂ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಉಸ್ತುವಾರಿ ಹಾಗೂ ಗೃಹ ಸಚಿವರ ವೀರಾವೇಶದ ಮಾತುಗಳು ಯಾರಲ್ಲೂ ವಿಶ್ವಾಸ ಮೂಡಿಸುತ್ತಿಲ್ಲ ಎಂದು ಸಿಪಿಐಂ ದ.ಕ. ಜಿಲ್ಲಾ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.
ಕುಡುಪು ಮಾಬ್ ಲಿಂಚಿಂಗ್ ಪ್ರಕರಣದ ಎಸ್ಐಟಿ ತನಿಖೆ, ತಪ್ಪಿತಸ್ಥ ಪೊಲೀಸ್ ಕಮೀಷನರ್ ಮೇಲಿನ ಕ್ರಮಗಳನ್ನು ಜರುಗಿಸುವ ಕುರಿತು ಗೃಹ ಸಚಿವರು ಏನನ್ನೂ ಹೇಳದೆ, ತಿಪ್ಪೆ ಸಾರಿಸುವ ಮಾತುಗಳನ್ನಷ್ಟೆ ಆಡಿದ್ದಾರೆ ಎಂದು ಸಿಪಿಐಎಂ ನಿರಾಶೆ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...