Homeಕರೋನಾ ತಲ್ಲಣಬೆಂಗಳೂರಿನಲ್ಲಿ ಉಲ್ಬಣಿಸಿದ ಐಸಿಯು ಬೆಡ್ ಕೊರತೆ

ಬೆಂಗಳೂರಿನಲ್ಲಿ ಉಲ್ಬಣಿಸಿದ ಐಸಿಯು ಬೆಡ್ ಕೊರತೆ

ಅಧಿಕೃತವಾಗಿ, ಬೆಂಗಳೂರು ನಗರದಲ್ಲಿ ಐಸಿಯುನಲ್ಲಿ ದಾಖಲಾಗಿರುವ ಕೋವಿಡ್ -19 ರೋಗಿಗಳ ಸಂಖ್ಯೆ 263.

- Advertisement -
- Advertisement -

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ನಿನ್ನೆ ರಾಜಧಾನಿಯಲ್ಲಿ ಮೂರು ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದಾರೆ. ಆದರೂ ಕೂಡ ಸರ್ಕಾರ ಐಸಿಯು ಮತ್ತು ಐಸಿಯು ವೆಂಟಿಲೇಟರ್‌ಗಳ ಕೊರತೆಯನ್ನು ನೀಗಿಸಲಾಗಿಲ್ಲ.

ಬೆಡ್‌ಗಳ ಕೊರತೆ ಶುರುವಾಗಿ ಐದು ದಿನಗಳಾದರೂ ಈವರೆಗೆ ಬಿಬಿಎಂಪಿ ಯಾವುದೆ ಕ್ರಮ ಕೈಗೊಂಡಿಲ್ಲ. ಬೆಡ್ ಇಲ್ಲದ ಕಾರಣ 46 ವರ್ಷದ ಸೋಂಕಿತ ವ್ಯಕ್ತಿಬಲಿಯಾಗಿದ್ದಾರೆ. ರೋಗಿಯನ್ನು ಬೊಮ್ಮನಹಳ್ಳಿಯ ಖಾಸಗಿ ಆಸ್ಪತ್ರೆಗೆ ಸರ್ಕಾರಿ ಕೋಟ ಅಡಿಯಲ್ಲಿ ಕಳುಹಿಸಲಾಗಿತ್ತು.

ಇದನ್ನೂ ಓದಿ: ನೀವು ಲೆಕ್ಕ ಹಾಕಿಲ್ಲದಿದ್ದರಿಂದ ಯಾರು ಮೃತಪಟ್ಟಿಲ್ಲವೆ? ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಆದರೆ, ರಾತ್ರಿ ಅವರ ಪರಿಸ್ಥಿತಿ ಹದಗೆಟ್ಟರೂ ಆಸ್ಪತ್ರೆ ಸಿಬ್ಬಂದಿ ಭಯದಿಂದ ರೋಗಿಯನ್ನು ದೂರವೇ ಇಟ್ಟಿದ್ದಾರೆ. ರೋಗಿಯ ಆಕ್ಸಿಜನ್ ಲೆವೆಲ್ 40% ಗೆ ಇದ್ದರೂ ಆಸ್ಪತ್ರೆ ಬೆಡ್ ವ್ಯವಸ್ಥೆ ಮಾಡಲಿಲ್ಲ. ಬದಲಾಗಿ ಆಪೊಲೋ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿದರು. ಆದರೆ ಮಾರ್ಗ ಮಧ್ಯೆಯೇ ರೋಗಿ ಸಾವನ್ನಪ್ಪಿದ್ದಾರೆ ಎಂದು ಮರ್ಸಿ ಏಂಜಲ್ಸ್ ಎಂಬ ಎನ್‌ಜಿಒದ ತೌಸೀಫ್ ಅಹ್ಮದ್ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳನ್ನು ಸರಿಯಾಗಿ ಅಂದಾಜು ಮಾಡಿಲ್ಲ. ಹಾಗಾಗಿ ನಾವು ಬೆಡ್‌ಗಳ ಸಮಸ್ಯೆ ಎದುರಿಸುತ್ತಿದ್ದೇವೆ. ಅವರಿಗೆ ಒದಗಿಸಿರುವ ಅಂಕಿ ಅಂಶಗಳು ಬೋಗಸ್ ಎಂದು ಹೆಸರು ಹೇಳಲು ಇಚ್ಛಿಸದ ಬಿಬಿಎಂಪಿಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್ ಹೇಳಿದೆ.

ಸರ್ಕಾರದ ಮಾಹಿತಿಯ ಪ್ರಕಾರ, ನಗರದ ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ 144 ಐಸಿಯು ವೆಂಟಿಲೇಟರ್ ಹಾಸಿಗೆಗಳಿವೆ, ಜೊತೆಗೆ ಖಾಸಗಿ ಆಸ್ಪತ್ರೆಗಳು ಅಥವಾ ವೈದ್ಯಕೀಯ ಕಾಲೇಜುಗಳಲ್ಲಿ 418 ಹಾಸಿಗೆಗಳಿವೆ. ಆದರೆ, ಕೊರೊನಾ ರೋಗಿಗಳಿಗೆ ಮಾತ್ರ ಹಾಸಿಗೆಗಳು ಸಿಗುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಉಮರ್ ಖಾಲಿದ್ ಮತ್ತು ಕೆ.ಎಲ್.ಅಶೋಕ್: ನಮ್ಮ ಕಣ್ಣೆದುರಿಗಿನ ಸತ್ಯವೊಂದನ್ನು ಚರ್ಚಿಸೋಣ.

ಆದರೆ, ಅಧಿಕೃತವಾಗಿ, ನಗರದಲ್ಲಿ ಐಸಿಯುನಲ್ಲಿ ದಾಖಲಾಗಿರುವ ಕೋವಿಡ್ -19 ರೋಗಿಗಳು 263 ಮಾತ್ರ. ಇದು 46.7% ರಷ್ಟು. ಅಧಿಕಾರಿಗಳು ಮತ್ತು ಸ್ವಯಂ ಸೇವಕರು‌ ಹೇಳುವಂತೆ ಖಾಸಗಿ ಕೋಟಾ ರೋಗಿಗಳು ಅನೇಕ ಹಾಸಿಗೆಗಳನ್ನು ಬಳಸುತ್ತಿದ್ದಾರೆ ಎನ್ನುತ್ತಾರೆ.

ಐಸಿಯು ಬೆಡ್ ಕೊರತೆ ಬಗ್ಗೆ ಕುರಿತು ಮಾತನಾಡಿದ ಹಿರಿಯ ಬಿಬಿಎಂಪಿ ಅಧಿಕಾರಿಯೊಬ್ಬರು, ಆಸ್ಪತ್ರೆಗೆ ಕಳುಹಿಸಬೇಕಿದ್ದ ಅನೇಕ ಕೊರೊನಾ ಸೋಂಕಿತರನ್ನು ಮನೆಗಳಿಗೆ ಕಳುಹಿಸಲಾಯಿತು. ಹೀಗಾಗಿ ಅನೇಕ ರೋಗಿಗಳು ಗಂಭೀರ ಪರಿಸ್ಥಿತಿಯಲ್ಲಿದ್ದು, ಐಸಿಯು ಬೆಡ್‌ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ ಎಂದಿದ್ದಾರೆ.

ಜೊತೆಗೆ ವೈದ್ಯಕೀಯ ಮೂಲಸೌಕರ್ಯಗಳು ದುರ್ಬಲವಾಗಿರುವ ಸುತ್ತಮುತ್ತಲಿನ ಜಿಲ್ಲೆಗಳ ಜನರು ಸಹ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದು ಕೂಡ ಬೆಡ್‌ಗಳ ಕೊರತೆಗೆ ಕಾರಣವಾಗಿದೆ ಎನ್ನಲಾಗಿದೆ.


ಇದನ್ನೂ ಓದಿ: ಒಂದು ರೂ. ದಂಡ ಕಟ್ಟಿ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...