Homeಮುಖಪುಟಡಿಜಿಟಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್‌: ಪತ್ರಕರ್ತರಿಗೆ ವಿನಾಯಿತಿ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದ ಎಡಿಟರ್ಸ್ ಗಿಲ್ಡ್

ಡಿಜಿಟಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್‌: ಪತ್ರಕರ್ತರಿಗೆ ವಿನಾಯಿತಿ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದ ಎಡಿಟರ್ಸ್ ಗಿಲ್ಡ್

- Advertisement -
- Advertisement -

ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್‌ನಲ್ಲಿ ಪತ್ರಕರ್ತರಿಗೆ ವಿನಾಯಿತಿ ಇಲ್ಲದಿರುವುದು ದೇಶದಲ್ಲಿ ಪತ್ರಿಕೋದ್ಯಮವನ್ನು ಸ್ಥಗಿತಗೊಳಿಸುತ್ತದೆ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ತಿಳಿಸಿದೆ.

ಕೇಂದ್ರಕ್ಕೆ ಕಳುಹಿಸಿದ ಪತ್ರವನ್ನು ಭಾನುವಾರ ಗಿಲ್ಡ್ ಸಾರ್ವಜನಿಕಗೊಳಿಸಿದ್ದು, ಆಗಸ್ಟ್‌ನಲ್ಲಿ ಸಂಸತ್ತು ಅಂಗೀಕರಿಸಿದ ಕಾಯಿದೆಯು ನಾಗರಿಕರ ದತ್ತಾಂಶಗಳ ಸಂಗ್ರಹಣೆ ಮತ್ತು ಪ್ರಕ್ರಿಯೆಗೆ ಸಂಬಂಧಿಸಿ ಖಾಸಗಿ ಮತ್ತು ಸರ್ಕಾರಿ ಘಟಕಗಳ ಮೇಲೆ ನಿರ್ಬಂಧಗಳನ್ನು ವಿಧಿಸುತ್ತದೆ. ವ್ಯಕ್ತಿಗಳ ಡಿಜಿಟಲ್ ಡೇಟಾವನ್ನು ದುರುಪಯೋಗಪಡಿಸಿಕೊಳ್ಳುವ ಅಥವಾ ರಕ್ಷಿಸಲು ವಿಫಲವಾದ ಘಟಕಗಳ ಮೇಲೆ 250 ಕೋಟಿ ರೂಪಾಯಿಗಳವರೆಗೆ ದಂಡವನ್ನು ಇದು ಪ್ರಸ್ತಾಪಿಸುತ್ತದೆ.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ಈ ಕಾಯಿದೆಯಲ್ಲಿ ಪತ್ರಕರ್ತರಿಗೆ ವಿನಾಯಿತಿ ನೀಡದ ಕಾರಣ ಮತ್ತು ಪತ್ರಿಕೋದ್ಯಮ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ನಿಬಂಧನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ನಿರ್ದಿಷ್ಟವಾಗಿ, ತಮ್ಮ ಪತ್ರಿಕೋದ್ಯಮ ಚಟುವಟಿಕೆಗಳಿಗೆ ಯಾವುದೇ ವೈಯಕ್ತಿಕ ಡೇಟಾವನ್ನು ಉಪಯೋಗಿಸುವುದು ಡಿಪಿಡಿಪಿಎ [ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆಕ್ಟ್, 2023] ಸೆಕ್ಷನ್ 7ರ ಅಡಿಯಲ್ಲಿ ಒಪ್ಪಿಗೆ ಪಡೆದುಕೊಳ್ಳಬೇಕಾದ ಅಗತ್ಯತೆಯ ಬಗ್ಗೆ ಗಿಲ್ಡ್ ಕಳವಳ ವ್ಯಕ್ತಪಡಿಸಿದೆ ಎಂದು ಹೇಳಿಕೊಂಡಿದೆ. ಪತ್ರಿಕೋದ್ಯಮ ಚಟುವಟಿಕೆಗಳಿಗೆ ಯಾವುದೇ ವಿನಾಯಿತಿ ಇಲ್ಲದಿರುವುದು ಪತ್ರಕರ್ತರು ತಮ್ಮ ಕೆಲಸದ ಸಂದರ್ಭದಲ್ಲಿ ಯಾವುದೇ ವೈಯಕ್ತಿಕ ಡೇಟಾವನ್ನು ಬಹಿರಂಗಗೊಳಿಸಲು ಒಪ್ಪಿಗೆಯ ಮೇಲೆ ಅವಲಂಬಿತರಾಗಬೇಕಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಒಪ್ಪಿಗೆಯ ನಿರಾಕರಣೆಯು ಪತ್ರಿಕಾ ಮಾಧ್ಯಮದ ಮೂಲಭೂತ ಪಾತ್ರ ಹಾಗು ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಖಚಿತಪಡಿಸುವ ಅದರ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಗಿಲ್ಡ್ ಹೇಳಿಕೊಂಡಿದೆ.

ತನಿಖಾ ಪತ್ರಿಕೋದ್ಯಮ, ಸಾಮಾನ್ಯ ಸುದ್ದಿ ವರದಿ, ಅಭಿಪ್ರಾಯ ಮತ್ತು ವಿಶ್ಲೇಷಣೆ, ಖಾಸಗಿ ಸಂಶೋಧನೆ  ತನಿಖಾ ಅಧ್ಯಯನ ಡೇಟಾ ಮೇಲೆ ಹೆಚ್ಚಾಗಿ ಅವಲಂಬಿತವಾಗಿವೆ. ಇದನ್ನು ಕಾನೂನುಬದ್ಧ ಬಳಕೆಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದ್ದು, ಪತ್ರಕರ್ತರಿಗೆ ಕಾನೂನಿನಲ್ಲಿ ವಿನಾಯಿತಿ ನೀಡಬೇಕು. ಈ ವಿನಾಯಿತಿಯು ನಿರ್ದಿಷ್ಟವಾಗಿ ಸಮರ್ಥನೆಯಾಗಿದೆ, ಇಲ್ಲವಾದಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಮತ್ತು ಪತ್ರಕರ್ತರ ಕರ್ತವ್ಯದ ಹಕ್ಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕೇಂದ್ರ ಸರಕಾರವನ್ನು ಒತ್ತಾಯಿಸಿದೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ-2024: ಕುಗ್ಗಿದ ಮೋದಿ ವರ್ಚಸ್ಸು

0
2014 ಮತ್ತು, 2019ರ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ 2024ರಲ್ಲಿ ದೇಶದಲ್ಲಿ ಮೋದಿ ವರ್ಚಸ್ಸು ಕಡಿಮೆಯಾಗಿದೆ. ಈ ಬಾರಿ ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ, ಮೋದಿ ಕುರಿತು ನಿರೂಪಣೆಯಲ್ಲಿ ಬದಲಾವಣೆ ಇದೆ, ಜನರಲ್ಲಿ ಮೋದಿ...